ಮಲ್ಪೆ ಕಡಲ ಕಿನಾರೆಯಲ್ಲಿ ಈಜು, ಮೋಜಿಗೆ ಬ್ರೇಕ್‌!

ಮಲ್ಪೆ ಕಡಲ ಕಿನಾರೆಯಲ್ಲಿ ಈಜು, ಮೋಜಿಗೆ ಬ್ರೇಕ್‌!

ಉಡುಪಿ: ರಾಜ್ಯದ ಪ್ರಮುಖ ಪ್ರವಾಸಿ ಕೇಂದ್ರಗಳಲ್ಲೊಂದಾದ ಉಡುಪಿ ಮಲ್ಪೆ ಬೀಚ್‌ ನಲ್ಲಿ ಮಳೆಗಾಲದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ನಾಲ್ಕು ತಿಂಗಳುಗಳ ಕಾಲ ವಿವಿಧ ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ.

ಮೇ 16 ರಿಂದ ಸೆ. 15ರ ವರೆಗೆ ಮಲ್ಪೆ ಬೀಚ್‌ ಹಾಗೂ ಸೀ ವಾಕ್‌ ಪ್ರದೇಶಗಳಲ್ಲಿ ಪ್ರವಾಸಿ ಬೋಟ್‌ ಚಟುವಟಿಕೆಗಳನ್ನು ಮತ್ತು ಸೈಂಟ್‌ ಮೇರೀಸ್‌ ದ್ವೀಪಕ್ಕೆ ತೆರಳುವ ಪ್ರವಾಸಿ ಬೋಟ್‌ ಚಟುವಟಿಕೆಗಳನ್ನು ಹಾರ್ಬರ್‌ ಕ್ರಾಫ್ಟ್ ನಿಯಮಗಳ ಅನ್ವಯ ಸ್ಥಗಿತಗೊಳಿಸಲಾಗಿದ್ದು, ಜಲಸಾಹಸ ಕ್ರೀಡಾ ಚಟುವಟಿಕೆಗಳಿಗೂ ನಿಷೇಧ ಹೇರಲಾಗಿದೆ ಎಂದು ನಗರಸಭೆ ಪೌರಾಯುಕ್ತರು ಹಾಗೂ ಮಲ್ಪೆ ಅಭಿವೃದ್ಧಿ ಸಮಿತಿ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ: ನಂದಿ ಗಿರಿಧಾಮ ಪ್ರವೇಶ ಸಮಯದಲ್ಲಿ ಬದಲಾವಣೆ – ಹೊಸ ವೇಳಾಪಟ್ಟಿಯಲ್ಲಿ ಏನೇನಿದೆ?

ಇನ್ನೇನು ಜೂನ್ ಮೊದಲ ವಾರದಲ್ಲಿ ಮಾನ್ಸೂನ್ ಮಾರುತ ಕರಾವಳಿ ಜಿಲ್ಲೆಗಳಿಗೆ ಅಪ್ಪಳಿಸಲಿದ್ದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಮಧ್ಯೆ ಬಂಗಾಳ ಕೊಲ್ಲಿಯಲ್ಲಿ ʼಮೋಚಾʼ ಚಂಡಮಾರುತ ಭಾರೀ ಅಪಾಯ ಹುಟ್ಟುಹಾಕಿದೆ. ಈ ಎಲ್ಲಾ ಹಿನ್ನೆಲೆ ಮಲ್ಪೆ ಸೀ ವಾಕ್ ಪ್ರದೇಶದಲ್ಲಿ ಹಾಗೂ ಸೇಂಟ್ ಮೇರಿಸ್ ದ್ವೀಪಗಳಿಗೆ ತೆರಳುವ ಬೋಟ್​ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಅಲ್ಲದೇ, ಸಮುದ್ರ ಕಿನಾರೆಯಲ್ಲಿ ನಡೆಸುವ ಯಾವುದೇ ಜಲಸಾಹಸ ಕ್ರೀಡೆಗಳನ್ನು ನಡೆಸದಂತೆ ತಾಕೀತು ಮಾಡಲಾಗಿದೆ. ಸಾರ್ವಜನಿಕರು ಹಾಗೂ ಪ್ರವಾಸಿಗರು ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

suddiyaana