SRH ತಂಡದಲ್ಲಿ ಮೇಜರ್ ಸರ್ಜರಿ – ಪ್ಯಾಟ್ ಕಮಿನ್ಸ್ ತಂಡದ ಕ್ಯಾಪ್ಟನ್ ಆಗಿ ಆಯ್ಕೆ

SRH ತಂಡದಲ್ಲಿ ಮೇಜರ್ ಸರ್ಜರಿ – ಪ್ಯಾಟ್ ಕಮಿನ್ಸ್ ತಂಡದ ಕ್ಯಾಪ್ಟನ್ ಆಗಿ ಆಯ್ಕೆ

ಐಪಿಎಲ್ 17ನೇ ಆವೃತ್ತಿಯಲ್ಲಿ ಅನೇಕ ಬದಲಾವಣೆಗಳು ನಡೆಯುತ್ತಲೇ ಇದೆ. ಇದೀಗ ಸನ್ ರೈಸರ್ಸ್ ಹೈದರಾಬಾದ್ ತಂಡದಲ್ಲೂ ದೊಡ್ಡ ಬದಲಾವಣೆಯಾಗಿದೆ. ಪ್ಯಾಟ್ ಕಮಿನ್ಸ್ ತಂಡದ ಕ್ಯಾಪ್ಟನ್ ಆಗಿ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ಟಿ20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟಿಸಲು ದಿನಾಂಕ ನಿಗದಿ – ರೋಹಿತ್ ಶರ್ಮಾ ಟೀಮ್ ಇಂಡಿಯಾ ಲೀಡ್ ಮಾಡೋದು ಫಿಕ್ಸ್

ಸನ್ ರೈಸರ್ಸ್ ಹೈದರಾಬಾದ್ ತಂಡದಲ್ಲಿ ಕಳೆದ ಬಾರಿ ನಾಯಕರಾಗಿದ್ದು ಸೌತ್ ಆಫ್ರಿಕಾ ಆಟಗಾರ ಐಡೆನ್ ಮಾರ್ಕ್ರಾಮ್. ಆದರೀಗ ಎಸ್‌ಆರ್‌ಹೆಚ್ ತಂಡದಲ್ಲಿ ಮೇಜರ್ ಸರ್ಜರಿ ನಡೆದಿದೆ.  ಐಡೆನ್ ಮಾರ್ಕ್ರಾಮ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಲಾಗಿದೆ. ಅವರ ಬದಲಿಗೆ ಆಸೀಸ್ ಆಲ್ರೌಂಡರ್‌ ಪ್ಯಾಟ್ ಕಮಿನ್ಸ್ ಗೆ ನಾಯಕತ್ವ ನೀಡಲಾಗಿದೆ. ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 17 ಗಾಗಿ ಇದೀಗ ಸನ್ ರೈಸರ್ಸ್ ಹೈದರಾಬಾದ್ ತಂಡವು ಹೊಸ ನಾಯಕನನ್ನು ಆಯ್ಕೆ ಮಾಡಿದೆ. ಈ ಬಾರಿ ಐಪಿಎಲ್‌ನಲ್ಲಿ ಎಸ್‌ಆರ್‌ಹೆಚ್  ತಂಡವನ್ನು ಆಸ್ಟ್ರೇಲಿಯಾದ ಪ್ಯಾಟ್ ಕಮಿನ್ಸ್ ಮುನ್ನಡೆಸಲಿದ್ದಾರೆ.

2023 ರಲ್ಲಿ ಐಡೆನ್ ಮಾರ್ಕ್ರಾಮ್ ನಾಯಕತ್ವದಲ್ಲಿ ಕಣಕ್ಕಿಳಿದಿದ್ದ ಸನ್ರೈಸರ್ಸ್ ಹೈದರಾಬಾದ್ ತಂಡವು 14 ಪಂದ್ಯಗಳಲ್ಲಿ ಕೇವಲ 4 ಮ್ಯಾಚ್‌ಗಳಲ್ಲಿ ಮಾತ್ರ ಜಯ ಸಾಧಿಸಿತ್ತು. ಅಲ್ಲದೆ ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನ ಅಲಂಕರಿಸುವ ಮೂಲಕ ಟೂರ್ನಿಯನ್ನು ಅಂತ್ಯಗೊಳಿಸಿತ್ತು. ಹೀಗಾಗಿ ಈ ಬಾರಿ ಮಾರ್ಕ್ರಾಮ್ ಅವರನ್ನು ನಾಯಕತ್ವದಿಂದ ಕೆಳಗಿಳಿಸಲಾಗಿದೆ. ಇದೀಗ ಆಸ್ಟ್ರೇಲಿಯಾ ತಂಡದ ಯಶಸ್ವಿ ನಾಯಕರಲ್ಲಿ ಒಬ್ಬರೆನಿಸಿಕೊಂಡಿರುವ ಪ್ಯಾಟ್ ಕಮಿನ್ಸ್ ಗೆ ಕ್ಯಾಪ್ಟನ್ ಪಟ್ಟ ನೀಡಲಾಗಿದೆ. ಕಮಿನ್ಸ್ ನಾಯಕತ್ವದಲ್ಲಿ ಆಸ್ಟ್ರೇಲಿಯಾ ತಂಡವು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಮತ್ತು ಏಕದಿನ ವಿಶ್ವಕಪ್ ಗೆದ್ದುಕೊಂಡಿದೆ. ಇದೇ ಕಾರಣದಿಂದಾಗಿ ಕಮಿನ್ಸ್ ಅವರನ್ನು ನಾಯಕನಾಗಿ ನೇಮಿಸಲಾಗಿದೆ. ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಆಸ್ಟ್ರೇಲಿಯಾ ತಂಡದ ನಾಯಕ ಕಮಿನ್ಸ್ ಅವರನ್ನು ಸನ್ರೈಸರ್ಸ್ ಹೈದರಾಬಾದ್ ಫ್ರಾಂಚೈಸಿ ಬರೋಬ್ಬರಿ 20.50 ಕೋಟಿ ರೂ.ಗೆ ಖರೀದಿಸಿದೆ. ಇದು ಐಪಿಎಲ್ ಇತಿಹಾಸದ 2ನೇ ಅತ್ಯಂತ ದುಬಾರಿ ಬಿಡ್ಡಿಂಗ್ ಎಂಬುದು ವಿಶೇಷ. ಇದೀಗ ದುಬಾರಿ ಆಟಗಾರನನ್ನೇ ಸನ್ರೈಸರ್ಸ್ ಹೈದರಾಬಾದ್ ನಾಯಕನನ್ನಾಗಿ ಘೋಷಿಸಿರುವುದು ವಿಶೇಷ.

Sulekha