ಸೌಜನ್ಯ ಪ್ರಕರಣದಲ್ಲಿ ಸುಪ್ರೀಂ ತೀರ್ಪು! – ಮರುತನಿಖೆಗೆ ಆದೇಶ, 3 ತಿಂಗಳ ಗಡುವು

ಧರ್ಮಸ್ಥಳದ ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ ಎಂಬ ಮಾಹಿತಿ ಹೊರಬಿದ್ದಿದ್ದು, ಇದರಿಂದ ಹಲವು ವರ್ಷಗಳಿಂದ ಚರ್ಚೆಯಲ್ಲಿರುವ ಪ್ರಕರಣ ಮತ್ತೆ ಮುನ್ನೆಲೆಗೆ ಬಂದಿದೆ.
ಇದನ್ನೂ ಓದಿ: ಕೇರಳದಲ್ಲಿ ಮಳೆ ಆರ್ಭಟ! ಪ್ರವಾಹ, ಭೂಕುಸಿತಕ್ಕೆ 5 ಬಲಿ
ಸೌಜನ್ಯ ಅವರ ತಾಯಿ ಕುಸುಮಾವತಿ ಗೌಡ ಅವರು ಅರ್ಜಿ ಸಲ್ಲಿಸಿ ಪ್ರಕರಣದ ನೈಜ ಆರೋಪಿಗಳನ್ನು ಬಂಧಿಸಿ, ನ್ಯಾಯ ಒದಗಿಸಬೇಕು ಎಂದು ಕೋರಿ ಸಲ್ಲಿಸಿದ್ದರು. ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಂಜಯ್ ಕುಮಾರ್ ನೇತೃತ್ವದ ಪೀಠವು ಈ ಮಹತ್ವದ ತೀರ್ಪನ್ನು ಪ್ರಕಟಿಸಿದೆ.
ಕಳೆದ ಜುಲೈ ತಿಂಗಳಿನಲ್ಲಿ ನಡೆದ ಅರ್ಜಿಯ ಸುದೀರ್ಘ ವಿಚಾರಣೆಯ ಸಂದರ್ಭದಲ್ಲಿ, ಈ ಹಿಂದೆ ಸಿಬಿಐ ನಡೆಸಿದ್ದ ತನಿಖಾ ವೈಖರಿಯ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ಮತ್ತು ಅತೃಪ್ತಿಯನ್ನು ವ್ಯಕ್ತಪಡಿಸಿತ್ತು. ತನಿಖೆಯಲ್ಲಿ ಹಲವು ಲೋಪದೋಷಗಳಿದ್ದು, ನೈಜ ಅಪರಾಧಿಗಳನ್ನು ಪತ್ತೆ ಹಚ್ಚುವಲ್ಲಿ ತನಿಖಾ ಸಂಸ್ಥೆ ವಿಫಲವಾಗಿದೆ ಎಂದು ಪೀಠ ಅಭಿಪ್ರಾಯಪಟ್ಟಿತ್ತು.
ಮರುತನಿಖೆ ನಡೆಸುವ ಸಂದರ್ಭದಲ್ಲಿ ಈ ಹಿಂದೆ ಪರಿಶೀಲಿಸಲಾಗಿರುವ ದಾಖಲೆಗಳು, ಸಾಕ್ಷ್ಯಗಳು ಮತ್ತು ಪ್ರಕರಣಕ್ಕೆ ಸಂಬಂಧಿಸಿದ ಇತರ ಪ್ರಮುಖ ಅಂಶಗಳನ್ನು ಮತ್ತೊಮ್ಮೆ ಪರಿಶೀಲಿಸುವ ನಿರೀಕ್ಷೆಯಿದೆ. ತನಿಖೆ ಯಾವ ದಿಕ್ಕಿನಲ್ಲಿ ಸಾಗುತ್ತದೆ ಮತ್ತು ಯಾವ ಹೊಸ ಮಾಹಿತಿಗಳು ಹೊರಬರುತ್ತವೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಮುಖ್ಯವಾಗಿ, ಮರುತನಿಖೆಯ ವರದಿಯನ್ನು ಸಲ್ಲಿಸಲು ಮೂರು ತಿಂಗಳ ಗಡುವು ನೀಡಲಾಗಿದೆ ಎಂಬ ಮಾಹಿತಿ ಇದೆ. ಹೀಗಾಗಿ ಮುಂದಿನ ಮೂರು ತಿಂಗಳು ಈ ಪ್ರಕರಣದ ತನಿಖೆಯ ದೃಷ್ಟಿಯಿಂದ ಮಹತ್ವದ್ದಾಗಲಿದೆ.

ನೋಡಿರಿ

