ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ – ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ CBI

ಮಣಿಪುರ ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣ – ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ CBI

ನವದೆಹಲಿ: ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಹಾಗೂ ಸಾಮಾಜಿಕ ಅತ್ಯಾಚಾರ ಮಾಡಲಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ  ಅಧಿಕೃತವಾಗಿ ಪ್ರಕರಣ ದಾಖಲಿಸಿಕೊಂಡಿದೆ.

ಪುರುಷರ ಗುಂಪೊಂದು ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿ ವಿಕೃತಿ ಮೆರೆದಿತ್ತು. ಈ ಪೈಶಾಚಿಕ ಕೃತ್ಯಕ್ಕೆ ಇಡೀ ದೇಶವೇ ಖಂಡನೆ ವ್ಯಕ್ತಪಡಿಸಿತ್ತು. ಇದೀಗ ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ಸಿಬಿಐ ಅಧಿಕೃತವಾಗಿ ದೂರು ದಾಖಲಿಸಿ ತನಿಖೆ ಆರಂಭಿಸಿದೆ.

ಇದನ್ನೂ ಓದಿ: ಬಿಜೆಪಿ ತೀರ್ಥಹಳ್ಳಿಯ ಹಿಂದೂ ಹೆಣ್ಣುಮಕ್ಕಳ ಬಗ್ಗೆ ಕಾಳಜಿ ತೋರಿಸುತ್ತಿಲ್ಲ ಏಕೆ? – ಕಾಂಗ್ರೆಸ್‌ ಪ್ರಶ್ನೆ 

CBI ಸೆಕ್ಷನ್ 153A, 398, 427, 436, 448, 302, 354, 364, 326, 376, 34 ಐಪಿಸಿ ಮತ್ತು 25 (1-C)A ಆಕ್ಟ್ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದೆ. ಪ್ರಕರಣದಲ್ಲಿ 7 ಮಂದಿ ಆರೋಪಿಗಳನ್ನ ಈಗಾಗಲೇ ಬಂಧಿಸಲಾಗಿದ್ದು, ವಿಡಿಯೋ ಚಿತ್ರೀಕರಿಸಿದ ಮೊಬೈಲ್ ಫೋನ್ ಕೂಡ ವಶಪಡಿಸಿಕೊಳ್ಳಲಾಗಿದೆ. ಸದ್ಯ ಸಿಬಿಐ ಪ್ರಕರಣದ ತನಿಖೆ ನಡೆಸಲಿದ್ದು, ಆರೋಪಿಗಳನ್ನು ಕಸ್ಟಡಿಗೆ ತೆಗೆದುಕೊಂಡು ಅವರನ್ನು ವಿಚಾರಣೆಗೆ ಒಳಪಡಿಸಲಿದೆ.

ಮಣಿಪುರದ ವೈರಲ್ ವೀಡಿಯೊದ ತನಿಖೆಯನ್ನ ತನಿಖಾ ಸಂಸ್ಥೆ ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ ವಹಿಸಿಕೊಳ್ಳಲಿದೆ ಎಂದು ಗೃಹ ವ್ಯವಹಾರಗಳ ಸಚಿವಾಲಯ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು. ವಿಚಾರಣೆಯನ್ನು ಮಣಿಪುರದ ಹೊರಗೆ ನಡೆಸಲು ನಿರ್ದೇಶಿಸುವಂತೆ ಅಫಿಡವಿಟ್ ಮೂಲಕ ಮನವಿ ಮಾಡಿತು.

suddiyaana