ಸದ್ದಿಲ್ಲದೇ ನಡೆಯುತ್ತಿದ್ಯಾ ಆಪರೇಷನ್ ಹಸ್ತ? : ನ. 15ಕ್ಕೆ ಜೆಡಿಎಸ್-ಬಿಜೆಪಿಯ ಹಲವು ಶಾಸಕರು ಕಾಂಗ್ರೆಸ್ ಸೇರ್ಪಡೆ – ಹೊಸ ಬಾಂಸ್ ಸಿಡಿಸಿದ ಡಿಕೆಶಿ
2024 ರ ಲೋಕಸಭಾ ಚುನಾವಣೆಗೆ ಕೆಲ ತಿಂಗಳು ಮಾತ್ರ ಬಾಕಿ ಉಳಿದಿದೆ. ರಾಜ್ಯ ಕಾಂಗ್ರೆಸ್ ಗೆ ಲೋಕಸಮರಕ್ಕೆ ಭರ್ಜರಿ ತಯಾರಿ ನಡಸುತ್ತಿದೆ. ಸದ್ದಿಲ್ಲದೇ ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಗಾಳ ಹಾಕುತ್ತಿದೆ. ಇದೀಗ ಈ ವಿಚಾರವಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹೊಸ ಬಾಂಬ್‌ವೊಂದನ್ನು ಸಿಡಿಸಿದ್ದಾರೆ. ನವೆಂಬರ್ 15 ರಂದು ದೀಪಾವಳಿ ಮುಗಿದ ನಂತರ ಹಲವು ಜೆಡಿಎಸ್ -ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷ ಸೇರುತ್ತಾರೆ ಎಂದು ಹೇಳಿದ್ದಾರೆ.
ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಸದ್ಯ ದೆಹಲಿ ಪ್ರವಾಸದಲ್ಲಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ದೀಪಾವಳಿ ನಂತರ ರಾಜ್ಯ ರಾಜಕೀಯದಲ್ಲಿ ಹಲವು ಬದಲಾವಣೆಗಳಾಗುತ್ತವೆ. ಬಿಜೆಪಿ ಹಾಗೂ ಜೆಡಿಎಸ್ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ. ನವೆಂಬರ್ 15ರಂದು ಮತ್ತಷ್ಟು ನಾಯಕರು ನಮ್ಮ ಪಕ್ಷಕ್ಕೆ ಸೇರುತ್ತಾರೆ ಅಂತಾ ಹೇಳುವ ಮೂಲಕ ಆಪರೇಷನ್ ಹಸ್ತದ ಸುಳಿವು ನೀಡಿದ್ದಾರೆ.
ಇದನ್ನೂ ಓದಿ: ಭ್ರಷ್ಟಾಚಾರ ಆರೋಪ – ಪೋರ್ಚುಗಲ್ ಪ್ರಧಾನಿ ಆಂಟೋನಿಯೊ ಕೋಸ್ಟಾ ರಾಜೀನಾಮೆ
ಬಿಜೆಪಿಯವರಿಗೆ ಅಸ್ಥಿತ್ವದಲ್ಲಿಲ್ಲದ ಪರಿಸ್ಥಿತಿ ಎದುರಾಗಿದೆ. ಸದ್ಯ ಅವರಿಗೆ ಮಾರುಕಟ್ಟೆಯಲ್ಲಿ ಚಲಾವಣೆಯಲ್ಲಿರಬೇಕು. ಅದಕ್ಕೋಸ್ಕರ ಅಲ್ಲಿಲ್ಲಿ ಹೋಗುತ್ತಾ, ಅವರಿವರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತಾ ಸುದ್ದಿಯಾಗುತ್ತಿದ್ದಾರಷ್ಟೆ. ಮಾರ್ಕೆಟ್ನಲ್ಲಿ ಇರುವುದಕ್ಕೆ ಇಂತಹ ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿ ಈಗಿರುವ ಪರಿಸ್ಥಿತಿಯಲ್ಲಿ ನಮ್ಮ ಒಬ್ಬ ಶಾಸಕರನ್ನೂ ಅವರಿಗೆ ಕರೆದುಕೊಳ್ಳಲು ಆಗಲ್ಲ. ಬಿಜೆಪಿಯಲ್ಲಿ ನಾಯಕತ್ವದ ಬಗ್ಗೆಯೇ ತೀರ್ಮಾನ ಮಾಡಲು ಆಗಿಲ್ಲ. ಬಿಜೆಪಿಯವರು ಗೊಂದಲ ಸೃಷ್ಟಿಸಲು ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿಯಲ್ಲೇ ಸಾಕಷ್ಟು ಸಮಸ್ಯೆ ಇದೆ, ಹೀಗಿರುವಾಗ ನಮ್ಮ ಶಾಸಕರನ್ನು ಅವರು ಸೆಳೆದುಕೊಳ್ಳುವುದು ದೂರದ ಮಾತು ಎಂದು ಡಿ ಕೆ ಶಿವಕುಮಾರ್ ಲೇವಡಿ ಮಾಡಿದರು.