ಮಂಗಳೂರಿನಲ್ಲಿ ಪಕ್ಕಾ ಸ್ಕೇಚ್ ಹಾಕಿ ರೌಡಿ ಶೀಟರ್ ಮ*ರ್ಡರ್‌ – ಬೆಳಗ್ಗೆ 4 ಗಂಟೆಗೆ ಹಂತಕರ ಪ್ಲ್ಯಾನ್ ಹೇಗಿತ್ತು ಗೊತ್ತಾ?

ಮಂಗಳೂರಿನಲ್ಲಿ ಪಕ್ಕಾ ಸ್ಕೇಚ್ ಹಾಕಿ ರೌಡಿ ಶೀಟರ್ ಮ*ರ್ಡರ್‌ – ಬೆಳಗ್ಗೆ 4 ಗಂಟೆಗೆ ಹಂತಕರ ಪ್ಲ್ಯಾನ್ ಹೇಗಿತ್ತು ಗೊತ್ತಾ?

ಬೆಳ್ಳಂಬೆಳಗ್ಗೆ ಕರಾವಳಿಯಲ್ಲಿ ನೆತ್ತರು ಹರಿದಿದೆ. ಮಂಗಳೂರು  ಹೊರವಲಯದ ತೊಕ್ಕೊಟ್ಟು   ಫೈಓವರ್ ಮೇಲೆ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಒಬ್ಬನನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮುಳ್ಳುಗುಡ್ಡೆ ಹೌಸ್ ತಲಪಾಡಿ ನಿವಾಸಿ ಆರಿಫ್ @ ಟಾಬ್ಲೆಟ್ ಆರಿಫ್ ಕೊಲೆಯಾದ ರೌಡಿಶೀಟರ್. ಮುಂಜಾನೆ ಸುಮಾರು 4 ಗಂಟೆ ವೇಳೆಗೆ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: IPL ಆರಂಭಕ್ಕೂ ಮುನ್ನ 10 ತಂಡಗಳ ನಾಯಕರೊಂದಿಗೆ ಸಭೆ – ರೂಲ್ಸ್ ಕೇಳಿ ಕ್ಯಾಪ್ಟನ್‌ಗಳು ಆಕ್ರೋಶಗೊಂಡಿದ್ದೇಕೆ ಗೊತ್ತಾ?

ಫ್ಲೈಓವರ್ ಮೇಲೆ ಕಾಯುತ್ತಾ ಕುಳಿತಿದ್ದ ದುಷ್ಕರ್ಮಿಗಳು, ಆರಿಫ್ ಪ್ರಯಾಣಿಸುತ್ತಿದ್ದ ಬೈಕ್ ಅಡ್ಡಗಟ್ಟಿ, ತಲೆಗೆ ಕಡಿದು ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಆರೋಪಿಗಳು ಕಾರಿನಲ್ಲಿ ಬಂದು ಹಿಂಬದಿಯಿಂದ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾರೆ. ಆರೋಪಿಗಳು ಕಾರಿನಲ್ಲಿ ಬಂದು ಹಿಂಬದಿಯಿಂದ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾರೆ.  ಘಟನಾ ಸ್ಥಳಕ್ಕೆ ಉಳ್ಳಾಲ ಠಾಣೆ ಪೊಲೀಸರು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಆರಂಭಿಸಿದ್ದಾರೆ. ಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ. . ಘಟನೆ ಹಿನ್ನೆಲೆಯಲ್ಲಿ ಗ್ಯಾಂಗ್ ವಾರ್ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

“ವ್ಯಕ್ತಿಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೈದು ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಮೃತನ ಮೇಲೆ ಈ ಹಿಂದೆ ಪ್ರಕರಣಗಳು ದಾಖಲಾಗಿದ್ದವು” ಎಂದು ಮಂಗಳೂರು ನಗರ ಪೊಲೀಸ್​ ಆಯುಕ್ತ ಸುಧೀರ್​ ಕುಮಾರ್​ ರೆಡ್ಡಿ ಮಾಹಿತಿ ನೀಡಿದ್ದಾರೆ. ಆರಿಫ್ ವಿರುದ್ಧ 2008ರಲ್ಲಿ ಎರಡು ಪ್ರಕರಣಗಳು ದಾಖಲಾಗಿದ್ದವು. 2022ರಲ್ಲಿ ಉಚ್ಚಿಲ ಸೇತುವೆ ಸಮೀಪ ಇವರ ಮೇಲೆ ಕೊಲೆ ಯತ್ನ ನಡೆದಿದ್ದು, ಆ ಪ್ರಕರಣಕ್ಕೆ ಸಂಬಂಧಿಸಿದಂತೆ ನೌಫಾಲ್ ಹಾಗೂ ಆತನ ತಂಡವನ್ನು ಪೊಲೀಸರು ಬಂಧಿಸಿದ್ದರು.

Kishor KV