ಮೋಸ್ಟ್‌ ವಾಂಟೆಡ್‌ ಪಟ್ಟಿಯಿಂದ ವಂಚಕ ಮೆಹುಲ್ ಚೋಕ್ಸಿ ಔಟ್ – ಇಂಟರ್‌ ಪೋಲ್‌ ನಡೆಗೆ ಭಾರತ ಆಕ್ಷೇಪ!

ಮೋಸ್ಟ್‌ ವಾಂಟೆಡ್‌ ಪಟ್ಟಿಯಿಂದ ವಂಚಕ ಮೆಹುಲ್ ಚೋಕ್ಸಿ ಔಟ್ – ಇಂಟರ್‌ ಪೋಲ್‌ ನಡೆಗೆ ಭಾರತ ಆಕ್ಷೇಪ!

ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ 13,000 ಕೋಟಿ ರೂಪಾಯಿ ವಂಚನೆ ಪ್ರಕರಣದ ಪ್ರಮುಖ ಆರೋಪಿ, ವಜ್ರ ವ್ಯಾಪಾರಿ ಮೆಹುಲ್‌ ಚೋಕ್ಸಿ ಹೆಸರನ್ನು ಇಂಟರ್‌ಪೋಲ್‌ ತನ್ನ ಮೋಸ್ಟ್‌ ವಾಂಟೆಡ್‌ ಪಟ್ಟಿಯಿಂದ ಕೈಬಿಟ್ಟಿದೆ. ಇಂಟರ್‌ಪೋಲ್‌ನ ಈ ಕ್ರಮಕ್ಕೆ ಭಾರತ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪಿಎನ್‌ಬಿ ವಂಚನೆ ಬೆಳಕಿಗೆ ಬರುವ ಮುನ್ನ ಚೋಕ್ಸಿ ವಿದೇಶಕ್ಕೆ ಪರಾರಿಯಾಗಿದ್ದ. ಈ ಹಿನ್ನೆಲೆಯಲ್ಲಿ ಭಾರತದ ಕೋರಿಕೆ ಅನ್ವಯ 2018ರ ಡಿಸೆಂಬರ್‌ನಲ್ಲಿ ಆತನ ವಿರುದ್ಧ ಇಂಟರ್‌ಪೋಲ್‌ ಅರೆಸ್ಟ್‌ ವಾರಂಟ್‌ ಜಾರಿ ಮಾಡಿತ್ತು.

ಇದನ್ನೂ ಓದಿ : ಈ ಜಾಗ ಎಷ್ಟು ಸುಂದರವೋ ಅಷ್ಟೇ ಭಯಾನಕ…! “ರೂಪಕುಂಡ” ರಹಸ್ಯವೇನು ಗೊತ್ತಾ…?

ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ 13,000 ಕೋಟಿ ರೂಪಾಯಿ ವಂಚಿಸಿದ ಪ್ರಕರಣದ ಪ್ರಮುಖ ಆರೋಪಿ, ವಜ್ರ ವ್ಯಾಪಾರಿ ಮೆಹುಲ್‌ ಚೋಕ್ಸಿ ಹೆಸರನ್ನು ಇಂಟರ್‌ಪೋಲ್‌ ತನ್ನ ಮೋಸ್ಟ್‌ ವಾಂಟೆಡ್‌ ಪಟ್ಟಿಯಿಂದ ಕೈಬಿಟ್ಟಿದೆ. ಈ ಬೆಳವಣಿಗೆಯ ಬಗ್ಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ಕೂಡ ಸೈಲೆಂಟ್ ಆಗಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದೆ. 2018ರ ಡಿಸೆಂಬರ್‌ನಲ್ಲಿ ಚೋಕ್ಸಿಯನ್ನು ರೆಡ್ ಕಾರ್ನರ್ ನೋಟಿಸ್ ಪಟ್ಟಿಗೆ ಸೇರಿಸಲಾಗಿತ್ತು. ಮೂಲಗಳ ಪ್ರಕಾರ, ಭಾರತ ಸರ್ಕಾರದ ಅಧಿಕಾರಿಗಳು ಇಂಟರ್‌ಪೋಲ್‌ನ ಕ್ರಮವನ್ನು ವಿರೋಧಿಸಿದರೂ, ಅದು ತನ್ನ ನಿರ್ಧಾರವನ್ನು ಹಿಂತೆಗೆದುಕೊಳ್ಳಲು ನಿರಾಕರಿಸಿತು ಎನ್ನಲಾಗಿದೆ.

ಇಂಟರ್ ಪೋಲ್ ವಿಶ್ವಾದ್ಯಂತ 195 ಸದಸ್ಯ ದೇಶಗಳನ್ನು ಹೊಂದಿದ್ದು, ಆ ದೇಶದ ಕಾನೂನು ಜಾರಿ ಸಂಸ್ಥೆಗಳಿಗೆ ಸಹಾಯ ಮಾಡಲು ನಾಪತ್ತೆಯಾದ ವಂಚಕರನ್ನು ಹಸ್ತಾಂತರ, ಶರಣಾಗತಿ ಅಥವಾ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವುದು ಮತ್ತು ತಾತ್ಕಾಲಿಕವಾಗಿ ಬಂಧಿಸುವ ಕೆಲಸವನ್ನು ಮಾಡುತ್ತದೆ. ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ವಂಚನೆ ಬೆಳಕಿಗೆ ಬರುವ ಮುನ್ನ ಚೋಕ್ಸಿ ಭಾರತದಿಂದ ಪರಾರಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಭಾರತದ ಕೋರಿಕೆ ಅನ್ವಯ 2018ರ ಡಿಸೆಂಬರ್‌ನಲ್ಲಿ ಅವರ ವಿರುದ್ಧ ಇಂಟರ್‌ಪೋಲ್‌ ಅರೆಸ್ಟ್‌ ವಾರಂಟ್‌ ಜಾರಿ ಮಾಡಿತ್ತು.

ಭಾರತದಿಂದ ಓಡಿಹೋದ ಚೋಕ್ಸಿ, ಆಂಟಿಗುವಾ ಮತ್ತು ಬಾರ್ಬುಡಾದಲ್ಲಿ ಆಶ್ರಯ ಪಡೆಯಲು ಅಲ್ಲಿನ ಪೌರತ್ವವನ್ನು ಪಡೆದಿದ್ದರು. ಚೋಕ್ಸಿ ವಿರುದ್ಧ ಮೋಸ್ಟ್ ವಾಂಟೆಡ್ ನೋಟಿಸ್ ಜಾರಿ ಮಾಡುವಂತೆ ಕೋರಿ ಸಿಬಿಐ ಅರ್ಜಿ ಸಲ್ಲಿಸಿತ್ತು. ಇದನ್ನು ಚೋಕ್ಸಿ ಪ್ರಶ್ನಿಸಿದ್ದು, ಈ ಪ್ರಕರಣವನ್ನು ರಾಜಕೀಯ ಪಿತೂರಿ ಎಂದು ಕರೆದಿದ್ದಾರೆ. ಭಾರತದಲ್ಲಿನ ಜೈಲು ಪರಿಸ್ಥಿತಿಗಳು, ಅವರ ವೈಯಕ್ತಿಕ ಸುರಕ್ಷತೆ ಮತ್ತು ಆರೋಗ್ಯದ ವಿಷಯಗಳಿಗೆ ಅನಾನುಕೂಲ ತರುವ ಬಗ್ಗೆಯೂ ಅವರು ಪ್ರಶ್ನೆಗಳನ್ನು ಎತ್ತಿದ್ದರು ಎಂದು ಮೂಲಗಳು ಹೇಳಿವೆ.

suddiyaana