ಗುಜರಾತ್ ಜನ ಅನಕ್ಷರಸ್ಥರು ಅನ್ನೋ ಹೇಳಿಕೆಗೆ ಕ್ಷಮೆ ಕೇಳಿದ ಮಲ್ಲಿಕಾರ್ಜುನ ಖರ್ಗೆ

ಗುಜರಾತ್ ಜನ ಅನಕ್ಷರಸ್ಥರು ಅನ್ನೋ ಹೇಳಿಕೆಗೆ ಕ್ಷಮೆ ಕೇಳಿದ ಮಲ್ಲಿಕಾರ್ಜುನ ಖರ್ಗೆ

ಕೇರಳ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಗುಜರಾತ್ ಜನರ ಬಗ್ಗೆ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚಿಸಿದ್ದಾರೆ. ತಮ್ಮ ಹೇಳಿಕೆಗಳನ್ನು ಉದ್ದೇಶಪೂರ್ವಕವಾಗಿಯೇ ತಿರುಚಲಾಗಿದೆ, ನಾನು ಕ್ಷಮೆಯಾಚಿಸುತ್ತೇನೆ ಎಂದು ಅವರು ಹೇಳಿದ್ದಾರೆ. ಗುಜರಾತ್ ಜನ ಅನಕ್ಷರಸ್ಥರು ಎಂದು ಖರ್ಗೆ ನೀಡಿದ್ದ ಹೇಳಿಕೆ ವಿವಾದದ ಸ್ವರೂಪ ಪಡೆಯುತ್ತಿದ್ದಂತೆ ಕ್ಷಮೆಯಾಚಿಸಿದ್ದಾರೆ. ಕೇರಳದಲ್ಲಿ ಮಾಡಿದ ಚುನಾವಣಾ ಭಾಷಣದ ಬಗ್ಗೆ ಖರ್ಗೆ ಸ್ಪಷ್ಟೀಕರಣ ನೀಡಿದ್ದು, ತಮ್ಮ ಹೇಳಿಕೆಗಳನ್ನು ಉದ್ದೇಶಪೂರ್ವಕವಾಗಿ ತಪ್ಪಾಗಿ  ಅರ್ಥೈಸಲಾಗುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕನ್ನಡದಲ್ಲೇ ವಾರೆಂಟ್‌ ಬೇೆಕೆಂದು ಪಟ್ಟು, ಪೊಲೀಸ್ ಜೀಪ್ ಹತ್ತದೆ ಕಿರಿಕ್ – ಸರ್ಕಸ್ ಮಾಡಿ ವಾಟಾಳ್ ನಾಗರಾಜ್‌ರನ್ನ ಅರೆಸ್ಟ್ ಮಾಡಿದ ಖಾಕಿ

ಗುಜರಾತ್ ಜನರ ಭಾವನೆಗಳನ್ನು ನೋಯಿಸುವ ಉದ್ದೇಶವನ್ನು ನಾವು ಎಂದೂ ಹೊಂದಿಲ್ಲ. ಗುಜರಾತ್ ಜನರ ಬಗ್ಗೆ ತಮಗೆ ಯಾವಾಗಲೂ ಗೌರವವಿದೆ ಮತ್ತು ಮುಂದೆಯೂ ಇರುವುದಾಗಿ ಅವರು ಹೇಳಿದರು. ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಖರ್ಗೆ, ಕೇರಳದ ಜನರ ಶಿಕ್ಷಣ ಮತ್ತು ಬುದ್ಧಿವಂತಿಕೆಯನ್ನು ಶ್ಲಾಘಿಸಿದರು.

ಗುಜರಾತ್ ಮತ್ತು ಇತರ ಸ್ಥಳಗಳಲ್ಲಿರುವಂತೆ, ಕಡಿಮೆ ಶಿಕ್ಷಣ ಹೊಂದಿರುವವರನ್ನು ಮೂರ್ಖರನ್ನಾಗಿಸಬಹುದು ಎಂದು ಪ್ರಧಾನಿ ಮೋದಿ ಅವರನ್ನು ಗುರಿಯಾಗಿಸಿಕೊಂಡು ಅವರು ಟೀಕಿಸಿದ್ದರು. ಕೇರಳದ ಮತದಾರರನ್ನು ದಾರಿ ತಪ್ಪಿಸುವುದು ಅಸಾಧ್ಯ ಎಂದು ಅವರು ಹೇಳಿದ್ದರು. ಈ ಹೇಳಿಕೆಯ ನಂತರ, ಭಾರತೀಯ ಜನತಾ ಪಕ್ಷವು ಕಾಂಗ್ರೆಸ್ ವಿರುದ್ಧ ಹೋರಾಟ ಆರಂಭಿಸಿತು. ಇದು ಕಾಂಗ್ರೆಸ್‌ನ ಒಡೆದು ಆಳುವ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಬಿಜೆಪಿ ವಕ್ತಾರ ಶಹಜಾದ್ ಪೂನಾವಾಲಾ ಹೇಳಿದ್ದರು. ಹಿರಿಯ ನಾಯಕ ರವಿಶಂಕರ್ ಪ್ರಸಾದ್ ಈ ಹೇಳಿಕೆಯನ್ನು ನಾಚಿಕೆಗೇಡಿನ ಸಂಗತಿ ಎಂದು ಕರೆದರು.

Kishor KV