ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣ ಹಿಂದಕ್ಕೆ ಪಡೆಯಲು ಒತ್ತಾಯ! – ಚಿತ್ತಾಪುರದಲ್ಲಿ ಪ್ರತಿಭಟನೆ

ಬಾಲಕಿಯ ಜೊತೆಗಿನ ಅನುಚಿತ ವರ್ತನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ ಮಲ್ಲಿಕಾರ್ಜುನ ಮುತ್ಯಾ ನಾಪತ್ತೆಯಾಗಿದ್ದಾರೆ. ಈಗಾಗಲೇ ಮುತ್ಯಾ ವಿರುದ್ದ ಪೋಕ್ಸೋ ಕೇಸ್ ದಾಖಲಾಗಿದೆ. ಈ ಬೆನ್ನಲ್ಲೇ ಈ ಕೇಸ್ಗೆ ಸಂಬಂಧಿಸಿದಂತೆ ಪ್ರಕರಣ ರದ್ದು ಕೋರಿ ಕರ್ನಾಟಕ ಹೈಕೋರ್ಟ್ ಕಲಬುರಗಿ ವಿಭಾಗೀಯ ಪೀಠದ ಮೆಟ್ಟಿಲೇರಿದ್ದಾರೆ. ಇದೀಗ ಮುತ್ಯಾ ವಿರುದ್ದ ದಾಖಲಾಗಿರುವ ಪ್ರಕರಣವನ್ನು ರದ್ದು ಮಾಡಬೇಕು ಎಂದು ಒತ್ತಾಯಿಸಿ ಕೋಲಿ ಸಮಾಜದ ತಾಲೂಕು ಅಧ್ಯಕ್ಷ ನಿಂಗಣ್ಣ ಹೇಗಲೇರಿ ಅವರ ನೇತೃತ್ವದಲ್ಲಿ ಮುಖಂಡರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಇದನ್ನೂ ಓದಿ: ಅಮೃತಧಾರೆಯಲ್ಲಿ ಅರಳಿದ ಪ್ರೇಮಕ್ಕೆ ನಿಶ್ಚಿತಾರ್ಥದ ಮುದ್ರೆ – ರಾಣವ್ ರಾಧಾ ಎಂಗೇಜ್ಮೆಂಟ್
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮಹಲರೋಜ ಗ್ರಾಮದ ಮಲ್ಲಿಕಾರ್ಜುನ ಮುತ್ಯಾ ಅವರ ವಿರುದ್ಧ ದಾಖಲಾದ ಸುಳ್ಳು ಪೋಕ್ಸೋ ಪ್ರಕರಣ ಹಿಂದಕ್ಕೆ ಪಡೆದು ರದ್ದುಪಡಿಸಬೇಕು. ಸುಳ್ಳು ಪ್ರಕರಣ ದಾಖಲಿಸಿದ ಮತ್ತು ಅದಕ್ಕೆ ಪ್ರೋತ್ಸಾಹಿಸಿರುವ ಅಧಿಕಾರಿಗಳ, ಬಾಲಕಿಯ ಮತ್ತು ಬಾಲಕಿಯ ಕುಟುಂಬದ ಮಾನ ಹರಾಜು ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕೋಲಿ ಸಮಾಜದ ತಾಲೂಕು ಅಧ್ಯಕ್ಷ ನಿಂಗಣ್ಣ ಹೇಗಲೇರಿ ಅವರ ನೇತೃತ್ವದಲ್ಲಿ ಮುಖಂಡರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಬಳಿಕ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮಹಲರೋಜ ಗ್ರಾಮದಲ್ಲಿನ ಮಲ್ಲಿಕಾರ್ಜುನ ಮುತ್ಯಾ ಅವರು ಭಕ್ತರ ಪಾಲಿನ ಆರಾಧ್ಯರಾಗಿದ್ದಾರೆ. ಅಪಾರ ಸಂಖ್ಯೆಯಲ್ಲಿ ಭಕ್ತರು ಅವರ ಮಠಕ್ಕೆ ಹೋಗಿ ದರ್ಶನ ಪಡೆದು ತಮ್ಮ ಕಷ್ಟ, ನೋವು, ದುಃಖ ತೋಡಿಕೊಂಡು ಪರಿಹಾರ ಕಂಡುಕೊಳ್ಳುತ್ತಾರೆ. ಮಲ್ಲಿಕಾರ್ಜುನ ಮುತ್ಯಾ ಅವರ ಜನಪ್ರಿಯತೆ ಹೆಚ್ಚಾಗಿದೆ. ಪರಿಸ್ಥಿತಿ ಹೀಗಿರುವಾಗ ಮಠಕ್ಕೆ ಬಂದಿದ್ದ ಬಾಲಕಿಯೊಬ್ಬಳನ್ನು ಮಲ್ಲಿಕಾರ್ಜುನ ಮುತ್ಯಾ ಅವರು ಒಬ್ಬ ತಂದೆ ತನ್ನ ಮಕ್ಕಳಿಗೆ ತೋರುವ ಮಕ್ಕಳ ಮೇಲಿನ ಸಹಜ ಪ್ರೀತಿ ತೋರಿಸಿದ್ದಾರೆ ಎಂದರು. ಬಾಲಕಿಯ ತಾಯಿ, ತಂದೆ, ಚಿಕ್ಕಪ್ಪ ಆ ಸಂದರ್ಭದಲ್ಲಿ ಇದ್ದು ತಮ್ಮ ಬಾಲಿಕಿಗೆ ಮುತ್ಯಾ ಅವರು ತೋರಿದ ಪ್ರೀತಿ ಕಂಡು ಸಂಭ್ರಮಿಸಿ ಸಂತೋಷಪಟ್ಟಿದ್ದಾರೆ. ವಿಡಿಯೋ ಸಹ ಮಾಡಿಕೊಂಡಿದ್ದಾರೆ. ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿದ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷರು ವಿಡಿಯೋದ ಸತ್ಯಾಸತ್ಯತೆಯನ್ನು ಅರಿತುಕೊಳ್ಳದೆ, ಪರಿಶೀಲನೆಗೆ ಸೂಚಿಸದೆ ಶ್ರೀಗಳ ವಿರುದ್ಧ ಪ್ರಕರಣ ದಾಖಲಿಸಲು ಮುಂದಾಗಿರುವುದು ಕಾನೂನು ಬಾಹಿರ. ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಹರಡಿದ ವಿಡಿಯೋ ಮತ್ತು ವದಂತಿ ಆಧರಿಸಿ ಮತ್ತು ಸುಳ್ಳು ವರದಿ ನಂಬಿಕೊಂಡು ಯಾದಗಿರಿ ಜಿಲ್ಲಾಡಳಿತ ಮಲ್ಲಿಕಾರ್ಜುನ ಮುತ್ಯಾ ಅವರ ವಿರುದ್ಧ ನಿಲುವು ತಾಳಿದ್ದು ಅಧಿಕಾರ ದುರುಪಯೋಗ ಮತ್ತು ಬಾಲಕಿಯ, ಬಾಲಕಿಯ ಕುಟುಂಬದ ಮಾನ, ಮರ್ಯಾದೆ, ಘನತೆ, ಗೌರವಕ್ಕೆ ಧಕ್ಕೆ ತಂದು ಸಾರ್ವಜನಿಕವಾಗಿ ಕಳಂಕ ಅಂಟಿಸಿದಂತ್ತಾಗಿದಲ್ಲದೆ ಮಾನಹಾನಿ ಮಾಡಿದೆ ಹೀಗಾಗಿ ಇದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದರು.
ಪೋಕ್ಸೋ ಕಾಯ್ದೆಯನ್ನು ಆಡಳಿತವು ತನ್ನ ಮೂಗಿನ ನೇರಕ್ಕೆ ವ್ಯಾಖ್ಯಾನಿಸಿಕೊಂಡು, ಅರ್ಥೈಸಿಕೊಂಡು, ಪೋಕ್ಸೋ ಕಾಯ್ದೆ ನಿಯಮ ಉಲ್ಲಂಘಸಿ ಮುತ್ಯಾ ಅವರ ಹೆಸರಿಗೆ ಕಳಂಕ ತರುವ ಅಕ್ಷಮ್ಯ ಅಪರಾಧವೆಸಗಿದೆ. ಅದನ್ನು ಸಮಾಜವು ಬಲವಾಗಿ ವಿರೋಧಿಸುತ್ತದೆ ಎಂದರು.
ಮಹಲರೋಜ ಮಲ್ಲಿಕಾರ್ಜುನ ಮುತ್ಯಾ ಅವರ ವಿರುದ್ಧ ದಾಖಲಿಸಿರುವ ಸುಳ್ಳು ಪೋಕ್ಸೋ ಪ್ರಕರಣ ಸರ್ಕಾರ ತಕ್ಷಣ ಹಿಂದಕ್ಕೆ ಪಡೆದು ರದ್ದುಪಡಿಸಬೇಕು. ಪೋಕ್ಸೋ ಕಾಯ್ದೆ ನಿಯಮಗಳಿಗೆ ವಿರುದ್ಧವಾಗಿ ಪೊಲೀಸ್ ಠಾಣೆಗೆ ದೂರು ನೀಡಿರುವ ಸಿಡಿಪಿಒ ಅವರನ್ನು ತಕ್ಷಣ ಸೇವೆಯಿಂದ ಅಮಾನತುಗೊಳಿಸಿ ಅವರ ವಿರುದ್ಧ ಎಫ್.ಐ.ಆರ್ ದಾಖಲಿಸಬೇಕು ಎಂದು ಆಗ್ರಹಿಸಿದರು.

ನೋಡಿರಿ

