ಸರ್ಕಾರಿ ಆಸ್ಪತ್ರೆಯಲ್ಲಿ ಮರಣ ಮೃದಂಗ! – 24 ಗಂಟೆಗಳಲ್ಲಿ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು

ಸರ್ಕಾರಿ ಆಸ್ಪತ್ರೆಯಲ್ಲಿ ಮರಣ ಮೃದಂಗ! – 24 ಗಂಟೆಗಳಲ್ಲಿ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು

ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 12 ನವಜಾತ ಶಿಶುಗಳು, 12 ವಯಸ್ಕರು ಸೇರಿ 24 ಮಂದಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ನಾದೆಂಡ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ.

24 ಜನರ ಸಾವಿಗೆ ಔಷಧಿ ಮತ್ತು ಸಿಬ್ಬಂದಿ ಕೊರತೆಯೇ ಕಾರಣ ಎಂದು ಹೇಳಲಾಗುತ್ತಿದೆ. ಈ ಆಸ್ಪತ್ರೆಗೆ ಹಾವು ಕಡಿತ ಸೇರಿದಂತೆ ವಿವಿಧ ಕಾಯಿಲೆಗಳಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ 24 ಗಂಟೆಯಲ್ಲಿ 24 ಮಂದಿ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರ ಪೈಕಿ 6 ಗಂಡು ಹಾಗೂ 6 ಹೆಣ್ಣು ಶಿಶುಗಳು ಸೇರಿ 12 ನವಜಾತ ಶಿಶುಗಳು ಸಾವನ್ನಪ್ಪಿವೆ ಎಂದು ವರದಿಯಾಗಿದೆ.

ಇದನ್ನೂ ಓದಿ: ನಮ್ಮ ಮೆಟ್ರೊದ ಈ ಮಾರ್ಗದಲ್ಲಿ ಹಳಿತಪ್ಪಿದ ರೀ ರೈಲ್‌ – ಸಂಚಾರದಲ್ಲಿ ಭಾರಿ ವ್ಯತ್ಯಯ

ಇಲ್ಲಿರುವ ಸುತ್ತಮುತ್ತಲಿನ 70-80 ಕಿಮೀ ವ್ಯಾಪ್ತಿಗೆ ಇರುವುದೊಂದೇ ಆಸ್ಪತ್ರೆ. ದೂರದ ಸ್ಥಳಗಳಿಂದ ಇಲ್ಲಿಗೆ ಬರುತ್ತಾರೆ. ಕೆಲವು ದಿನಗಳಿಂದೀಚೆಗೆ ರೋಗಿಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಕೆಲವು ಔಷಧಿಗಳನ್ನು ಸ್ಥಳೀಯವಾಗಿ ಖರೀದಿಸಿ ಪೂರೈಸಬೇಕು, ಆದ್ರೆ ಇವತ್ತು ‌ಅದೂ ಸಾಕಾಗಿಲ್ಲ. ಇದೇ ಸಮಯಕ್ಕೆ ಸಿಬ್ಬಂದಿಯ ಕೊರತೆಯೂ ಉಂಟಾಗಿದ್ದು, ಈ ಘಟನೆಗೆ ಕಾರಣವಾಗಿರಬಹುದು ಎಂದು ಹೇಳಿದ್ದಾರೆ. ಸಾವು ನೋವಿಗೆ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಸಂತಾಪ ಸೂಚಿಸಿದ್ದಾರೆ

Shwetha M