ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ದಯಾನಂದ್ ನೇಮಕ – ಸರ್ಕಾರದಿಂದ ಯಾವೆಲ್ಲಾ ಅಧಿಕಾರಿಗಳ ವರ್ಗಾವಣೆ?

ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ದಯಾನಂದ್ ನೇಮಕ – ಸರ್ಕಾರದಿಂದ ಯಾವೆಲ್ಲಾ ಅಧಿಕಾರಿಗಳ ವರ್ಗಾವಣೆ?

ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ತಿಂಗಳು ತುಂಬುವ ಮುನ್ನವೇ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದೆ. ರಾಜಧಾನಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ(bengaluru city police commissioner)  ಬಿ. ದಯಾನಂದ (B Dayananda) ಅವರನ್ನು ನೇಮಕ ಮಾಡಲಾಗಿದೆ. ಪ್ರಸ್ತುತ ಬೆಂಗಳೂರು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ (Pratap Reddy) ಅವರನ್ನು ಆಂತರಿಕ ಭದ್ರತಾ ಡಿಜಿಪಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಇದನ್ನೂ ಓದಿ : ದ್ವೇಷ ಬಿತ್ತುವ ಪಠ್ಯಗಳಿಗೆ ಕತ್ತರಿ ಹಾಕಲು ಕಸರತ್ತು – ಪರಿಷ್ಕರಣೆ ಮಾಡಿಯೇ ಸಿದ್ಧವೆಂದ ಮಧು ಬಂಗಾರಪ್ಪ!

ಬೆಂಗಳೂರು ಪೊಲೀಸ್ ಆಯುಕ್ತರಾಗಿದ್ದ ಪ್ರತಾಪ್ ರೆಡ್ಡಿ ಅವರು ಆಂತರಿಕ ಭದ್ರತೆ ಡಿಜಿಪಿಯಾಗಿ ವರ್ಗಾವಣೆಗೊಂಡಿದ್ದಾರೆ. ಅಲ್ಲದೆ ಸಿಐಡಿ ಡಿಜಿಯಾಗಿ ಬೆಂಗಳೂರು ನಗರ ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಎಂ.ಎ. ಸಲೀಂ ವರ್ಗಾವಣೆಯಾಗಿದ್ದಾರೆ. ಇನ್ನು ಹಿರಿಯ ಅಧಿಕಾರಿ ಶರತ್ ಚಂದ್ರ ಅವರನ್ನು ಗುಪ್ತಚರ ಇಲಾಖೆ ಎಡಿಜಿಪಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ಅವರನ್ನು 2022ರ ಮೇ 17 ರಂದು ನೇಮಕ ಮಾಡಲಾಗಿತ್ತು. ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಿರ್ಗಮಿತ ಕಮೀಷನರ್ ಕಮಲ್ ಪಂತ್ ಅವರು ಪ್ರತಾಪ್ ರೆಡ್ಡಿ ಅವರಿಗೆ ಬ್ಯಾಟನ್ ಹಸ್ತಾಂತರಿಸಿದ್ದರು. ಆಗ ರಾಜ್ಯ ಬಿಜೆಪಿ ಸರ್ಕಾರ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಹಲವು ಐಪಿಎಸ್ ಅಧಿಕಾರಿಗಳನ್ನು ಎತ್ತಂಗಡಿ ಮಾಡಿ, ನೂತನ ನಗರ ಪೊಲೀಸ್ ಆಯುಕ್ತರಾಗಿ ಆಗಿ ಪ್ರತಾಪ್ ರೆಡ್ಡಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿತ್ತು.

suddiyaana