ಮೋದಿ ವಿಷ ಸರ್ಪ ಇದ್ದಂತೆ –  ಹೇಳಿಕೆ ನೀಡಿದ ಕೆಲವೇ ಹೊತ್ತಲ್ಲಿ ಯೂಟರ್ನ್ ಹೊಡೆದ ಮಲ್ಲಿಕಾರ್ಜುನ ಖರ್ಗೆ

ಮೋದಿ ವಿಷ ಸರ್ಪ ಇದ್ದಂತೆ –  ಹೇಳಿಕೆ ನೀಡಿದ ಕೆಲವೇ ಹೊತ್ತಲ್ಲಿ ಯೂಟರ್ನ್ ಹೊಡೆದ ಮಲ್ಲಿಕಾರ್ಜುನ ಖರ್ಗೆ

ಗದಗ: ಪ್ರತಿಬಾರಿ ತೂಕದ ಮಾತುಗಳನ್ನಾಡುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇದೀಗ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಾಲಗೆ ಹರಿಬಿಟ್ಟು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ, ಪ್ರಧಾನಿ ಮೋದಿ ವಿಷ ಸರ್ಪ ಇದ್ದಂತೆ, ವಿಷದ ಹಾವನ್ನು ನೆಕ್ಕಿದ್ರೆ ಸತ್ತು ಹೋಗ್ತಾರೆ ಅಂತಾ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಮಾವನ ಪರ ಅಖಾಡಕ್ಕಿಳಿದ ಸೊಸೆ – ಮನೆ ಮನೆಗೂ ತೆರಳಿ ಮತಯಾಚಿಸಿದ ಸ್ಮಿತಾ ರಾಕೇಶ್ ಸಿದ್ದರಾಮಯ್ಯ

ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಎಸ್. ಪಾಟೀಲ್ ಪರ‌ ಮತಯಾಚನೆ ಮಾಡುತ್ತಿರುವ ಸಂದರ್ಭ ಪ್ರಧಾನಿ ಮೋದಿ ವಿಷ ಸರ್ಪ, ವಿಷ ಸರ್ಪ ನೆಕ್ಕಿದರೆ ಸತ್ತು ಹೋಗುತ್ತಾರೆ. ಮೋದಿ ಓರ್ವ ಸುಳ್ಳುಗಾರ. ಕಪ್ಪು ಹಣ ತಂದು 15 ಲಕ್ಷ ಕೊಡುತ್ತೇನೆ ಅಂದರು. ಆದರೆ ಇನ್ನೂ ಕೊಟ್ಟಿಲ್ಲ. ಎಲ್ಲ ಹಣ ಅದಾನಿ ಹತ್ತಿರ ಇಟ್ಟಿದ್ದಾರೇನೋ? 18 ಕೋಟಿ ಯುವಕರಿಗೆ ನೌಕರಿ‌ ಕೊಡಬೇಕಿತ್ತು. ಆದರೆ ಉದ್ಯೋಗ ಕೊಟ್ಟಿಲ್ಲ. ಮೋದಿ ಸುಳ್ಳಿನ ಸರದಾರ ಎಂದು ಹೇಳಿದ್ದರು.

ಈ ಹೇಳಿಕೆಗೆ ಬಿಜೆಪಿ ನಾಯಕರಿಂದ ಟೀಕೆ ವ್ಯಕ್ತವಾಗುತ್ತಿದ್ದಂತೆ ಖರ್ಗೆ ಯೂಟರ್ನ್ ಹೊಡೆದಿದ್ದಾರೆ.  ಮೈಮೇಲೆ ಎಳೆದುಕೊಂಡಿದ್ದ ವಿವಾದವನ್ನು ಹೊಡೆದೋಡಿಸುವ ಯತ್ನ ಮಾಡಿದ್ದಾರೆ. ‘ನಾನು ಪ್ರಧಾನಿ ಮೋದಿಯನ್ನು ವಿಷದ ಹಾವು ಎಂದು ಹೇಳಿಲ್ಲ. ಭಾರತೀಯ ಜನತಾ ಪಾರ್ಟಿ ಹಾವು ಇದ್ದಂತೆ, ಅದನ್ನು ನೆಕ್ಕಿ ನೋಡುತ್ತೇನೆ ಅಂದರೆ ಸತ್ತು ಹೋಗ್ತಾರೆ ಅಂತಾ ಹೇಳಿದ್ದೆ. ವೈಯಕ್ತಿಕವಾಗಿ ಯಾರಿಗೂ ಹೇಳಿಲ್ಲ, ಯಾರ ಹೆಸರು ಹೇಳಿಲ್ಲ’ ಎಂದು ಹೇಳಿದ್ದಾರೆ.

suddiyaana