ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 54ಕ್ಕೇರಿಕೆ..!- ಸಹಜ ಸ್ಥಿತಿಗೆ ಮರಳುತ್ತಿದೆ ಮಣಿಪುರ

ಹಿಂಸಾಚಾರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 54ಕ್ಕೇರಿಕೆ..!- ಸಹಜ ಸ್ಥಿತಿಗೆ ಮರಳುತ್ತಿದೆ ಮಣಿಪುರ

ಪರಿಶಿಷ್ಟ ಪಂಗಡದ ಸ್ಥಾನಮಾನದ ಕುರಿತು ನ್ಯಾಯಾಲಯದ ಆದೇಶದ ವಿರುದ್ಧ ಬುಡಕಟ್ಟು ಗುಂಪುಗಳು ನಡೆಸುತ್ತಿದ್ದ ಪ್ರತಿಭಟನಾ ಕಾವು ಕಡಿಮೆಯಾಗಿದ್ದು, ಮಣಿಪುರ ಸಹಜ ಸ್ಥಿತಿಗೆ ಮರಳುತ್ತಿದೆ. ಅಂಗಡಿಗಳು ಮತ್ತು ಮಾರುಕಟ್ಟೆಗಳು ಮತ್ತೆ ತೆರದಿದ್ದು, ವಾಹನ ಸಂಚಾರ ಶುರುವಾಗಿದೆ. ಇಂಫಾಲ್ ಕಣಿವೆಯಲ್ಲಿ ಜನ ಜೀವನ ಕೂಡಾ ಸಹಜ ಸ್ಥಿತಿಗೆ ಮರಳಿದೆ. ಭದ್ರತಾ ಪಡೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಲಾಗಿದ್ದರೂ ಸಹ ಇಂಫಾಲ್ ಪಟ್ಟಣ ಮತ್ತು ಇತರ ಸ್ಥಳಗಳಲ್ಲಿನ ಹೆಚ್ಚಿನ ಅಂಗಡಿಗಳು ಮತ್ತು ಮಾರುಕಟ್ಟೆಗಳು ತೆರೆದಿವೆ. ಹಿಂಸಾಚಾರದಲ್ಲಿ ಸಾವಿಗೀಡಾದವರ ಸಂಖ್ಯೆ 54 ಕ್ಕೆ ಏರಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:  ಶರದ್ ಪವಾರ್ ರಾಜೀನಾಮೆ ತಿರಸ್ಕರಿಸಿದ ಎನ್ ಸಿಪಿ ಕಮಿಟಿ!

ಮೃತರಲ್ಲಿ 16 ಶವಗಳನ್ನು ಚುರಾಚಂದ್ಪುರ ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, 15 ಮೃತದೇಹಗಳು ಇಂಫಾಲ್ ಪೂರ್ವ ಜಿಲ್ಲೆಯ ಜವಾಹರಲಾಲ್ ನೆಹರು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂಫಾಲ್ ಪಶ್ಚಿಮ ಜಿಲ್ಲೆಯ ಲ್ಯಾಂಫೆಲ್‌ನಲ್ಲಿರುವ ರೀಜನಲ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ 23 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಬುಡಕಟ್ಟು ಜನಾಂಗದವರಲ್ಲದ ಮೀಟೈಸ್ ಸಮುದಾಯದ ಪರಿಶಿಷ್ಟ ಪಂಗಡ ಸ್ಥಾನಮಾನದ ಬೇಡಿಕೆಯನ್ನು ವಿರೋಧಿಸಿ ಬುಧವಾರ, ಆಲ್ ಟ್ರೈಬಲ್ ಸ್ಟೂಡೆಂಟ್ ಯೂನಿಯನ್ ಮಣಿಪುರ ಚುರಾಚಂದ್ಪುರ ಜಿಲ್ಲೆಯ ಟೋರ್ಬಂಗ್ ಪ್ರದೇಶದಲ್ಲಿ ಬುಡಕಟ್ಟು ಐಕ್ಯತಾ ಮೆರವಣಿಗೆಗೆ ಕರೆ ನೀಡಿತ್ತು. ಈ ರಾಲಿ(Rally)ಯಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು. ಆದರೆ ಈ ಸಂದರ್ಭದಲ್ಲಿ ಆದಿವಾಸಿಗಳು ಮತ್ತು ಬುಡಕಟ್ಟು ಜನಾಂಗದವರ ನಡುವೆ ಹಿಂಸಾಚಾರ ನಡೆದಿತ್ತು.

suddiyaana