ರೈತರ ‘ದೆಹಲಿ ಚಲೋ’ ಪ್ರತಿಭಟನೆಯಲ್ಲಿ ಭಾರಿ ಹಿಂಸಾಚಾರ – ಇಬ್ಬರು ಪೊಲೀಸ್ ಅಧಿಕಾರಿಗಳು ಸಾವು

ರೈತರ ‘ದೆಹಲಿ ಚಲೋ’ ಪ್ರತಿಭಟನೆಯಲ್ಲಿ ಭಾರಿ ಹಿಂಸಾಚಾರ – ಇಬ್ಬರು ಪೊಲೀಸ್ ಅಧಿಕಾರಿಗಳು ಸಾವು

ಅನ್ನದಾತರ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಹಿಂಸಾಚಾರ ಹೆಚ್ಚಾಗುತ್ತಿದೆ. ಇದೀಗ ಹರಿಯಾಣದ ಅಂಬಾಲದಲ್ಲಿ ರೈತರ ಪ್ರತಿಭಟನೆ ವೇಳೆ ಭಾರಿ ಹಿಂಸಾಚಾರ ನಡೆದಿದ್ದು, ಇಬ್ಬರು ಪೊಲೀಸ್‌ ಅಧಿಕಾರಿಗಳು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಗುರುವಾರ ಹರಿಯಾಣದ ಅಂಬಾಲದಲ್ಲಿ ರೈತರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ  ಹಿಂಸಾಚಾರದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಸಾವನ್ನಪ್ಪಿದ್ದಾರೆ. 30ಕ್ಕೂ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಹಿಂಸಾಚಾರ ಹಿನ್ನೆಲೆಯಲ್ಲಿ ರೈತ ನಾಯಕರ ವಿರುದ್ಧ ಪೊಲೀಸರು ನ್ಯಾಷನಲ್ ಸೆಕ್ಯೂರಿಟಿ ಆ್ಯಕ್ಟ್ (NSA) ಅಡಿಯಲ್ಲಿ ಕ್ರಮ ತೆಗೆದುಕೊಳ್ಳಲು ಮುಂದಾಗಿದ್ದಾರೆ.

ಇದನ್ನೂ ಓದಿ: ರೀಲ್ಸ್ ತುಂಬಾ ರಾಹುಲ್ಲನದ್ದೇ ಹವಾ – ಬೆಳ್ಳುಳ್ಳಿ ಕಬಾಬ್ ಕ್ರೇಜ್ ಹೇಗಿದೆ?

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅಂಬಾಲಾ ಪೊಲೀಸರು ಪ್ರೆಸ್​ನೋಟ್ ಬಿಡುಗಡೆ ಮಾಡಿದ್ದಾರೆ. ‘ಡೆಲ್ಲಿ ಚಲೋ’ ಪ್ರತಿಭಟನೆ ನಡೆಸುತ್ತಿರುವ ರೈತರು, ಬ್ಯಾರಿಕೇಡ್​ಗಳನ್ನು ಕಿತ್ತು ಹಾಕಲು ನಿರಂತರ ಪ್ರಯತ್ನವನ್ನು ಮಾಡುತ್ತಿದ್ದಾರೆ. ಪೊಲೀಸರು ಅಲ್ಲಿಗೆ ಹೋದರೆ ಕಲ್ಲುಗಳನ್ನು ಎಸೆಯುತ್ತಿದ್ದಾರೆ.

ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿಯುಂಟು ಮಾಡುತ್ತಿದ್ದಾರೆ. ಈ ಮೂಲಕ ಶಾಂತಿ-ಸುವ್ಯವಸ್ಥೆಗೆ ದಕ್ಕೆ ತರುವ ಪ್ರಯತ್ನ ಮಾಡುತ್ತಿದ್ದಾರೆ. ನಿರಂತರ ಹಿಂಸಾಚಾರದಿಂದ 30 ಅಧಿಕಾರಿಗಳು ಗಾಯಗೊಂಡಿದ್ದಾರೆ. ಇಬ್ಬರು ಜೀವ ಕಳೆದುಕೊಂಡಿದ್ದಾರೆ. ಪೊಲೀಸ್ ಅಧಿಕಾರಿಗಳ ತಲೆಗಳಿಗೆ ಗಂಭೀರ ಏಟು ಬಿದ್ದಿದೆ ಎಂದು ತಿಳಿಸಿದ್ದಾರೆ. ವಿವಿಧ ಬೇಡಿಕೆ ಈಡೇರಿಕೆ ಸಂಬಂಧ ಫೆಬ್ರವರಿ 13 ರಿಂದ ರೈತ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ.

Shwetha M