ಎರಡು ಬಸ್‌ಗಳ ಮಧ್ಯೆ ಭೀಕರ ಅಪಘಾತ – 40 ಪ್ರಯಾಣಿಕರಿಗೆ ಗಂಭೀರ ಗಾಯ

ಎರಡು ಬಸ್‌ಗಳ ಮಧ್ಯೆ ಭೀಕರ ಅಪಘಾತ – 40 ಪ್ರಯಾಣಿಕರಿಗೆ ಗಂಭೀರ ಗಾಯ

ಉತ್ತರ ಹಾಗೂ ಪೂರ್ವ ಭಾರತದ ಬಹುತೇಕ ಪ್ರದೇಶಗಳಲ್ಲಿ ಚಳಿ ಹೆಚ್ಚಾಗಿದೆ. ತಾಪಮಾನ ಕುಸಿತದಿಂದಾಗಿ ದಟ್ಟ ಮಂಜು ಆವರಿಸಿಕೊಳ್ಳುತ್ತಿದೆ. ಇದರಿಂದಾಗಿ ಕಡಿಮೆ ಗೋಚರತೆಯುಂಟಾಗುತ್ತಿದ್ದು, ಅಪಘಾತಗಳು ಸಂಭವಿಸುತ್ತಿವೆ. ಯಮುನಾ ಎಕ್ಸ್​ಪ್ರೆಸ್​ ವೇನಲ್ಲಿ ಎರಡು ಬಸ್​ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ 40 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಮೇಯರ್‌ ಚುನಾವಣೆಯಲ್ಲಿ ಆಡಳಿತ ಪಕ್ಷಕ್ಕೆ ಭಾರಿ ಮುಖಭಂಗ  – ಭಾರತದ ಪರ ಪಕ್ಷಕ್ಕೆ ಭರ್ಜರಿ ಗೆಲುವು

ಮಥುರಾದಲ್ಲಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ದಟ್ಟ ಮಂಜಿನಿಂದಾಗಿ ರಸ್ತೆ ಕಾಣದಂತಾಗಿದೆ. ಹೀಗಾಗಿ ಎರಡು ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಈ ಅಪಘಾತದಲ್ಲಿ ಎರಡೂ ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದ 40 ಮಂದಿ ಗಾಯಗೊಂಡಿದ್ದು, ಅವರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಗಾಯಗೊಂಡ ಪ್ರಯಾಣಿಕರಲ್ಲಿ 31 ಮಂದಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದ 9 ಮಂದಿಯನ್ನು ಮಥುರಾದ ಇತರೆ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಮಾಹಿತಿಯ ಪ್ರಕಾರ, ಒಂದು ಬಸ್ ಧೋಲ್‌ಪುರ (ರಾಜಸ್ಥಾನ) ನಿಂದ ನೋಯ್ಡಾಗೆ ಹೋಗುತ್ತಿತ್ತು ಮತ್ತು ಇನ್ನೊಂದು ಬಸ್ ಇಟಾವಾದಿಂದ ನೋಯ್ಡಾಕ್ಕೆ ಹೋಗುತ್ತಿತ್ತು.

ಆಗ್ರಾದಿಂದ ನೊಯ್ಡಾ ಮಾರ್ಗವಾಗಿ ಬೆಳಗಿನ ಜಾವ 3 ಗಂಟೆಗೆ ಎರಡು ಬಸ್‌ಗಳ ನಡುವೆ ಭಾರಿ ಡಿಕ್ಕಿ ಸಂಭವಿಸಿದೆ. ರಸ್ತೆ ಅಪಘಾತದ ಬಳಿಕ ಸ್ಥಳದಲ್ಲಿ ಅಳಲು ತೋಡಿಕೊಂಡರು. ಮಥುರಾದ ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ ಸಂಭವಿಸಿದ ಅಪಘಾತದ ಕುರಿತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪೋಸ್ಟ್​ ಮಾಡಿದ್ದು, ಮಥುರಾ ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಪ್ರಯಾಣಿಕರಿಗೆ ಕೂಡಲೇ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚಿಸಿದ್ದಾರೆ.

Shwetha M