ರಾಜ್ಯದ ರೈತರಿಗೆ ಬಿಗ್ ಶಾಕ್ – ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನಿರಂತರವಾಗಿ ಹರಿಯುತ್ತಿರೋ ಕಾವೇರಿ

ತಮಿಳುನಾಡಿಗೆ ಕಾವೇರಿ ನೀರು ಬಿಡುವುದಿಲ್ಲ ಎಂದು ರಾಜ್ಯ ಸರ್ಕಾರ ಹೇಳುತ್ತಿದ್ದರೂ, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಬಳಿಯಿರುವ ಕೆಆರ್‌ಎಸ್ ಡ್ಯಾಂನಿಂದ ನಿರಂತರವಾಗಿ ನೀರು ಹೊರಬಿಡಲಾಗುತ್ತಿದೆ. ಸದ್ಯ ಕೆಆರ್‌ಎಸ್‌ನಿಂದ 8,544 ಕ್ಯೂಸೆಕ್ ನೀರು ಹೊರಹರಿಯುತ್ತಿದ್ದು, ದಿನದಿಂದ ದಿನಕ್ಕೆ ಹೊರಹರಿವಿನ ಪ್ರಮಾಣ ಹೆಚ್ಚಾಗುತ್ತಿದೆ.
ಕೆಆರ್‌ಎಸ್ ಡ್ಯಾಂನ ಒಳಹರಿವು ಇದೀಗ 3,864 ಕ್ಯೂಸೆಕ್‌ಗೆ ಕುಸಿದಿದೆ. ಆದರೆ ಒಳಹರಿವಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದ್ದರೂ, ಡ್ಯಾಂನಿಂದ ನಿರಂತರವಾಗಿ ನೀರು ಹರಿಯುತ್ತಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಪ್ರಶ್ನೆಗಳು ಎದ್ದಿವೆ.
ಇದನ್ನೂ ಓದಿ: ಸೆ .3 & 4 ರಂದು ಬೆಂಗಳೂರಿನಲ್ಲಿ ಸಿಗಲ್ಲ ಚಿಕನ್ – 6 ರಿಂದ 7 ಸಾವಿರ ಚಿಕನ್ ಅಂಗಡಿಗಳು ಕ್ಲೋಸ್
ಸದ್ಯ ಕೆಆರ್‌ಎಸ್ ಡ್ಯಾಂನಲ್ಲಿ 109.32 ಅಡಿ ನೀರಿನ ಮಟ್ಟವಿದ್ದು, ಒಟ್ಟು 31.044 ಟಿಎಂಸಿ ನೀರು ಸಂಗ್ರಹವಾಗಿದೆ. ಡ್ಯಾಂನ ಗರಿಷ್ಠ ನೀರಿನ ಮಟ್ಟ 124.80 ಅಡಿಯಾಗಿದ್ದು, ಗರಿಷ್ಠ ಸಂಗ್ರಹ ಸಾಮರ್ಥ್ಯ 49.452 ಟಿಎಂಸಿಯಾಗಿದೆ. ಪ್ರಸ್ತುತ ಡ್ಯಾಂಗೆ 3,864 ಕ್ಯೂಸೆಕ್ ಒಳಹರಿವು ಇದ್ದರೆ, 8,544 ಕ್ಯೂಸೆಕ್ ಹೊರಹರಿವು ಇದೆ. ಅಂದರೆ, ಡ್ಯಾಂಗೆ ಬರುತ್ತಿರುವ ನೀರಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗುತ್ತಿದೆ.
ಇದೇ ಪ್ರಮಾಣದಲ್ಲಿ ನಿರಂತರವಾಗಿ ನೀರು ಹರಿಸಿದರೆ ಮುಂದಿನ ದಿನಗಳಲ್ಲಿ ಕೆಆರ್‌ಎಸ್ ಜಲಾಶಯದ ನೀರಿನ ಸಂಗ್ರಹದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಮಳೆ ಪ್ರಮಾಣ ಹಾಗೂ ಒಳಹರಿವು ಕಡಿಮೆಯಾದ ಸಂದರ್ಭದಲ್ಲಿ ನೀರಿನ ನಿರ್ವಹಣೆ ಸವಾಲಾಗಬಹುದು.

ನೋಡಿರಿ

