ಈದ್‌ ಮಿಲಾದ್ ಮೆರವಣಿಗೆ ವೇಳೆ ಭಾರೀ ಸ್ಫೋಟ – 34 ಜನ ಸಾವು, 100 ಮಂದಿಗೆ ಗಾಯ

ಈದ್‌ ಮಿಲಾದ್ ಮೆರವಣಿಗೆ ವೇಳೆ ಭಾರೀ ಸ್ಫೋಟ – 34 ಜನ ಸಾವು, 100 ಮಂದಿಗೆ ಗಾಯ

ಬಲೂಚಿಸ್ತಾನ: ನೈಋತ್ಯ ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸ್ಪೋಟದ ಘಟನೆಗಳು ನಡೆಯುತ್ತಲೇ ಇದೆ. ಇದೀಗ ಈದ್‌ ಮಿಲಾದುನ್‌ ನಬಿ ಆಚರಣೆ ವೇಳೆ ಸ್ಫೋಟ ಸಂಭವಿಸಿ ಕನಿಷ್ಠ 34 ಜನರು ಸಾವನ್ನಪ್ಪಿದ್ದು, ಸುಮಾರು 100 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಇತ್ತೀಚೆಗೆ, ಮಸ್ತುಂಗ್ ಜಿಲ್ಲೆಯ ಅಲ್-ಫಲಾಹ್ ಮಸೀದಿ ಬಳಿ ಈದ್ ಮಿಲಾದ್-ಉಲ್-ನಬಿ ಮೆರವಣಿಗೆಯನ್ನು ಗುರಿಯಾಗಿಟ್ಟುಕೊಂಡು ಸ್ಫೋಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಈ ದಾಳಿಯಲ್ಲಿ 34 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 100 ಮಂದಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನದಿಂದ ಪಶ್ಚಿಮ ಏಷ್ಯಾ ರಾಷ್ಟ್ರಗಳಿಗೆ ಭಿಕ್ಷುಕರ ರಫ್ತು – ವಿದೇಶಗಳಲ್ಲಿ 1 ಕೋಟಿಗೂ ಹೆಚ್ಚು ಪಾಕಿಸ್ತಾನಿಯರಿಂದ ಭಿಕ್ಷಾಟನೆ

ದಾಳಿ ನಡೆದ ಸ್ಥಳದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಸ್ಫೋಟದಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್ಪಿ) ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗುತ್ತಿದೆ.

ಈ ತಿಂಗಳ ಆರಂಭದಲ್ಲಿ, ಅದೇ ಜಿಲ್ಲೆಯಲ್ಲಿ ನಡೆದ ಸ್ಫೋಟದಲ್ಲಿ ಜಮಿಯತ್ ಉಲೇಮಾ-ಎ-ಇಸ್ಲಾಂ-ಫಜಲ್ (ಜೆಯುಐ-ಎಫ್) ಮುಖಂಡ ಹಫೀಜ್ ಹಮ್ದುಲ್ಲಾ ಸೇರಿದಂತೆ ಕನಿಷ್ಠ 11 ಜನರು ಗಾಯಗೊಂಡಿದ್ದರು. ಕೆಲವು ವಾರಗಳ ಹಿಂದೆ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿಗಳು ಲೆವಿ ಅಧಿಕಾರಿಯೊಬ್ಬರನ್ನು ಗುಂಡಿಕ್ಕಿ ಕೊಂದಿದ್ದರು.ಅದೇ ಸಮಯದಲ್ಲಿ ಆ ಮಾರ್ಗವಾಗಿ ಹೋಗುತ್ತಿದ್ದ ಇಬ್ಬರು ಗಾಯಗೊಂಡಿದ್ದರು.

Shwetha M