ಎರಡು ವಾರ ಆಡಲ್ಲ ಮಹೇಂದ್ರ ಸಿಂಗ್ ಧೋನಿ – ಥಲಾ ಅಭಿಮಾನಿಗಳಿಗೆ ಆರಂಭದಲ್ಲಿ ನಿರಾಸೆ

ಒಂದು ವರ್ಷದಿಂದ ಕಾಯುತ್ತಿದ್ದ ಸಂತಸದ ಸಮಯ ಬಂದೇ ಬಿಟ್ಟಿದೆ. ಶನಿವಾರದ ಮೊದಲ ಪಂದ್ಯದಲ್ಲಿ ಆರ್ಸಿಬಿ ಮತ್ತು ಎಸ್ಆರ್ಹೆಚ್ ತಂಡಗಳು ಮುಖಾಮುಖಿಯಾಗುತ್ತಿವೆ. ಮಾರ್ಚ್ 30 ರಂದು ನಡೆಯಲಿರುವ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದ ಮೂಲಕ ಸಿಎಸ್ಕೆ ಐಪಿಎಲ್ ಅಭಿಯಾನ ಆರಂಭಿಸಲಿದೆ. ಆದರೆ ಈ ಪಂದ್ಯಕ್ಕೆ ಕೋಟಿ ಕೋಟಿ ಅಭಿಮಾನಿಗಳ ನೆಚ್ಚಿನ ಥಲಾ ಆಡುವುದಿಲ್ಲ.
ಇದನ್ನೂ ಓದಿ:ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPLಗೆ ಅದ್ದೂರಿ ಚಾಲನೆ – RCB VS SRH ಪಂದ್ಯಕ್ಕೆ ಇದ್ಯಾ ಮಳೆ ಕಾಟ
ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಮುನ್ನವೇ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ, ಅಭಿಮಾನಿಗಳ ನೆಚ್ಚಿನ ತಲಾ ಮಹೇಂದ್ರ ಸಿಂಗ್ ಧೋನಿ ಕಣಕ್ಕಿಳಿಯುತ್ತಿಲ್ಲ. ಐಪಿಎಲ್ನ ಆರಂಭಿಕ ಪಂದ್ಯಗಳಿಂದ ಧೋನಿ ಹೊರಗುಳಿಯುವುದು ಖಚಿತವಾಗಿದೆ. ಎಂ.ಎಸ್. ಧೋನಿ ಅವರು ಸ್ನಾಯು ಸೆಳೆತದ ಸಮಸ್ಯೆಯಿಂದ ಬಳಲುತ್ತಿದ್ದು, ಈ ಕಾರಣದಿಂದ ಐಪಿಎಲ್ನ ಮೊದಲ ಎರಡು ವಾರಗಳ ಪಂದ್ಯಗಳಿಂದ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ. ಅಂದರೆ ರಾಜಸ್ಥಾನ್ ರಾಯಲ್ಸ್, ಪಂಜಾಬ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯಗಳಿಗೆ ಧೋನಿ ಅಲಭ್ಯರಾಗುವುದು ಬಹುತೇಕ ಖಚಿತ. ಮಹೇಂದ್ರ ಸಿಂಗ್ ಧೋನಿ ಅನುಪಸ್ಥಿತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ವಿಕೆಟ್ ಕೀಪರ್ ಆಗಿ ಸಂಜು ಸ್ಯಾಮ್ಸನ್ ಕಾಣಿಸಿಕೊಳ್ಳಲಿದ್ದಾರೆ.
ಕಳೆದ ಎರಡು ದಿನಗಳಿಂದ ಸಂಜು ಸ್ಯಾಮ್ಸನ್ ವಿಕೆಟ್ ಕೀಪಿಂಗ್ ಅಭ್ಯಾಸ ನಡೆಸುತ್ತಿದ್ದು, ಹೀಗಾಗಿ ಅವರೇ ಕೀಪಿಂಗ್ ಗ್ಲೌಸ್ ತೊಡಲಿದ್ದಾರೆ ಎನ್ನಲಾಗಿದೆ. ಏಪ್ರಿಲ್ 19 ರಂದು ನಡೆಯಲಿರುವ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಧೋನಿ ಕಣಕ್ಕಿಳಿಯಲಿದ್ದಾರೆ ಎಂದು ಚೆನ್ನೈ ತಂಡದ ಮೂಲಗಳಿಂದ ತಿಳಿದುಬಂದಿದೆ. ಏಪ್ರಿಲ್ 15ರ ತನಕ ಧೋನಿ ವಿಶ್ರಾಂತಿ ಪಡೆಯಲಿದ್ದಾರೆ ಎಂದು ವರದಿಯಾಗಿದೆ. ಇತ್ತ ಧೋನಿ ಹೊರಗುಳಿದರೆ ಸರ್ಫರಾಝ್ ಖಾನ್ಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ.

ನೋಡಿರಿ

