ಮಮತಾ ಬ್ಯಾನರ್ಜಿ ನಿವಾಸದಲ್ಲಿ ಭದ್ರತಾ ಲೋಪ – ಬಂದೂಕು, ಚಾಕು ಹಿಡಿದುಕೊಂಡು ಮನೆಗೆ ನುಗ್ಗಲು ಯತ್ನಿಸಿದ ಅಪರಿಚಿತ ವ್ಯಕ್ತಿ
ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಿವಾಸದಲ್ಲಿ ಭದ್ರತಾ ಲೋಪ ಸಂಭವಿಸಿದೆ. ಮಮತಾ ಬ್ಯಾನರ್ಜಿ ಅವರ ಮನೆಗೆ ಅಪರಿಚಿತ ವ್ಯಕ್ತಿಯೊಬ್ಬ ಬಂದೂಕು ಮತ್ತು ಚಾಕು ಹಿಡಿದುಕೊಂಡು ಮನೆಗೆ ನುಗ್ಗಲು ಯತ್ನಿಸಿದ್ದಾನೆ. ಈ ವೇಳೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಇದನ್ನೂ ಓದಿ: ರಾಷ್ಟ್ರ ರಕ್ಷಣೆ ಮಾಡಿದ ನನಗೆ ನನ್ನ ಪತ್ನಿಯನ್ನು ರಕ್ಷಣೆ ಮಾಡಲು ಆಗಲಿಲ್ಲ – ಮಣಿಪುರದಲ್ಲಿ ನಿವೃತ್ತ ಯೋಧನ ಕಣ್ಣೀರು
ಕೋಲ್ಕತ್ತಾದ ಹರೀಶ್ ಚಟರ್ಜಿ ಸ್ಟ್ರೀಟ್‌ನಲ್ಲಿರುವ ಮಮತಾ ಬ್ಯಾನರ್ಜಿ ಅವರ ನಿವಾಸಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ಶುಕ್ರವಾರ ಬೆಳಗ್ಗೆ ಪ್ರವೇಶಿಸಲು ಯತ್ನಿಸಿದ್ದಾನೆ. ಈ ವ್ಯಕ್ತಿಯು ಬಂದೂಕು ಮತ್ತು ಚಾಕು ಹಿಡಿದುಕೊಂಡು ಮನೆಗೆ ನುಗ್ಗಲು ಯತ್ನಿಸುತ್ತಿದ್ದಾಗ ಪೊಲೀಸರು ಆತನನ್ನು ತಡೆದು, ಬಂಧನಕ್ಕೊಳಪಡಿಸಿದ್ದಾರೆ. ಬಂಧಿತ ವ್ಯಕ್ತಿಯನ್ನು ಶೇಖ್ ನೂರ್ ಎಂದು ಗುರುತಿಸಲಾಗಿದೆ.
ಶೇಖ್ ನೂರ್ ಪೊಲೀಸರಂತೆ ನಟಿಸಿ ಕಪ್ಪು ಕಾರಿನಲ್ಲಿ ಬಂದಿದ್ದಾನೆ. ಕಾರಿನಿಂದ ಇಳಿದಾಗ ಆತನನ್ನು ಪೊಲೀಸರು ತಡೆದಿದ್ದಾರೆ. ಆದರೆ, ಆತ ತನ್ನನ್ನು ತಾನು ಪೋಲೀಸ್ ಅಧಿಕಾರಿ ಎಂಬಂತೆ ಬಿಂಬಿಸಲು ಯತ್ನಿಸುತ್ತಿದ್ದಾನೆ. ಅಷ್ಟೇ ಅಲ್ಲದೇ ವಿವಿಧ ಭದ್ರತಾ ಏಜೆನ್ಸಿಗಳಿಗೆ ಸೇರಿದ ಹಲವಾರು ನಕಲಿ ಗುರುತಿನ ಚೀಟಿಗಳನ್ನು ತಂದಿದ್ದಾನೆ. ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಲು ಬಂದಿದ್ದೇನೆ ಎಂದು ಹೇಳಿದ್ದಾನೆ. ಅಷ್ಟೇ ಅಲ್ಲದೇ ಮಮತಾ ನಿವಾಸದ ಬಳಿಯ ಲೇನ್‌ಗೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾನೆ. ಅನುಮಾನಗೊಂಡ ಪೊಲೀಸರು ಆತನನ್ನು ಬಂಧಿಸಿದ್ದಾರೆ.