ಬೆಂಗಳೂರಿನಲ್ಲಿ ಕೊರೊನಾ ಭೀತಿ-ಖಾಸಗಿ ಶಾಲೆಗಳಿಗೆ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ

ಬೆಂಗಳೂರಿನಲ್ಲಿ ಕೊರೊನಾ ಭೀತಿ-ಖಾಸಗಿ ಶಾಲೆಗಳಿಗೆ ಮಾಸ್ಕ್ ಕಡ್ಡಾಯಗೊಳಿಸಿ ಆದೇಶ

ಬೆಂಗಳೂರು: ಕರ್ನಾಟಕದಲ್ಲಿ ಈಗ ಕೋವಿಡ್ ಭೀತಿ ಆವರಿಸುತ್ತಿದೆ. ಸರ್ಕಾರ ಕೂಡಾ ಕೆಲವೊಂದು ಮಾರ್ಗಸೂಚಿಗಳನ್ನ ತಿಳಿಸಿದೆ. ಹೀಗಿರುವಾಗಲೇ ಬೆಂಗಳೂರಿನ ಖಾಸಗಿ ಶಾಲೆಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಆದೇಶಿಸಲಾಗಿದೆ. ಖಾಸಗಿ ಶಾಲಾ ಒಕ್ಕೂಟ, ಕೊವಿಡ್ ಮಾರ್ಗಸೂಚಿ ಪಾಲಿಸುವಂತೆ ಶಾಲೆಗಳಿಗೆ ಸೂಚನೆ ನೀಡಿದೆ. ವಿದ್ಯಾರ್ಥಿಗಳು, ಶಿಕ್ಷಕರು, ಶಾಲಾ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಸೂಚಿಸಲಾಗಿದೆ.

ಇದನ್ನೂ ಓದಿ:  ಮೂಗಿನ ಮೂಲಕ ಕೋವಿಡ್ ಲಸಿಕೆ – ತುರ್ತು ಬಳಕೆಗೆ ಕೇಂದ್ರ ಅಸ್ತು

ಶಾಲೆಗಳಲ್ಲಿ ಸಾಮಾಜಿಕ ಅಂತರ ಪಾಲನೆ ಮಾಡುವುದು ಕಡ್ಡಾಯವಾಗಿದ್ದು, ನೆಗಡಿ, ಕೆಮ್ಮು, ಜ್ವರದಂತಹ ಲಕ್ಷಣ ಕಂಡು ಬಂದರೆ ಕೂಡಲೇ ಕೊರೋನಾ ಸೋಂಕು ತಪಾಸಣೆ ನಡೆಸಬೇಕು ಎಂದು ಸೂಚಿಸಲಾಗಿದೆ. ಕೊರೋನಾ ಹೆಚ್ಚಳವಾದರೆ ಲಾಕ್‌ಡೌನ್ ಮಾಡಲಾಗುತ್ತದೆ. ಇದರಿಂದ ಆರ್ಥಿಕವಾಗಿ ಹೊಡತ ಬೀಳಲಿದೆ. ಈ ಹಿಂದಿನ ಲಾಕ್‌ಡೌನ್‌ನಿಂದ ಶಿಕ್ಷಣ ಸಂಸ್ಥೆಗಳಿಗೂ ಆರ್ಥಿಕವಾಗಿ ಹೊಡೆತ ಬಿದ್ದಿತ್ತು. ಇದೀಗ ಮುನ್ನೆಚ್ಚರಿಕಾ ಕ್ರಮವಾಗಿ ಖಾಸಗಿ ಶಾಲೆಗಳಲ್ಲಿ ಮಕ್ಕಳಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಕೊರೋನಾ ಕುರಿತು ಶಾಲಾ ಮುಖ್ಯಸ್ಥರಿಗೆ ಮಕ್ಕಳ ಪೋಷಕರು ನಿತ್ಯ ಕರೆ ಮಾಡಿ ಆತಂಕ ತೋಡಿಕೊಳ್ಳುತ್ತಿದ್ದಾರೆ. ಹೀಗಾಗಿ ಶಾಲೆಗಳಲ್ಲಿ ಮಾಸ್ಕ್, ಸಾಮಾಜಿಕ ಅಂತರ, ಥರ್ಮಲ್ ಸ್ಕ್ರೀನಿಂಗ್, ಕ್ರಿಸ್ಮಸ್ ರಜೆಗೆ ಊರಿಗೆ ಹೋಗಿರುವವರಲ್ಲಿ ರೋಗ ಲಕ್ಷಣ ಇದ್ದರೆ ಐಸೋಲೇಷನ್ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ಕ್ಯಾಮ್ಸ್ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಹೇಳಿಕೆ ನೀಡಿದ್ದಾರೆ. ಇಷ್ಟಲ್ಲದೇ ಖಾಸಗಿ ಶಾಲೆ ಆಡಳಿತ ಮಂಡಳಿಗಳ ಜೊತೆ ರುಪ್ಸಾ ಸಂಘಟನೆ ಸಭೆ ನಡೆಸಲು ತೀರ್ಮಾನಿಸಿದೆ.

suddiyaana