ಕೇವಲ 29 ದಿನಗಳಲ್ಲಿ ಕೋಟಿಗಳ ಒಡೆಯನಾದ ಮಲೆ ಮಾದಪ್ಪ! – ಹರಕೆಯಾಗಿ ಬಂತು ಚಿನ್ನ, ಬೆಳ್ಳಿ!

ರಾಜ್ಯದಲ್ಲೇ ಪ್ರಸಿದ್ಧ ದೇವಾಲಯಗಳಲ್ಲಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ದೇಗುಲವೂ ಒಂದು. ನಿತ್ಯ ಸಾವಿರಾರು ಭಕ್ತರು ದೇಗುಲಕ್ಕೆ ಆಗಮಿಸಿ ದೇವರ ದರ್ಶನ ಪಡೆಯುತ್ತಾರೆ. ಇದೀಗ ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದೆ. ಕೇವಲ 29 ದಿನಗಳಲ್ಲಿ ಕೋಟ್ಯಂತರ ರೂಪಾಯಿ ಹಣ ಕಾಣಿಕೆ ಸಂಗ್ರಹವಾಗಿದೆ.
ಇದನ್ನೂ ಓದಿ: ಗೌತಮ್ ಪ್ರೀತಿ ಧಿಕ್ಕರಿಸಿದ ಭೂಮಿಕಾ – ಮಗನ ನೋಡಲು ಬಂದ ಗೌತಮ್ ಮತ್ತು ಆನಂದ್ ಮಾಸ್ಟರ್ ಪ್ಲಾನ್ ವರ್ಕ್ ಆಗುತ್ತಾ?
ಶ್ರಾವಣ ಮಾಸದ ಹಿನ್ನೆಲೆಯಲ್ಲಿ ಕಳೆದ ತಿಂಗಳು ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಗುರುವಾರ ದೇಗುಲದ ಹುಂಡಿ ಹಣ ಎಣಿಕೆ ಕಾರ್ಯ ನಡೆದಿದೆ. ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಹುಂಡಿ ಎಣಿಕೆ ಕಾರ್ಯ ಮಾಡಿಲಾಗಿದೆ. ಕೇವಲ 29 ದಿನಗಳಲ್ಲಿ 1.70 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. 30 ಗ್ರಾಂ ಚಿನ್ನ ಹಾಗೂ 1,100 ಬೆಳ್ಳಿ ಸಾಮಾನುಗಳು ಸಂಗ್ರಹವಾಗಿದೆ. ಇನ್ನೂ ಇ-ಹುಂಡಿಯಿಂದ 3.9 ಲಕ್ಷ ರೂ. ಹಣ ಸಂಗ್ರಹವಾಗಿದೆ. ಚಲಾವಣೆಯಲ್ಲಿ ಇಲ್ಲದ 2,000 ಮುಖಬೆಲೆಯ 3 ನೋಟುಗಳು ಹುಂಡಿಯಲ್ಲಿ ಸಿಕ್ಕಿವೆ.
ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದು, ಸರ್ಕಾರಿ ರಜಾ ದಿನ, ಅಮಾವಾಸ್ಯೆ, ಶ್ರಾವಣ ಮಾಸ, ಜಾತ್ರಾ ಮಹೋತ್ಸವ ಸೇರಿದಂತೆ ವಿವಿಧ ಕಾರಣಗಳಿಂದ ಕಡಿಮೆ ದಿನಗಳಲ್ಲೇ ಅಧಿಕ ಹಣ ಕಾಣಿಕೆ ರೂಪದಲ್ಲಿ ಸಂಗ್ರಹವಾಗಿದೆ.

ನೋಡಿರಿ

