ಅಜಿತ್ ಪವಾರ್‌ಗೆ ಮೋದಿ, ಡಿಕೆಶಿ ಸೇರಿ ರಾಜಕೀಯ ಗಣ್ಯರ ಸಂತಾಪ

ಬಾರಾಮತಿಯಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ನಿಧನರಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್‌ಗೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಪ್ರಧಾನಿ ಮೋದಿ ಟ್ವೀಟ್!
ಮಹಾರಾಷ್ಟ್ರದ ಬಾರಾಮತಿಯಲ್ಲಿ ಸಂಭವಿಸಿದ ದುರಂತ ವಿಮಾನ ಅಪಘಾತಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ. ಅಪಘಾತದಲ್ಲಿ ಪ್ರಾಣಕಳೆದುಕೊಂಡ ಎಲ್ಲರಿಗೂ ಸಂತಾಪ ಸೂಚಿಸಿದ್ದಾರೆ. ಅಜಿತ್ ಪವಾರ್ ಜನಸಾಮಾನ್ಯರ ಧ್ವನಿ ಆಲಿಸುವ ನಾಯಕರಾಗಿದ್ದರು. ಮಹಾರಾಷ್ಟ್ರದ ಜನರಿಗೆ ಸೇವೆ ಸಲ್ಲಿಸುವಲ್ಲಿ ಅವರ ಕಠಿಣ ಪರಿಶ್ರಮ ವ್ಯಾಪಕವಾಗಿ ನೆನೆಯುವಂತೆ ಮಾಡಿದೆ. ಆಡಳಿತಾತ್ಮಕ ವಿಷಯಗಳ ಬಗ್ಗೆ ಅವರ ತಿಳುವಳಿಕೆ ಮತ್ತು ಬಡವರು ಮತ್ತು ಅಂಚಿನಲ್ಲಿರುವವರ ಸಬಲೀಕರಣದ ಬಗ್ಗೆ ಅವರ ಉತ್ಸಾಹವು ಗಮನಾರ್ಹವಾಗಿತ್ತು. ಅವರ ಅಕಾಲಿಕ ನಿಧನ ತೀವ್ರ ಆಘಾತಕಾರಿ ಮತ್ತು ದುಃಖಕರವಾಗಿದೆ. ಪ್ರಧಾನಿ ಅವರ ಕುಟುಂಬ ಮತ್ತು ಅವರ ಅಸಂಖ್ಯಾತ ಅಭಿಮಾನಿಗಳಿಗೆ ಆ ದೇವರು ಧೈರ್ಯ ಕರುಣಿಸಲಿ ಎಂದು ತಮ್ಮ ಟ್ವೀಟ್ನಲ್ಲಿ ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ: ಮಹಾರಾಷ್ಟ್ರ ಡಿಸಿಎಂ ಪ್ರಯಾಣಿಸುತ್ತಿದ್ದ ವಿಮಾನ ಪತನ – ರಾಜಕೀಯ ಬದುಕು ಕೊಟ್ಟ ಕ್ಷೇತ್ರದಲ್ಲೇ ಅಜಿತ್ ಪವಾರ್ ದುರ್ಮರಣ
ಡಿಕೆ ಶಿವಕುಮಾರ್
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್ ಅವರು ವಿಮಾನ ದುರಂತದಲ್ಲಿ ಸಾವನ್ನಪ್ಪಿರುವ ಸುದ್ದಿ ಆಘಾತ ತಂದಿದ್ದು, ತೀವ್ರ ದುಃಖವಾಗಿದೆ ಎಂದು ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ., ಅವರ ಹಠಾತ್ ನಿಧನವು ಮಹಾರಾಷ್ಟ್ರ ರಾಜಕೀಯಕ್ಕೆ ದೊಡ್ಡ ನಷ್ಟವಾಗಿದೆ. ಅವರ ಕುಟುಂಬ ಮತ್ತು ಬೆಂಬಲಿಗರಿಗೆ ಈ ದುಃಖದ ಸಮಯದಲ್ಲಿ ಶಕ್ತಿಗಾಗಿ ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.
ಹೆಚ್ ಡಿ ಕುಮಾರಸ್ವಾಮಿ
ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ನಿಧನಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಕೂಡ ಸಂತಾಪ ಸೂಚಿಸಿದ್ದಾರೆ. ಬಾರಾಮತಿ ಬಳಿ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಡಿಸಿಎಂ ನಿಧನರಾಗಿದ್ದು, ದೊಡ್ಡ ಆಘಾತವಾಗಿದೆ. ಮಹಾರಾಷ್ಟ್ರದ ಪ್ರಮುಖ ರಾಜಕಾರಣಿ ನಿಧನ ದೊಡ್ಡ ನಷ್ಟವಾಗಿದೆ ಎಂದಿದ್ದಾರೆ.
ಬಸವರಾಜ ಬೊಮ್ಮಾಯಿ
ಇನ್ನೂ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ಸಂತಾಪ ಸೂಚಿಸಿದ್ದು, ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್ ಅವರು ಇಂದು ವಿಮಾನ ಅಪಘಾತದಲ್ಲಿ ಅಕಾಲಿಕ ನಿಧನ ಹೊಂದಿರುವ ಸುದ್ದಿ ಅತ್ಯಂತ ನೋವುಂಟು ಮಾಡಿದೆ. ಮಹಾರಾಷ್ಟ್ರ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಅಜಿತ್ ಪವಾರ ಅವರು, ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಅಭಿವೃದ್ಧಿ ಪರ ಆಡಳಿತ ಬೆಂಬಲಿಸಿ, ಮಹಾರಾಷ್ಟ್ರದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ರಾಜ್ಯದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು

ನೋಡಿರಿ

