ಮಣಿಪುರದಲ್ಲಿ ಗಲಭೆ ಹತ್ತಿಕ್ಕಲು ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆ ವಿಸ್ತರಣೆ – ಇನ್ನೂ 6 ತಿಂಗಳ ಕಾಲ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ
ಈಶಾನ್ಯ ರಾಜ್ಯ ಮಣಿಪುರದಲ್ಲಿ ಹಿಂಸಾಚಾರ ಮುಂದುವರಿದಿದ್ದು ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದೆ. ಬುಡಕಟ್ಟು ಸಮುದಾಯದ ಇಬ್ಬರು ವಿದ್ಯಾರ್ಥಿಗಳ ಅಪಹರಣ ಮತ್ತು ಹತ್ಯೆ ಫೋಟೋಗಳು ವೈರಲ್ ಆದ ಬಳಿಕ ಇಡೀ ರಾಜ್ಯದಲ್ಲಿ ಪಕ್ಷುಬ್ದ ಸ್ಥಿತಿ ನಿರ್ಮಾಣವಾಗಿದೆ.. ಪರಿಸ್ಥಿತಿ ನಿಯಂತ್ರಣಕ್ಕೆ ಅಲ್ಲಿನ ಬಿಜೆಪಿ ಸರ್ಕಾರ ರಾಜ್ಯ ರಾಜಧಾನಿ ಇಂಫಾಲದಲ್ಲಿ ಕರ್ಫ್ಯೂ ಹೇರಿದೆ. ಇದರ ನಡುವೆ ಮತ್ತೆ ಹಿಂಸಾಚಾರ ಭುಗಿಲೆದ್ದ ಬೆನ್ನಲ್ಲೇ ಮಣಿಪುರದಲ್ಲಿ (Manipura) ಆಫ್ಸ್ಪಾ (ಸಶಸ್ತ್ರ ಪಡೆಗಳ ವಿಶೇಷಾಧಿಕಾರ) ಕಾಯ್ದೆಯನ್ನು ಇನ್ನೂ 6 ತಿಂಗಳ ಕಾಲ ವಿಸ್ತರಿಸಲಾಗಿದೆ.
ಇದನ್ನೂ ಓದಿ : ಕಂಪ್ಲೇಂಟ್ ಕೊಟ್ಟಿದ್ದಕ್ಕೆ ಪತ್ನಿ ಮೇಲೆ ಸಿಟ್ಟಾದ ಪತಿ – ಪೊಲೀಸ್ ಠಾಣೆಯಲ್ಲಿ ಕಂದಮ್ಮನನ್ನ ಕೊಲ್ಲಲು ಯತ್ನಿಸಿದ ಪಾಪಿ
ಮಣಿಪುರದಲ್ಲಿ ಎದ್ದಿರುವ ಹಿಂಸಾಚಾರವನ್ನ ನಿಯಂತ್ರಣಕ್ಕೆ ತರಲು ಹಾಗೂ ಶಾಂತಿ ಸಾಪನೆಗೆ ನಿಯೋಜಿಸಲಾಗಿರುವ ಆಫ್ಸ್ಫಾ (AFSPA) ಅ.1ರಿಂದ ಜಾರಿಯಾಗುವಂತೆ ರಾಜ್ಯಪಾಲರು ನಿರ್ಧಾರ ಕೈಗೊಂಡಿದ್ದಾರೆ. ಮೈತೆಯೇ (Meitei) ಸಮುದಾಯದ ವಿದ್ಯಾರ್ಥಿಗಳಿಬ್ಬರ ಮೃತದೇಹ ಫೋಟೋ ವೈರಲ್ ಆದ ಬಳಿಕ ರಾಜ್ಯ ಮತ್ತೆ ಉದ್ವಿಗ್ನಗೊಂಡಿದೆ. ಸೆ.26 ರಂದು ಸಾವಿರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಮೊಬೈಲ್ ಇಂಟರ್‌ನೆಟ್ ಸೇವೆಯನ್ನು ಕೆಲ ದಿನಗಳ ಕಾಲ ಸ್ಥಗಿತಗೊಳಿಸಲಾಗಿದೆ. ಮಣಿಪುರದಲ್ಲಿ ಹಿಂಸಾಚಾರ ತೀವ್ರಗೊಂಡಿದ್ದಾಗ ಜುಲೈ 6 ರಂದು ಇಬ್ಬರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದರು. ಕುಕಿ (Kuki) ಸಮುದಾಯವರು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಿ ಮೈತೆಯೀ ಸಮುದಾಯ ಆರೋಪಿಸಿದೆ.
ಸಶಸ್ತ್ರ ಪಡೆಗಳ ವಿಶೇಷ ಕಾಯ್ದೆ 1958 ಪ್ರಕಾರ ಕಾನೂನು ಬಾಹಿರ ವ್ಯಕ್ತಿಗಳ ಮೇಲೆ ಗುಂಡು ಹಾರಿಸಬಹುದು. ಅನುಮಾನಿತ ವ್ಯಕ್ತಿಗಳ ಮೇಲೆ ವಾರಂಟ್ ಇಲ್ಲದೇ ಬಂಧಿಸಬಹುದು. ಯಾವುದೇ ವಾಹನವನ್ನು ತಡೆಗಟ್ಟಿ ತಪಾಸಣೆ ಮಾಡಬಹುದು. ಯೋಧರು ಯಾವುದೇ ಕಾರಣಕ್ಕೂ ನ್ಯಾಯಾಂಗದ ವ್ಯಾಪ್ತಿಗೆ ಬರುವುದಿಲ್ಲ. ಹೀಗಾಗಿ ಅವರ ಮೇಲೆ ಕೇಸ್ ದಾಖಲಿಸುವ ಹಾಗೂ ವಿಚಾರಣೆ ನಡೆಸಲು ಅವಕಾಶವೇ ಇಲ್ಲ. ಸಶಸ್ತ್ರ ಪಡೆಗಳ ಕಾಯ್ದೆಯನ್ನು ಮೊದಲು ಭಾರತದಲ್ಲಿ ಜಾರಿಗೆ ತಂದವರು ಬ್ರಿಟಿಷರು. 1942ರ ಕ್ವಿಟ್ ಇಂಡಿಯಾ ಚಳುವಳಿ ಸಂದರ್ಭದಲ್ಲಿ ದೇಶದ ಸ್ವಾತಂತ್ರ್ಯ ಹೋರಾಟಗಾರರ ವಿರುದ್ಧ ಈ ಕಾಯ್ದೆಯನ್ನು ಬಳಸಿ ಅವರನ್ನು ನಿಯಂತ್ರಿಸಲಾಗುತ್ತಿತ್ತು.