ಮಣಿಪುರದಲ್ಲಿ ಮತ್ತೆ ಹಿಂಸಾಚಾರ – ಗುಂಡಿನ ದಾಳಿಯಲ್ಲಿ ಮೂವರು ಸಾವು

ಮಣಿಪುರದಲ್ಲಿ ಮತ್ತೆ ಹಿಂಸಾಚಾರ – ಗುಂಡಿನ ದಾಳಿಯಲ್ಲಿ ಮೂವರು ಸಾವು

ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಶುಕ್ರವಾರ ಉಖ್ರುಲ್‌ ಜಿಲ್ಲೆಯಲ್ಲಿ ಕುಕಿ ಥೋವೈ ಗ್ರಾಮದಲ್ಲಿ ಭಾರಿ ಗುಂಡಿನ ಚಕಮಕಿ ನಡೆದಿದೆ. ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ರವಾರ ಮುಂಜಾನೆ ಲಿಟನ್‌ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಭಾರಿ ಗುಂಡಿನ ಸದ್ದು ಕೇಳಿಬಂದಿದೆ. ಸುತ್ತಮುತ್ತಲಿನ ಗ್ರಾಮಗಳು ಮತ್ತು ಅರಣ್ಯ ಪ್ರದೇಶಗಳಲ್ಲಿ ಪೊಲೀಸರು ಸಂಪೂರ್ಣ ಶೋಧ ನಡೆಸಿದ ನಂತರ ಮೂವರು ಯುವಕರ ವಿರೂಪಗೊಂಡ ಶವಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ರಣಭೀಕರ ಮಳೆಗೆ ಕಂಗೆಟ್ಟ ಹಿಮಾಚಲ ಪ್ರದೇಶ – ಸಾವಿನ ಸಂಖ್ಯೆ 74ಕ್ಕೇರಿಕೆ, 10 ಸಾವಿರ ಕೋಟಿ ರೂಪಾಯಿ ನಷ್ಟ

ಮೂವರ ಮೃತ ದೇಹಗಳು ಹರಿತವಾದ ಚಾಕುಗಳನ್ನು ಬಳಸಿ ಮಾಡಿದ ಗಾಯದ ಗುರುತುಗಳನ್ನು ಹೊಂದಿದ್ದು, ಅವರ ಕೈಕಾಲುಗಳನ್ನು ಸಹ ಕತ್ತರಿಸಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಮೂರು ತಿಂಗಳಿನಿಂದ ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗಳು ನಡೆಯುತ್ತಿದೆ. ಘರ್ಷಣೆ ಹಿಂಸಾಚಾರಕ್ಕೆ ತಿರುಗಿದ್ದು, ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಕಿಡಿಗೇಡಿಗಳು ಅಂಗಡಿ, ಧಾರ್ಮಿಕ ಕೇಂದ್ರಗಳನ್ನು ಧ್ವಂಸ ಮಾಡಿ ವಿಕೃತಿ ಮೆರೆಯುತ್ತಿದ್ದಾರೆ.

suddiyaana