ಮಲೆಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿ ಚಿರತೆ ಅಟ್ಯಾಕ್ – ಪಾದಯಾತ್ರೆ ಹೋದವನನ್ನ ಕಾಪಾಡಲಿಲ್ಲ ಮಾದಪ್ಪ!

ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ತೆರಳುತ್ತಿದ್ದ ಯುವಕ ಚಿರತೆ ದಾಳಿಗೆ ಬಲಿಯಾಗಿದ್ದಾನೆ. ಈ ಘಟನೆ ಇಂದು ಮುಂಜಾನೆ ನಡೆದಿದ್ದು, ಬೆಳಗ್ಗೆ 11 ಗಂಟೆ ಸುಮಾರಿಗೆ ಶವ ಪತ್ತೆಯಾಗಿದೆ. ಮಲೆಮಹದೇಶ್ವರ ಬೆಟ್ಟದ ತಪ್ಪಲಿನ ತಾಳುಬೆಟ್ಟದಲ್ಲಿ ಘಟನೆ ಜರುಗಿದೆ.ಮಂಡ್ಯ ಜಿಲ್ಲೆಯ ಚಿರನಹಳ್ಳಿ ಗ್ರಾಮದ ಪ್ರವೀಣ್ (30) ಎಂಬವರು ಚಿರತೆ ದಾಳಿಗೆ ಮೃತಪಟ್ಟಿರುವ ಪಾದಯಾತ್ರಿ. ಮಲೆಮಹದೇಶ್ವರ ಬೆಟ್ಟಕ್ಕೆ ಮಂಡ್ಯ ಚಿರನಹಳ್ಳಿ ಗ್ರಾಮ ಹಾಗೂ ಸುತ್ತಮುತ್ತಲ ಗ್ರಾಮಗಳಿಂದ ನೂರಾರು ಜನರು ಪಾದಯಾತ್ರೆ ತೆರಳಿದ್ದರು. ಮಂಗಳವಾರ ರಾತ್ರಿ ತಾಳುಬೆಟ್ಟದಲ್ಲಿ ವಾಸ್ತವ್ಯ ಹೂಡಿ, ಬುಧವಾರ ಬೆಳಗ್ಗೆ ಅಲ್ಲಿಂದ ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮೂಲಕ ಹೊರಟಿದ್ದರು.
ಇದನ್ನೂ ಓದಿ: ಗೆಳೆಯನ ಬೆನ್ನುಮೂಳೆ ಮುರಿಯಿತು ಎಂದು ಜೀವ ತೆಗೆದೇ ಬಿಟ್ರು! – ಸ್ನೇಹಿತರು ಹೀಗೂ ಇರುತ್ತಾರಾ?
ಈ ಸಂದರ್ಭದಲ್ಲಿ, ಬುಧವಾರ ಬೆಳಗ್ಗೆ ರಂಗಸ್ವಾಮಿ ಒಡ್ಡಿನ ಸಮೀಪದ ಪಾದಯಾತ್ರಿಕರ ಮಾರ್ಗದಲ್ಲಿ ಕುಳಿತಿದ್ದ ಚಿರತೆಯು ಏಕಾಏಕಿ ಪ್ರವೀಣ್ ಮೇಲೆ ದಾಳಿ ಮಾಡಿ ಎಳೆದೊಯ್ದಿದೆ. ಜೊತೆಯಲ್ಲಿದ್ದ ಐವರು ಸ್ನೇಹಿತರು ಕಿರುಚಾಡಿಕೊಂಡು ಚಿರತೆ ಓಡಿಸಲು ಎಷ್ಟೇ ಪ್ರಯತ್ನಪಟ್ಟರೂ ಪ್ರವೀಣ್ನನ್ನು ಅರಣ್ಯದೊಳಗೆ ಎಳೆದೊಯ್ದಿದೆ ಎಂದು ತಿಳಿದು ಬಂದಿದೆ. ಭಯಭೀತರಾದ ಸ್ನೇಹಿತರು ಮಲೆಮಹದೇಶ್ವರ ಬೆಟ್ಟ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ, ಶವವನ್ನು ಪತ್ತೆ ಹಚ್ಚಿದ್ದಾರೆ. ಕಳೆದ ಒಂದು ವಾರದಿಂದ ಸತತವಾಗಿ ರಸ್ತೆ ಬದಿಯಲ್ಲಿಯೇ ಚಿರತೆ ಕಾಣಿಸಿಕೊಂಡು ಕುಳಿತಿರುತ್ತಿದ್ದ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು.
ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿಗೆ ಸ್ಥಳೀಯರು ಮಾಹಿತಿ ನೀಡಿದ್ದು, ಈ ವೇಳೆ ಚಿರತೆ ಇರೋದನ್ನು ಅರಣ್ಯ ಇಲಾಖೆ ಗುರುತಿಸಿದ್ದಾರೆ. ಸದ್ಯ ಯುವಕನ ಶವದ ಬಳಿಯೇ ಚಿರತೆ ಇರೋದು ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಚಿರತೆ ಸೆರೆಗೆ “ಚಿರತೆ ಟಾಸ್ಕ್ ಫೋರ್ಸ್” ಕರೆಸಿ ಕಂದಕದಲ್ಲಿದ್ದ ಮೃತದೇಹವನ್ನು ಹೊರಕ್ಕೆ ಕರೆತಂದಿದ್ದಾರೆ. ಸ್ಥಳದಲ್ಲಿ ಅರಣ್ಯ ಹಾಗೂ ಪೊಲೀಸ್ ಸಿಬ್ಬಂದಿ ಬೀಡುಬಿಟ್ಟಿದ್ದಾರೆ.

ನೋಡಿರಿ

