T20Iನಲ್ಲಿ ಮಂದಾನಾ ನಂ.1 – ಕಡಲೆಕಾಯಿ ವ್ಯಾಪಾರಿ PAK ಬಾಬರ್

ಕ್ರಿಕೆಟ್ ಲೋಕದ ಇಂಟ್ರೆಸ್ಟಿಂಗ್ ಸುದ್ದಿ
ಶಫಾಲಿ ವರ್ಮಾ ಸಿಡಿಸಿದ ಚೊಚ್ಚಲ T20I ಶತಕದ ನೆರವಿನಿಂದ ಭಾರತ ಮಹಿಳಾ ತಂಡ ಏಷ್ಯನ್ ಗೇಮ್ಸ್ 2026ರ ಫೈನಲ್ಗೆ ಲಗ್ಗೆ ಇಟ್ಟಿದೆ. ಬಾಂಗ್ಲಾದೇಶ ವಿರುದ್ಧದ ಸೆಮಿಫೈನಲ್ನಲ್ಲಿ ಶಫಾಲಿ 49 ಎಸೆತಗಳಲ್ಲಿ ಅಜೇಯ 100 ರನ್ ಸಿಡಿಸಿದರು. ಭಾರತ 195 ರನ್ ಕಲೆಹಾಕಿ, ಬಾಂಗ್ಲಾದೇಶವನ್ನು 114 ರನ್ಗಳಿಂದ ಸೋಲಿಸಿತು.
ಭಾರತದ ಸ್ಮೃತಿ ಮಂದಾನಾ ಮಹಿಳಾ T20I ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿಯಾಗಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಸೆಮಿಫೈನಲ್ನಲ್ಲಿ 37 ರನ್ ಗಳಿಸುವ ಮೂಲಕ ಅವರು ನ್ಯೂಜಿಲೆಂಡ್ನ ಸುಝಿ ಬೇಟ್ಸ್ ಅವರನ್ನು ಹಿಂದಿಕ್ಕಿದರು. ಮಂದಾನಾ ಇದೀಗ ಮಹಿಳಾ T20Iನಲ್ಲಿ 4,788 ರನ್ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.
ಇದನ್ನೂ ಓದಿ: ಏಷ್ಯನ್ ಗೇಮ್ಸ್ನಲ್ಲಿ ಭಾರತಕ್ಕೆ ಮತ್ತೊಂದು ಬೆಳ್ಳಿ! ಶೂಟಿಂಗ್ನಲ್ಲಿ 3ನೇ ಪದಕ
ಏಷ್ಯನ್ ಗೇಮ್ಸ್ ಮಹಿಳಾ ಕ್ರಿಕೆಟ್ನಲ್ಲಿ ಭಾರತ ಮತ್ತು ಶ್ರೀಲಂಕಾ ಫೈನಲ್ನಲ್ಲಿ ಮುಖಾಮುಖಿಯಾಗಲಿವೆ. ಭಾರತ ಬಾಂಗ್ಲಾದೇಶವನ್ನು 114 ರನ್ಗಳಿಂದ ಸೋಲಿಸಿ ಫೈನಲ್ ಪ್ರವೇಶಿಸಿದರೆ, ಶ್ರೀಲಂಕಾ ಪಾಕಿಸ್ತಾನವನ್ನು 8 ವಿಕೆಟ್ಗಳಿಂದ ಮಣಿಸಿ ಪ್ರಶಸ್ತಿ ಪಂದ್ಯಕ್ಕೆ ಬಂದಿದೆ. ಹೀಗಾಗಿ ಚಿನ್ನದ ಪದಕಕ್ಕಾಗಿ ಭಾರತ-ಶ್ರೀಲಂಕಾ ಕದನ ಕುತೂಹಲ ಮೂಡಿಸಿದೆ.
ಜಿಂಬಾಬ್ವೆ ವಿರುದ್ಧದ ಮೂರನೇ ODIಯಲ್ಲಿ ಆಸ್ಟ್ರೇಲಿಯಾ ಒಂದು ವಿಕೆಟ್ ರೋಚಕ ಗೆಲುವು ಸಾಧಿಸಿ ಮೂರು ಪಂದ್ಯಗಳ ಸರಣಿಯನ್ನು 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿದೆ. 272 ರನ್ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 9 ವಿಕೆಟ್ಗೆ 273 ರನ್ ಗಳಿಸಿತು. ಜೋಶ್ ಇಂಗ್ಲಿಸ್ ಶತಕ ಸಿಡಿಸಿದರೆ, ನಾಥನ್ ಎಲ್ಲಿಸ್ ಅಂತಿಮ ಹಂತದಲ್ಲಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.
15 ವರ್ಷದ ವೈಭವ್ ಸೂರ್ಯವಂಶಿಯನ್ನು ಶ್ರೀಲಂಕಾದ ದಿಗ್ಗಜ ಸನತ್ ಜಯಸೂರ್ಯ ಭವಿಷ್ಯದ ಭಾರತದ ಆಟಗಾರ ಎಂದು ಬಣ್ಣಿಸಿದ್ದಾರೆ. ಆದರೆ ಅವರನ್ನು ತಕ್ಷಣವೇ ಪ್ಲೇಯಿಂಗ್ ಇಲೆವೆನ್ಗೆ ಸೇರಿಸುವ ಬದಲು ತಾಳ್ಮೆಯಿಂದ ಅವಕಾಶಕ್ಕಾಗಿ ಕಾಯಲು ಸಲಹೆ ನೀಡಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ T20I ಸರಣಿಯಲ್ಲಿ ವೈಭವ್ ತಂಡದಲ್ಲಿದ್ದರೂ ಒಂದೂ ಪಂದ್ಯ ಆಡಿರಲಿಲ್ಲ.
ಭಾರತದ ಅನುಭವಿ ವೇಗಿ ಉಮೇಶ್ ಯಾದವ್ ವಿದರ್ಭ ತಂಡವನ್ನು ತೊರೆಯಲು ನಿರ್ಧರಿಸಿದ್ದಾರೆ. ವಿದರ್ಭ ಕ್ರಿಕೆಟ್ ಅಸೋಸಿಯೇಷನ್ನಿಂದ NOC ಪಡೆದಿರುವ ಅವರು ಇದೀಗ ಮತ್ತೊಂದು ರಾಜ್ಯ ತಂಡದೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ. ದೇಶೀಯ ಕ್ರಿಕೆಟ್ನಲ್ಲಿ ಇನ್ನಷ್ಟು ಅವಕಾಶ ಸಿಗಬೇಕೆಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ವರದಿಯಾಗಿದೆ.
ಮಹಿಳಾ ಪ್ರೀಮಿಯರ್ ಲೀಗ್ 2027ರ ಐದನೇ ಆವೃತ್ತಿ ಜನವರಿ 14ರಿಂದ ಫೆಬ್ರವರಿ 7ರವರೆಗೆ ನಡೆಯಲಿದೆ. ಐದು ಫ್ರಾಂಚೈಸಿಗಳಿಗೆ ಆಟಗಾರರ ರಿಟೆನ್ಷನ್ ಗಡುವು ಸೆಪ್ಟೆಂಬರ್ 28. ನಂತರ ಅಕ್ಟೋಬರ್ 28ರಂದು ಕೊಚ್ಚಿಯಲ್ಲಿ ಆಟಗಾರರ ಹರಾಜು ನಡೆಯಲಿದೆ. ಹೊಸ ಸೀಸನ್ಗಾಗಿ ತಂಡಗಳ ಸಂಯೋಜನೆ ಈಗಿನಿಂದಲೇ ಕುತೂಹಲ ಮೂಡಿಸಿದೆ.
ಪ್ರಸ್ತುತ ಟಿ20 ಕ್ರಿಕೆಟ್ನ ಸ್ಫೋಟಕ ಬ್ಯಾಟರ್ಗಳಾದ ಅಭಿಷೇಕ್ ಶರ್ಮಾ ಹಾಗೂ ವೈಭವ್ ಸೂರ್ಯವಂಶಿ ಸ್ವದೇಶದಲ್ಲಿ ಸಿಂಹದಂತೆ ಅಬ್ಬರಿಸಿದರೂ ವಿದೇಶಿ ಪಿಚ್ಗಳಲ್ಲಿ ಬೆಕ್ಕಿನಂತಾಗುತ್ತಾರೆ ಎಂದು ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಸಂದೀಪ್ ಪಾಟೀಲ್ ಕಟುವಾಗಿ ವ್ಯಂಗ್ಯವಾಡಿದ್ದಾರೆ. ತವರಿನ ಮೈದಾನಗಳಲ್ಲಿ ಅಬ್ಬರಿಸುವ ಈ ಯುವ ಆಟಗಾರರು, ವಿದೇಶಿ ಪಿಚ್ಗಳ ಸ್ವಿಂಗ್ ಮತ್ತು ಸವಾಲುಗಳನ್ನು ಎದುರಿಸಲು ತಮ್ಮ ಬ್ಯಾಟಿಂಗ್ ತಂತ್ರವನ್ನು ಬದಲಾಯಿಸಿಕೊಳ್ಳದಿದ್ದರೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಸುದೀರ್ಘ ಕಾಲ ಉಳಿಯುವುದು ಕಷ್ಟ ಎಂದು ಅವರು ನೇರವಾಗಿಯೇ ಎಚ್ಚರಿಸಿದ್ದಾರೆ.
ಮ್ಯಾಂಚೆಸ್ಟರ್ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪಾಕಿಸ್ತಾನದ ಮಾಜಿ ನಾಯಕ ವಾಸಿಂ ಅಕ್ರಮ್, ಬಾಬರ್ ಅಜಂ ಅವರ ಹೇಳಿಕೆಯೊಂದನ್ನು ಪ್ರಸ್ತಾಪಿಸಿ ಕಟುವಾಗಿ ಟೀಕಿಸಿದ್ದಾರೆ. ಬಾಬರ್ ಅವರ ಬೇಜವಾಬ್ದಾರಿ ಹೇಳಿಕೆಯನ್ನು ಉಲ್ಲೇಖಿಸಿದ ಅಕ್ರಮ್, “ನೀವೇನಾದರೂ ಇಲ್ಲಿ ಕಡಲೆಕಾಯಿ ಮಾರಲು ಬಂದಿದ್ದಾ?” ಎಂದು ಪ್ರಶ್ನಿಸಿದ್ದಾರೆ. ಅಕ್ರಮ್ ಅವರ ಈ ಹೇಳಿಕೆ ಇದೀಗ ಕ್ರಿಕೆಟ್ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲೂ ಈ ಮಾತಿನ ಬಗ್ಗೆ ವ್ಯಾಪಕ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.
ಕೆರಿಬಿಯನ್ ಪ್ರೀಮಿಯರ್ ಲೀಗ್ನ 13ನೇ ಸೀಸನ್ನಲ್ಲಿ ಅಂಟಿಗುವಾ ಅ್ಯಂಡ್ ಬಾರ್ಬುಡಾ ಫಾಲ್ಕನ್ಸ್ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಜಮೈಕಾ ಕಿಂಗ್ಸ್ಮೆನ್ ವಿರುದ್ಧ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸುವ ಮೂಲಕ ಅಂಟಿಗುವಾ ಅ್ಯಂಡ್ ಬಾರ್ಬುಡಾ ಫಾಲ್ಕನ್ಸ್ ಚೊಚ್ಚಲ ಬಾರಿ ಟ್ರೋಫಿ ಎತ್ತಿ ಹಿಡಿದಿದೆ.

ನೋಡಿರಿ

