ಮಣಿಪುರದಲ್ಲಿ ಮುಂದುವರಿದ ಹಿಂಸಾಚಾರ –  ಗುಂಡಿನ ದಾಳಿಯಲ್ಲಿ ಓರ್ವ ಸಾವು

ಮಣಿಪುರದಲ್ಲಿ ಮುಂದುವರಿದ ಹಿಂಸಾಚಾರ –  ಗುಂಡಿನ ದಾಳಿಯಲ್ಲಿ ಓರ್ವ ಸಾವು

ಜನಾಂಗೀಯ ಹಿಂಸಾಚಾರದಲ್ಲಿ ಬೆಂದು ಹೋಗಿರುವ ಮಣಿಪುರದಲ್ಲಿ ಮತ್ತೆ ಗುಂಡಿನ ದಾಳಿ ನಡೆದಿದೆ. ಈ ದಾಳಿಯಲ್ಲಿ ಗ್ರಾಮಸ್ಥರೊಬ್ಬರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಮೂರನೇ ದಿನಕ್ಕೆ ಕಾಲಿಟ್ಟ ದೆಹಲಿ ಚಲೋ ಚಳವಳಿ – ಪಂಜಾಬ್​ನಲ್ಲಿ ರೈಲು ತಡೆದು ಪ್ರತಿಭಟನೆ

ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಪುಖಾವೊ ಮತ್ತು ಸುತ್ತಮುತ್ತಲಿನ ಗುಡ್ಡಗಾಡು ಪ್ರದೇಶಗಳಲ್ಲಿ ಭಾನುವಾರ ರಾತ್ರಿಯಿಂದ, ಗುಂಡಿನ ಘಟನೆಗಳು ವರದಿಯಾಗುತ್ತಿವೆ.  ಎರಡು ಸಮುದಾಯಗಳ ನಡುವೆ ಗುಂಡಿನ ದಾಳಿ ನಡೆದಿದೆ. ಈ ದಾಳಿಯಲ್ಲಿ  ಗ್ರಾಮಸ್ಥರೊಬ್ಬರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಮೃತರನ್ನು ಸಗೋಲ್ಸೆಮ್ ಲೋಯಾ ಎಂದು ಗುರುತಿಸಲಾಗಿದೆ.ಅವರನ್ನು ಇಂಫಾಲ್‌ನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ.

ಇಂಫಾಲ್ ಪೂರ್ವ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಸಮಾಜವಿರೋಧಿಗಳು ಗುಂಡಿನ ದಾಳಿ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ನಂತರ ಅಧಿಕಾರಿಗಳು ಭದ್ರತಾ ಸಿಬ್ಬಂದಿಯೊಂದಿಗೆ ಪರಿಸ್ಥಿತಿಯನ್ನು ನಿಯಂತ್ರಿಸಲು ತೆರಳಿದ್ದಾರೆ.

ಮೂಲಗಳ ಪ್ರಕಾರ, ಗುಂಡಿನ ದಾಳಿಯಲ್ಲಿ 20 ಜಾಟ್ ರೆಜಿಮೆಂಟ್‌ನ ಅಧಿಕಾರಿ ಗಾಯಗೊಂಡಿದ್ದಾರೆ. ಇದಾದ ನಂತರ ಭದ್ರತಾ ಪಡೆಗಳು ನೊಂಗಡಾ ಪ್ರದೇಶಕ್ಕೆ ಬಂದು ವಾಹನಗಳ ಶೋಧ ಕಾರ್ಯ ಆರಂಭಿಸಿದವು. ಗುಂಡಿನ ದಾಳಿಯ ನಂತರ, ಸೇನೆಯು ನೋಂಗ್ರೆಲ್ ಸೇತುವೆಯ ಮೇಲೆ ವಾಹನಗಳ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ವರದಿಯಾಗಿದೆ.

Shwetha M