ನಮ್ಮನ್ನ ಗೆಲ್ಲಿಸಿದರೆ ಯುವಕರಿಗೆ 100% ಮದುವೆ ಗ್ಯಾರಂಟಿ!

ನಮ್ಮನ್ನ ಗೆಲ್ಲಿಸಿದರೆ ಯುವಕರಿಗೆ 100% ಮದುವೆ ಗ್ಯಾರಂಟಿ!

ಬೆಳಗಾವಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೇವಲ 6 ದಿನಗಳು ಮಾತ್ರ ಬಾಕಿ ಉಳಿದಿವೆ. ಎಲ್ಲಾ ಪಕ್ಷದ ಅಭ್ಯರ್ಥಿಗಳು ಪ್ರಚಾರ ಕಾರ್ಯದಲ್ಲಿ ಬ್ಯೂಸಿಯಾಗಿದ್ದು, ಮತದಾರರನ್ನು ಸೆಳೆಯಲು ವಿವಿಧ ಭರವಸೆಗಳನ್ನು ನೀಡುತ್ತಿದ್ದಾರೆ. ಆದರೆ ಇಲ್ಲೊಂದು ಕಡೆ ಪಕ್ಷೇತರ ಅಭ್ಯರ್ಥಿಗಳು ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆ ಎಲ್ಲರನ್ನೂ ಹುಬ್ಬೇರುವಂತೆ ಮಾಡಿದೆ.

ಇದನ್ನೂ ಓದಿ: ‘ಈ ಬಾರಿ ನನ್ನ ಬಿಟ್ಟು ಬೇರೆ ಯಾರೂ ಮುಖ್ಯಮಂತ್ರಿ ಆಗಲು ಸಾಧ್ಯವೇ ಇಲ್ಲ’ – ಹೆಚ್.ಡಿ ಕುಮಾರಸ್ವಾಮಿ

ಬೆಳಗಾವಿ ಜಿಲ್ಲೆ ಅರಭಾವಿ ವಿಧಾನಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಗುರುಪುತ್ರ ಕೆಂಪಣ್ಣ ಕುಳ್ಳೂರ ಹಾಗೂ ಗೋಕಾಕ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಪುಂಡಲೀಕ ಕುಳ್ಳೂರ  ಅವರು ಪ್ರಣಾಳಿಕೆಯಲ್ಲಿ ವಧು-ವರರ ಮದುವೆ ಭಾಗ್ಯವನ್ನು ಘೋಷಣೆ ಮಾಡಿದ್ದಾರೆ.

ವಧು – ವರರ ಮದುವೆ ಭಾಗ್ಯ ಯೋಜನೆ 2023ರ ಅಡಿಯಲ್ಲಿ ಅರಭಾವಿ ಕ್ಷೇತ್ರದ  ಮದುವೆಯಾಗದ, ಹೆಣ್ಣು ಸಿಗದ ಯುವಕರಿಗೆ ಮದುವೆ ಮಾಡಿಸಲಾಗುವುದು ಎಂದು ಘೋಷಿಸಿದ್ದಾರೆ. ಈ ಪ್ರಣಾಳಿಕೆ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಪಕ್ಷೇತರ ಅಭ್ಯರ್ಥಿಗಳಾದ ಗುರುಪುತ್ರ ಕುಳ್ಳೂರ ಹಾಗೂ ಪುಂಡಲೀಕ ಕುಳ್ಳೂರ ಇಬ್ಬರೂ ಸಹೋದರರು. ಆದ್ರೆ, ಗುರುಪುತ್ರ ಕೆಂಪಣ್ಣ ಕುಳ್ಳೂರ ಅರಭಾವಿ ವಿಧಾನಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದದ್ದರೆ, ಪುಂಡಲೀಕ ಕುಳ್ಳೂರ ಗೋಕಾಕ್ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದಾರೆ. ಇದೀಗ ಇವರಿಬ್ಬರ ಪ್ರಣಾಳಿಕೆಯ ಸಾರ್ವಜನಿಕರನ್ನು ಹುಬ್ಬೇರುವಂತೆ ಮಾಡಿದೆ.

suddiyaana