ಆಕ್ಸ್ಫರ್ಡ್ ವಿವಿ ಮಮತಾ ಬ್ಯಾನರ್ಜಿ ಬಾಷಣದ ವೇಳೆ ಗಲಾಟೆ – ರಾಜಕೀಯ ವೇದಿಕೆ ಮಾಡಬೇಡಿ ಎಂದು ಆಕ್ರೋಶ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಾರ್ಚ್ 27 ರಂದು ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ಕೆಲ್ಲಾಗ್ ಕಾಲೇಜಿನಲ್ಲಿ ಮಾಡಿದ ಭಾಷಣದ ಸಮಯದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಎದುರಿಸಬೇಕಾಯಿತು. ಪಶ್ಚಿಮ ಬಂಗಾಳದ ಅಭಿವೃದ್ಧಿ ಮತ್ತು ಸಾಮಾಜಿಕ ಯೋಜನೆಗಳ ಬಗ್ಗೆ ಮಾತನಾಡುತ್ತಿದ್ದರು. ಭಾಷಣದ ಮಧ್ಯೆಯೇ ವಿರೋಧ ವ್ಯಕ್ತವಾಯಿತು. ಮಮತಾ 1990 ರ ದಶಕದ ಆರಂಭದ ತಮ್ಮ ಹಳೆಯ ಫೋಟೊವನ್ನು ತೋರಿಸಿದರು, ಅದರಲ್ಲಿ ಅವರು ತಲೆಗೆ ಬ್ಯಾಂಡೇಜ್ ಹಾಕಿಕೊಂಡಿದ್ದರು. ತಾವು ವಿರೋಧ ಪಕ್ಷದಲ್ಲಿದ್ದಾಗ ತಮ್ಮನ್ನು ಕೊಲ್ಲಲು ಪ್ರಯತ್ನ ನಡೆಸಲಾಗಿತ್ತು ಎಂದು ಅವರು ಹೇಳಿಕೊಂಡಿದ್ದಾರೆ. ಕೋಲ್ಕತ್ತಾದ ಆರ್ಜಿ ಕರ್ ವೈದ್ಯಕೀಯ ಕಾಲೇಜಿನಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಬಗ್ಗೆ ಕೆಲವರು ಅವರಿಗೆ ಪ್ರಶ್ನೆಗಳನ್ನು ಕೇಳಿದರು. ಇಲ್ಲಿ ರಾಜಕೀಯ ಮಾಡಬೇಡಿ. ಈ ವೇದಿಕೆ ರಾಜಕೀಯಕ್ಕಾಗಿ ಅಲ್ಲ. ನೀವು ಸುಳ್ಳು ಹೇಳುತ್ತಿದ್ದೀರಿ. ಇದನ್ನು ರಾಜಕೀಯ ವೇದಿಕೆಯನ್ನಾಗಿ ಮಾಡಬೇಡಿ ಎಂದು ಜನರು ಕೂಗಿದ್ದಾರೆ.ನಂತ್ರ ದೊಡ್ಡ ಮಟ್ಟದಲ್ಲಿ ಗದ್ದಲ ಉಂಟಾಯ್ತು.