ಮಂಗಳೂರು ರಿಕ್ಷಾ ಸ್ಫೋಟ ಪ್ರಕರಣ- ಇದೊಂದು ಭಯೋತ್ಪಾದನೆ ಕೃತ್ಯ

ಮಂಗಳೂರು ರಿಕ್ಷಾ ಸ್ಫೋಟ ಪ್ರಕರಣ- ಇದೊಂದು ಭಯೋತ್ಪಾದನೆ ಕೃತ್ಯ

ಮಂಗಳೂರು: ‘ನಗರದ ನಾಗುರಿಯಲ್ಲಿ ಚಲಿಸುತ್ತಿದ್ದ ರಿಕ್ಷಾದಲ್ಲಿ ಶನಿವಾರ ಸಂಜೆ ಸಂಭವಿಸಿದ ಲಘು ಸ್ಫೋಟವು ಆಕಸ್ಮಿಕ ಘಟನೆಯಲ್ಲ. ಇದೊಂದು ಭಯೋತ್ಪಾದನೆ ಕೃತ್ಯ’ ಎಂದು ಡಿಜಿಪಿ ಪ್ರವೀಣ್ ಸೂದ್ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ವೋಟರ್ ಐಡಿ ಪರಿಷ್ಕರಣೆ ಹಗರಣ – ಸರ್ಕಾರದ ವಿರುದ್ಧ ಕಾಂಗ್ರೆಸ್ ಆರೋಪ

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಇದು ಆಕಸ್ಮಿಕ ಸ್ಫೋಟವಲ್ಲ. ಗಂಭೀರ ಹಾನಿಯನ್ನುಂಟು ಮಾಡುವ ಉದ್ದೇಶದಿಂದ ಮಾಡಿದ ಭಯೋತ್ಪಾದನಾ ಕೃತ್ಯ. ರಾಜ್ಯ ಪೊಲೀಸರು  ಕೇಂದ್ರ ಏಜೆನ್ಸಿಗಳೊಂದಿಗೆ ಇದರ ಬಗ್ಗೆ ಆಳವಾಗಿ ಅಧ್ಯಯನ ನಡೆಸುತ್ತಿದ್ದಾರೆ ಎಂದರು.

ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯ ಬಳಿ ಇದ್ದ ಕುಕ್ಕರ್ ಬಾಂಬ್ ಸ್ಫೋಟಗೊಂಡಿದೆ. ಆದರೆ, ಆ ಪ್ರಯಾಣಿಕನ ಹೆಸರನ್ನು ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ.

‘ಘಟನೆ ಬಗ್ಗೆ ಚಾಲಕ ಪುರುಷೋತ್ತಮ ಪೂಜಾರಿ ಕೆಲ ಮಾಹಿತಿ ನೀಡಿದ್ದಾರೆ. ಪ್ರತ್ಯಕ್ಷ ದರ್ಶಿಗಳಿಂದಲೂ ಬಹಳಷ್ಟು ಮಾಹಿತಿ ಕಲೆ ಹಾಕಿದ್ದೇವೆ. ಆರೋಪಿಯು ರಿಕ್ಷಾ ಹತ್ತಿದ ಬಳಿಕ ಪಂಪ್‌ವೆಲ್‌ಗೆ ಹೋಗುವಂತೆ ಹೇಳಿದ್ದ. ಆತನ ಬಗ್ಗೆ ಬಹಳಷ್ಟು ಮಾಹಿತಿ ಕಲೆ ಹಾಕಿದ್ದೇವೆ. ಆತನ ಬಂಧುಗಳನ್ನೂ ಕರೆಸಿಕೊಳ್ಳುತ್ತಿದ್ದೇವೆ ಎಂದು ಹೆಚ್ಚುವರಿ ಪೊಲೀಸ್ ನಿರ್ದೇಶಕ ಅಲೋಕ್ ಕುಮಾರ್  ಹೇಳಿದ್ದಾರೆ.

‘ಆರೋಪಿಗೆ ಯಾರ ಜೊತೆ ಸಂಪರ್ಕ ಇದೆ, ಅವನು ಇಲ್ಲಿಗೆ ಹೇಗೆ ಬಂದ, ಎಲ್ಲಿ ವಾಸ ಇದ್ದ, ಬಾಂಬ್ ಎಲ್ಲಿ ತಯಾರಿಸಲಾಗಿತ್ತು ಎಂಬುದನ್ನು ಪತ್ತೆ ಹಚ್ಚಲು ವಿಶೇಷ ತಂಡಗಳನ್ನು ರಚಿಸಲಾಗಿದೆ. ಇಲ್ಲಿ ಪ್ರಕರಣದ ತನಿಖೆಗೆ ಎಸಿಪಿ ಪರಮೇಶ್ವರ ಹೆಗಡೆ ಅವರನ್ನು ನೇಮಿಸಲಾಗಿದೆ. ಅವರ ನೇತೃತ್ವದ ತಂಡವು ಬಹಳಷ್ಟು ಮಾಹಿತಿ ಕಲೆಹಾಕಿದೆ. ಕೇಂದ್ರೀಯ ತನಿಖಾ ಏಜೆನ್ಸಿಗಳ ಜೊತೆಗೂ ಸಂಪರ್ಕದಲ್ಲಿದ್ದೇವೆ’ ಎಂದರು.

suddiyaana