ಮಂಗ್ಲಿ ಬರ್ತ್‌ಡೇ ಪಾರ್ಟಿಗೆ ಖಾಕಿ ಶಾಕ್ – ನನಗೆ ನಿಜವಾಗಿ ವಿಷ್ಯನೇ ತಿಳಿದಿರಲಿಲ್ಲ ಎಂದ ಮಂಗ್ಲಿ

ಮಂಗ್ಲಿ ಬರ್ತ್‌ಡೇ ಪಾರ್ಟಿಗೆ ಖಾಕಿ ಶಾಕ್ –  ನನಗೆ ನಿಜವಾಗಿ ವಿಷ್ಯನೇ ತಿಳಿದಿರಲಿಲ್ಲ ಎಂದ ಮಂಗ್ಲಿ

ಖ್ಯಾತ ಗಾಯಕಿ ಮಂಗ್ಲಿ ಅವರ ಬರ್ತ್​ಡೇ ದಿನ ನಡೆದ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ವೇಳೆ ಪೊಲೀಸರು ಮದ್ಯ ಮತ್ತು ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ ಎಂಬ ವರದಿ ಇದೆ. ನಂತರ ಮಂಗ್ಲಿ ತಮ್ಮ ಮೌನವನ್ನು ಮುರಿದಿದ್ದಾರೆ. ಅವರು ಡ್ರಗ್ಸ್ ಬಳಕೆಯನ್ನು ನಿರಾಕರಿಸಿದ್ದಾರೆ ಮತ್ತು ಪಾರ್ಟಿಗೆ ಅಗತ್ಯ ಪರವಾನಗಿ ಪಡೆಯದಿರುವ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.

 

ಖ್ಯಾತ ಗಾಯಕಿ ಮಂಗ್ಲಿ ಸದ್ಯ ಸುದ್ದಿಯಲ್ಲಿದ್ದಾರೆ. ಜೂನ್ 10ರಂದು ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ತಾಲೂಕಿನ ಎರ್ಲಪಲ್ಲಿಯ ಫಾರ್ಮ್​ಹೌಸ್​​​ನಲ್ಲಿ ನಡೆದ ಅವರ ಬರ್ತ್​ಡೇ ಪಾರ್ಟಿ ಮೇಲೆ ಪೊಲೀಸರು ದಾಳಿ ಮಾಡಿದ್ದರು. ಈ ವೇಳೆ ಡ್ರಗ್ಸ್ ಹಾಗೂ ವಿದೇಶಿ ಮದ್ಯ ವಶಕ್ಕೆ ಪಡೆದ ಬಗ್ಗೆ ಪೊಲೀಸರು ಹೇಳಿಕೆ ನೀಡಿದ್ದಾರೆ. ಇದನ್ನು ಮಂಗ್ಲಿ ಅಲ್ಲಗಳೆದಿದ್ದಾರೆ. ಅಲ್ಲದೆ ಕೆಲವು ವಿಚಾರದಲ್ಲಿ ತಪ್ಪಾಗಿದೆ ಎಂದು ಒಪ್ಪಿಕೊಂಡಿರುವ ಅವರು, ಮಾರ್ಗದರ್ಶನಕ್ಕೊಬ್ಬರು ಬೇಕಿತ್ತು ಎಂದಿದ್ದಾರೆ.

‘ಆಲ್ಕೋಹಾಲ್ ನೀಡುವ ವಿಚಾರದಲ್ಲಿ ಒಪ್ಪಿಗೆ ಪಡೆಯಬೇಕು ಎನ್ನುವ ವಿಷಯ ನನಗೆ ನಿಜವಾಗಿಯೂ ತಿಳಿದಿರಲಿಲ್ಲ. ನಾನು ಹಾಗೆ ಮಾಡಲಿಲ್ಲ ಎಂಬ ಕೊರಗು ಇದೆ. ಯಾರಾದರೂ ನನಗೆ ಮಾರ್ಗದರ್ಶನ ನೀಡಿದ್ದರೆ, ನಾನು ಹಾಗೆ ಮಾಡುತ್ತಿದ್ದೆ. ಪಾರ್ಟಿಯಲ್ಲಿ ಯಾವುದೇ ವಿದೇಶಿ ಮದ್ಯ ಇರಲಿಲ್ಲ. ಲಭ್ಯವಿದ್ದದ್ದು ಸ್ಥಳೀಯ ಮದ್ಯ ಮಾತ್ರ. ಪೊಲೀಸರು ಸಹ ಇದನ್ನೇ ದೃಢಪಡಿಸಿದ್ದಾರೆ. ಯಾವುದೇ ಮಾದಕ ದ್ರವ್ಯ ಸಿಕ್ಕಿಲ್ಲ ಎಂದು ಕೂಡ ಹೇಳಿದ್ದಾರೆ’ ಎಂದು ಮಂಗ್ಲಿ ಹೇಳಿದ್ದಾರೆ.

Kishor KV

Leave a Reply

Your email address will not be published. Required fields are marked *