ಹೆಣ್ಣು ಮಕ್ಕಳ ವಿವಾಹ ವಯಸ್ಸು 21ಕ್ಕೆ ಏರಿಕೆ! – ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಧಾರ!

ಹೆಣ್ಣು ಮಕ್ಕಳ ವಿವಾಹ ವಯಸ್ಸು 21ಕ್ಕೆ ಏರಿಕೆ! – ಕ್ಯಾಬಿನೆಟ್ ಸಭೆಯಲ್ಲಿ ಮಹತ್ವದ ನಿರ್ಧಾರ!

ಇಷ್ಟುದಿನ ಮದುವೆ ವಯಸ್ಸು ಹೆಣ್ಣುಮಕ್ಕಳಿಗೆ 18, ಗಂಡುಮಕ್ಕಳಿಗೆ 21 ಇತ್ತು. ಇದೀಗ ಹೆಣ್ಣು ಮಕ್ಕಳ ಮದುವೆ ವಯಸ್ಸಿನ ಮಿತಿಯನ್ನು ಹೆಚ್ಚಳ ಮಾಡಲಾಗಿದೆ. ಇನ್ನುಮುಂದೆ ಹೆಣ್ಣುಮಕ್ಕಳು 21 ವರ್ಷ ದಾಟಿದ್ರೆ ಮಾತ್ರ ಮದುವೆಯಾಗಬಹುದು. ಅಂದ ಹಾಗೆ ಈ ರೂಲ್ಸ್‌ ಬಂದಿರೋದು ಕರ್ನಾಟಕದಲ್ಲಿ ಅಲ್ಲ. ಹಿಮಾಚಲ ಪ್ರದೇಶದಲ್ಲಿ ಹೆಣ್ಣುಮಕ್ಕಳ ಮದುವೆ ವಯಸ್ಸಿನ ಮಿತಿಯನ್ನು ಪರಿಷ್ಕರಣೆ ಮಾಡಲಾಗಿದೆ.

ಇದನ್ನೂ ಓದಿ: ದೇಶದ ಅತಿ ಉದ್ದದ ಸಮುದ್ರ ಸೇತುವೆ ಲೋಕಾರ್ಪಣೆ ಮಾಡಿದ ಪ್ರಧಾನಿ ಮೋದಿ – ಸೇತುವೆಯ ವಿಶೇಷತೆ ಏನು?

ಶಿಮ್ಲಾದಲ್ಲಿ ಶುಕ್ರವಾರ ನಡೆದ ಹಿಮಾಚಲ ಪ್ರದೇಶ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಸಿಎಂ ಸುಖ್ವಿಂದರ್ ಸಿಂಗ್ ಸುಖು ನೇತೃತ್ವದಲ್ಲಿ ಶುಕ್ರವಾರ ಶಿಮ್ಲಾದಲ್ಲಿ ಸಂಪುಟ ಸಭೆ ನಡೆದಿದ್ದು, ಈ ವೇಳೆ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇನ್ಮುಂದೆ ಈ ರಾಜ್ಯದಲ್ಲಿ ಕೇವಲ 21 ವರ್ಷ ದಾಟಿದ ಹೆಣ್ಮಕ್ಕಳಷ್ಟೇ ಮದುವೆಯಾಗಬಹುದು. ಕ್ಯಾಬಿನೆಟ್ ಹುಡುಗಿಯ ಮದುವೆಯ ಕನಿಷ್ಠ ವಯಸ್ಸನ್ನು 21 ವರ್ಷಕ್ಕೆ ಹೆಚ್ಚಿಸುವ ಪ್ರಸ್ತಾಪವನ್ನು ಅಂಗೀಕರಿಸಿತು. ಇಂತಹ ಪರಿಸ್ಥಿತಿಯಲ್ಲಿ ಈಗ ಕನಿಷ್ಠ ವಯೋಮಿತಿಯನ್ನು 18 ರಿಂದ 21 ವರ್ಷಕ್ಕೆ ಹೆಚ್ಚಿಸುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗುತ್ತದೆ.

ರಾಜ್ಯದಲ್ಲಿ ಹೆಣ್ಣು ಮಕ್ಕಳ ಮದುವೆಗೆ ಸಂಬಂಧಿಸಿದಂತೆ ಹಿಮಾಚಲ ಕ್ಯಾಬಿನೆಟ್ ಸಭೆಯಲ್ಲಿ ಪ್ರಮುಖ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಇನ್ನು ಹಿಮಾಚಲದಲ್ಲಿ 21 ವರ್ಷ ತುಂಬಿದ ನಂತರವೇ ಹೆಣ್ಣು ಮಕ್ಕಳಿಗೆ ಮದುವೆ ಮಾಡಲು ಪೋಷಕರಿಗೆ ಅವಕಾಶ ಕಲ್ಪಿಸುವ ಪ್ರಸ್ತಾವನೆ ಸಭೆಯಲ್ಲಿ ಪಾಸಾಗಿದೆ. ಆದರೆ, ಈಗ ಈ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಿ ನಂತರ ಅಲ್ಲಿಂದ ಅಂತಿಮ ಅನುಮೋದನೆ ಸಿಗಬೇಕಾಗುತ್ತದೆ.

Shwetha M