ಭಾರತದ ವಿರುದ್ಧ ಅಪಮಾನಕರ ಹೇಳಿಕೆ ನೀಡಿದ್ದ ಮಾಲ್ಡೀವ್ಸ್‌ ಸಚಿವರ ಅಮಾನತು!

ಭಾರತದ ವಿರುದ್ಧ ಅಪಮಾನಕರ ಹೇಳಿಕೆ ನೀಡಿದ್ದ ಮಾಲ್ಡೀವ್ಸ್‌ ಸಚಿವರ ಅಮಾನತು!

ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾಲ್ಡೀವ್ಸ್ ಸಚಿವರು ಮಾಡಿರುವ ವಿವಾದಾತ್ಮಕ ಹೇಳಿಕೆಯಿಂದ ಭಾರತದಲ್ಲಿ ಆಕ್ರೋಶ ಭುಗಿಲೆದ್ದಿದೆ. ಪ್ರಧಾನಿ ಮೋದು ಅವರನ್ನು ಟೀಕಿಸಿದ್ದಕ್ಕೆ ಭಾರತೀಯ ನೆಟ್ಟಿಗರು ಸಿಡಿದೆದ್ದಿದ್ದಾರೆ.  ಮಾಲ್ಡೀವ್ಸ್‌ ಪ್ರವಾಸವನ್ನು ರದ್ದು ಮಾಡಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್‌ ಶುರುವಾಗಿದ್ದು, #BoycottMaldives ಎಂಬ ಅಭಿಯಾನ ಯಶಸ್ವಿಯಾಗಿದೆ. EaseMyTrip ಮಾಲ್ಡೀವ್ಸ್‌ ಫ್ಲೈಟ್‌ ಬುಕ್ಕಿಂಗ್‌ ರದ್ದು ಮಾಡಿದೆ.

ಇದನ್ನೂ ಓದಿ: ಬಿಲ್ಕಿಸ್ ಬಾನು ಪ್ರಕರಣ – ಅಪರಾಧಿಗಳ ಬಿಡುಗಡೆಗೆ ಗುಜರಾತ್ ಸರ್ಕಾರ ನೀಡಿದ್ದ ಅನುಮತಿ ರದ್ದುಗೊಳಿಸಿದ ‘ಸುಪ್ರೀಂ’

ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದಕ್ಕೆ ಭಾರತೀಯರು ಸಿಡಿದೆದ್ದಿದ್ದಾರೆ.  ಮಾಲ್ಡೀವ್ಸ್‌ ಪ್ರವಾಸವನ್ನು ರದ್ದು ಮಾಡಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್‌ ಸೃಷ್ಟಿಸಿದ್ದರು. ಇದಕ್ಕೆ ಬೆಂಬಲ ವ್ಯಕ್ತಪಡಿಸಿದ EaseMyTrip ಫ್ಲೈಟ್‌ ಬುಕ್ಕಿಂಗ್‌ ರದ್ದು ಮಾಡಿದೆ. ಭಾರತದ ಆನ್‌ಲೈನ್‌ ಟ್ರಾವೆಲ್‌ ಕಂಪನಿ EaseMyTrip ಸಿಇಒ ನಿಶಾಂತ್‌ ಪಿಟ್ಟಿ ಸಾಮಾಜಿಕ ಜಾಲತಾಣದಲ್ಲಿ ಭಾರತೀಯರಿಗೆ ಬೆಂಬಲ ವ್ಯಕ್ತಪಡಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಮೂವರು ಸಚಿವರು ಅಮಾನತು!

ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ ಮೂವರು ಸಚಿವರ ವಿರುದ್ಧ ಭಾರತೀಯರು ಆಕ್ರೋಶ ಹೊರಹಾಕಿದ್ದಾರೆ.  ಪ್ರಧಾನಿ ಮೋದಿ ಕುರಿತಾಗಿ ಎರಡು ದೇಶಗಳ ಮಧ್ಯೆ ಬಿಕಟ್ಟು ಸೃಷ್ಟಿಯಾದ ಬೆನ್ನಲ್ಲೇ ಮಾಲ್ಡೀವ್ಸ್‌ ಜನರು ಕೂಡ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಬೆನ್ನಲ್ಲೇ ಅಧ್ಯಕ್ಷ ಮೊಹಮ್ಮದ್ ಮಿಜು ನೇತೃತ್ವದ ಸರ್ಕಾರ ಸಚಿವರನ್ನು ಅಮಾನತು ಮಾಡುವ ಮೂಲಕ ಶಿಸ್ತು ಕ್ರಮ ಜರುಗಿಸಿದೆ. ಮೋದಿ ವಿರುದ್ಧ ಕೀಳು ಅಭಿರುಚಿಯುಳ್ಳ ಹೇಳಿಕೆ ನೀಡಿದ್ದ ಮಾರಿಯಂ ಶಿಯುನಾ, ಮಲ್ಲಾ ಷರೀಫ್‌ ಹಾಗೂ ಮಝೂಂ ಮಜೀದ್ ಅವರನ್ನು ಅಮಾನತು ಮಾಡಲಾಗಿದೆ.

ಮಾಲ್ಡೀವ್ಸ್ ರಾಯಭಾರಿಗೆ ಸಮನ್ಸ್ ನೀಡಿದ ಭಾರತ!

ಇನ್ನು ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾಲ್ಡೀವ್ಸ್ ಸಚಿವರು ಮಾಡಿರುವ ವಿವಾದಾತ್ಮಕ ಹೇಳಿಕೆಯಿಂದ ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚಿದೆ. ಈ ಮಧ್ಯೆ ಭಾರತದ ವಿದೇಶಾಂಗ ಸಚಿವಾಲಯ ಮಾಲ್ಡೀವ್ಸ್‌ನ ರಾಯಭಾರಿಗೆ ಸಮನ್ಸ್‌ ನೀಡಿದೆ. ಮಾಲ್ಡೀವ್ಸ್ ರಾಯಭಾರಿ ಇಬ್ರಾಹಿಂ ಶಾಹಿಬ್ ದೆಹಲಿಯ ಸೌತ್ ಬ್ಲಾಕ್‌ನಲ್ಲಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ತೆರಳಿದ್ದಾರೆ. ಪ್ರಧಾನಿ ಮೋದಿ ವಿರುದ್ಧದ ಹೇಳಿಕೆಗಳ ಕುರಿತು ಸಚಿವರ ಕಾಮೆಂಟ್‌ಗಳ ಬಗ್ಗೆ ಭಾರತ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಏನಿದು ಘಟನೆ?

ಲಕ್ಷದ್ವೀಪಕ್ಕೆ ಪ್ರವಾಸ ಕೈಗೊಂಡಿದ್ದ ಪ್ರಧಾನಿ ಮೋದಿ ಸ್ನಾರ್ಕಲಿಂಗ್ ಮಾಡಿ ಅಲ್ಲಿನ ಸಮುದ್ರ ತೀರದ ಫೋಟೋ ಹಾಕಿ ಮಾಲ್ಡೀವ್ಸ್‌ಗೆ ಲಕ್ಷದ್ವೀಪ ಪರ್ಯಾಯ ಪ್ರವಾಸಿ ತಾಣವಾಗಬಹುದು ಎಂಬ ಅಭಿಪ್ರಾಯ ಸೃಷ್ಟಿಸಿದ್ದರು. ಅಷ್ಟೇ ಅಲ್ಲದೇ ಸಾಹಸಪ್ರಿಯರೆಲ್ಲ ಲಕ್ಷದ್ವೀಪಕ್ಕೆ ಭೇಟಿ ನೀಡಿ ಎಂದು ಕರೆ ನೀಡುವ ಮೂಲಕ ಭಾರತ ವಿರೋಧಿ ಧೋರಣೆ ಬೆಳೆಸಿಕೊಳ್ಳುತ್ತಿರುವ ಮಾಲ್ಡೀವ್ಸ್‌ಗೆ ಹೋಗಬೇಡಿ ಎಂದು ಪರೋಕ್ಷವಾಗಿ ಸಂದೇಶ ರವಾನಿಸಿದ್ದರು. ಈ ಪೋಸ್ಟ್‌ ವೈರಲ್‌ ಆಗುತ್ತಿದ್ದಂತೆ ಮಾಲ್ಡೀವ್ಸ್‌ ಸರ್ಕಾರದ ಸಚಿವರು ಲಕ್ಷದ್ವೀಪ ಮತ್ತು ಮೋದಿಯನ್ನು ಟೀಕಿಸಿ ಅಭಿಪ್ರಾಯ ಹಂಚಿಕೊಂಡಿದ್ದರು. ಇದರಿಂದ ಕೆರಳಿದ ನೆಟ್ಟಿಗರು #BoycottMaldives ಅಭಿಯಾನ ಆರಂಭಿಸಿದ್ದರು. ಇದರ ಜೊತೆ #ExploreIndianIslands ಬಳಸಿ ಭಾರತದ ಸುಂದರ ದ್ವೀಪಗಳನ್ನು ಪರಿಚಯ ಮಾಡಿಸುವ ಟ್ರೆಂಡ್‌ ಸೃಷ್ಟಿಸಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಆರಂಭವಾದ ಈ ಟ್ರೆಂಡ್‌ ನಿಜವಾಗಿ ಫಲ ನೀಡಲು ಆರಂಭಿಸಿತು. 8 ಸಾವಿರ ಹೋಟೆಲ್‌ ಬುಕ್ಕಿಂಗ್‌, 2,500 ವಿಮಾನ ಪ್ರಯಾಣದ ಟಿಕೆಟ್‌ ರದ್ದು ಮಾಡಿ ಭಾರತೀಯ ಪ್ರವಾಸಿಗರು ಬಿಸಿ ಮುಟ್ಟಿಸಿದ್ದರು. ರದ್ದು ಮಾಡಿದ್ದು ಮಾತ್ರವಲ್ಲದೇ ರದ್ದು ಮಾಡಿದ ಟಿಕೆಟ್‌ ವಿವರಗಳನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಾಕಿ ಮತ್ತಷ್ಟು ಟ್ರೆಂಡ್‌ ಸೃಷ್ಟಿಸಿದರು. ಇದರ ಮಾಲ್ಡೀವ್ಸ್‌ ಪ್ರವಾಸಿ ವೆಬ್‌ಸೈಟ್‌ಗಳಲ್ಲಿ ಸರ್ಕಾರದ ಸಚಿವರ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದಲ್ಲೆದರ ಪರಿಣಾಮ ಭಾರತೀಯ ಪ್ರವಾಸಿಗರ ಆಕ್ರೋಶಕ್ಕೆ ಮಣಿದ ಮಾಲ್ಡೀವ್ಸ್‌ ಈಗ ಸಚಿವರನ್ನು ಅಮಾನತು ಮಾಡಿದೆ.

Shwetha M