ಬಿಜೆಪಿ ಮುಖಂಡ ಪ್ರವೀಣ್​ ನೆಟ್ಟಾರು ಹತ್ಯೆಯ ಪ್ರಕರಣದ ಪ್ರಮುಖ ಆರೋಪಿ ಬಂಧನ  

ಬಿಜೆಪಿ ಮುಖಂಡ ಪ್ರವೀಣ್​ ನೆಟ್ಟಾರು ಹತ್ಯೆಯ ಪ್ರಕರಣದ ಪ್ರಮುಖ ಆರೋಪಿ ಬಂಧನ  

ಸುಮಾರು ಎರಡು ವರ್ಷಗಳ ಹಿಂದೆ ನಡೆದ ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದೆ. ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ.

ಇದನ್ನೂ ಓದಿ: ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಪ್ರಕರಣ –  ಮಂತ್ರಿ ಮಾಲ್ ಗೆ ಮತ್ತೆ ಬೀಗ ಹಾಕಿದ ಬಿಬಿಎಂಪಿ!

2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು, ಆತನ ಕೋಳಿ ಅಂಗಡಿ ಬಳಿಯೇ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಬಳಿಕ ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರ್​ನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ಇದಾದ ಬಳಿಕ ದುಷ್ಕರ್ಮಿಗಳು ವಿವಿಧ ಕಡೆಗಳಿಗೆ ಪರಾರಿಯಾಗಿದ್ದರು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಅರೆಸ್ಟ್‌ ಆಗಿದ್ದಾನೆ. ಹಾಸನ ಜಿಲ್ಲೆ ಸಕಲೇಶಪುರದ ಆನೆಮಹಲ್​ ಆನೆಮಹಲ್ ಬಳಿ ಬಂಧಿಸಿದ್ದಾರೆ. ಸುಳ್ಯದ ಶಾಂತಿನಗರ ನಿವಾಸಿ ಮುಸ್ತಾಫ ಪೈಚಾರ್ (43) ಬಂಧಿತ ಆರೋಪಿ. ಆರೋಪಿಯನ್ನು ಅಧಿಕಾರಿಗಳು ಬೆಂಗಳೂರು ಎನ್​ಐಎ ಕಚೇರಿಗೆ ಕರೆದೊಯ್ದಿದ್ದಾರೆ.

ಪ್ರವೀಣ ನೆಟ್ಟಾರು ಕೊಲೆ ನಡೆದ ಸಂದರ್ಭದಲ್ಲಿ ರಾಜ್ಯದಲ್ಲಿ ಬಸವರಾ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಆಡಳಿತ ನಡೆಸುತ್ತಿತ್ತು. ಬಿಜೆಪಿ ಆಡಳಿತದಲ್ಲೇ ತಮ್ಮದೇ ಕಾರ್ಯಕರ್ತನೋರ್ವನ ಕೊಲೆ ಕಾರ್ಯಕರ್ತರನ್ನು ಕೆರಳಿಸುವಂತೆ ಮಾಡಿತ್ತು. ಬಿಜೆಪಿ ಸರ್ಕಾರದ ವಿರುದ್ಧ ಹಿಂದೂ ಸಂಘಟನೆಗಳು ಮಾತ್ರವಲ್ಲದೆ ಬಿಜೆಪಿ ಕಾರ್ಯಕರ್ತರು ಕೂಡ ಆಕ್ರೋಶ ಹೊರಹಾಕಿದ್ದರು. ಘಟನೆ ನಂತರ ಬಿಜೆಪಿ ರಾಜ್ಯಾಧ್ಯಕ್ಷರ ಕಾರು ಮಾತ್ರವಲ್ಲ, ರಾಜ್ಯ ಸರ್ಕಾರದ ಬುಡವೇ ಅಲುಗಾಡಿತ್ತು. ರಾಜ್ಯಾದ್ಯಂತ ಸಾಮೂಹಿಕ ರಾಜೀನಾಮೆ ನೀಡಿದ್ದರು.

Shwetha M