ರಾಜ್ಯ ಸರ್ಕಾರದಿಂದ ಮಹಿಳಾ ಸಾರಿಗೆ ನೌಕರರಿಗೆ ಬಂಪರ್ ಗಿಫ್ಟ್! – ವರ್ಷಕ್ಕೆ 12 ದಿನ ವೇತನ ಸಹಿತ ರಜೆ ಹೆಚ್ಚಳ!

ಹೊಸ ವರ್ಷದ ಹೊಸ್ತಿಲಲ್ಲೇ ರಾಜ್ಯದ ಮಹಿಳಾ ಸಾರಿಗೆ ನೌಕರರಿಗೆ ಸರ್ಕಾರ ಗುಡ್ನ್ಯೂಸ್ ಕೊಟ್ಟಿದೆ. ಜನವರಿ 1 ರಿಂದ ಋತುಚಕ್ರ ರಜೆಯನ್ನು ನೀಡಿದ್ದು, ಇದೀಗ ಅಧಿಕೃತ ಆದೇಶವನ್ನು ಕೆಎಸ್ಆರ್ಟಿಸಿ ಹೊರಡಿಸಿದೆ.
ಇದನ್ನೂ ಓದಿ: ಅಯೋಧ್ಯೆಗೆ 30 ಕೋಟಿ ಮೌಲ್ಯದ ಚಿನ್ನದ ರಾಮನ ಮೂರ್ತಿ ಕೊಟ್ಟ ಕರ್ನಾಟಕದ ಅನಾಮಿಕ ಭಕ್ತ!
ಬಿಎಂಟಿಸಿ, ಕೆಎಸ್ಆರ್ಟಿಸಿ, ಕೆಕೆಆರ್ಟಿಸಿ ಹಾಗೂ ಎನ್ಡಬ್ಲ್ಯೂಕೆಎಸ್ಆರ್ಟಿಸಿ ನಿಗಮದ ಮಹಿಳಾ ನೌಕರರಿಗೆ ರಾಜ್ಯ ಸರ್ಕಾರ ಋತುಚಕ್ರ ರಜೆಯನ್ನು ಮಂಜೂರು ಮಾಡಿದೆ. ಜನವರಿ 1ರಿಂದ ಋತುಚಕ್ರ ರಜೆಯನ್ನು ನೀಡಿ ಅಧಿಕೃತ ಆದೇಶವನ್ನು ಕೆಎಸ್ಆರ್ಟಿಸಿ ಹೊರಡಿಸಿದೆ. ಋತುಚಕ್ರ ಹೊಂದಿರುವ, 18 ರಿಂದ 52 ವಯಸ್ಸಿನ ನಿಗಮದ ಮಹಿಳಾ ನೌಕರರು ಈ ರಜೆಯನ್ನು ಪಡೆಯಲು ಅರ್ಹರಿರುತ್ತಾರೆ . ಈ ರಜೆಯನ್ನು ಪಡೆಯಲು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅಗತ್ಯವಿಲ್ಲ.
ಈ ಕುರಿತಂತೆ ಕೆ ಎಸ್ ಆರ್ ಟಿ ಸಿಯ ವ್ಯವಸ್ಥಾಪಕ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ ಕರ್ನಾಟಕ ಸರ್ಕಾರವು ಉಲ್ಲೇಖಿತ ಸರ್ಕಾರದ ಆದೇಶಗಳಲ್ಲಿ ಮಹಿಳಾ ನೌಕರರ ಮನೋಸ್ಥೆರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆಯ ಸೌಲಭ್ಯವನ್ನು ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೂ ಕಲ್ಪಿಸಿ ಷರತ್ತು ಮತ್ತು ನಿಬಂಧನೆಗೊಳಪಟ್ಟು ರಜೆ ಮಂಜೂರು ಮಾಡಲು ಆದೇಶಿಸಿರುತ್ತದೆ ಎಂದಿದ್ದಾರೆ.
ಸದರಿ ಆದೇಶವನ್ನು ನಿಗಮದಲ್ಲಿ ಅಳವಡಿಸಿಕೊಂಡಿದ್ದು, ಅದರಂತೆ ನಿಗಮದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ದಿನಾಂಕ: 01.01.2026 ರಿಂದ ಜಾರಿಗೆ ಬರುವಂತೆ ಪ್ರತಿ ತಿಂಗಳು ಒಂದು ದಿನದಂತೆ ಋತುಚಕ್ರ ರಜೆಯ ಸೌಲಭ್ಯವನ್ನು ಈ ಕೆಳಕಂಡ ಷರತ್ತುಗಳಿಗೊಳಪಟ್ಟು ಮಂಜೂರು ಮಾಡುವುದು ಎಂದು ಹೇಳಿದ್ದಾರೆ.
ಷರತ್ತುಗಳೇನು?
ಋತುಚಕ್ರ ಹೊಂದಿರುವ, 18 ರಿಂದ 52 ವಯಸ್ಸಿನ ನಿಗಮದ ಮಹಿಳಾ ನೌಕರರು ಈ ರಜೆಯನ್ನು ಪಡೆಯಲು ಅರ್ಹರಿರುತ್ತಾರೆ.
ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಸಕ್ಷಮವಾದ ಪ್ರಾಧಿಕಾರಿಯು ಋತುಚಕ್ರ ರಜೆ ಮಂಜೂರು ಮಾಡಬಹುದು. ಈ ರಜೆಯನ್ನು ಪಡೆಯಲು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅಗತ್ಯವಿಲ್ಲ.
ಈ ರಜೆಯನ್ನು ರಜೆ/ಹಾಜರಾತಿ ಪುಸ್ತಕದಲ್ಲಿ ಪ್ರತ್ಯೇಕವಾಗಿ ನಮೂದಿಸತಕ್ಕದ್ದು.
ಋತುಚಕ್ರ ರಜೆಯನ್ನು ಬೇರೆ ಯಾವುದೇ ರಜೆಯೊಂದಿಗೆ ಸಂಯೋಜಿಸತಕ್ಕದ್ದಲ್ಲ. ಸದರಿ ರಜೆಯನ್ನು ಆಯಾ ತಿಂಗಳಿನಲ್ಲಿಯೇ ಬಳಸಿಕೊಳ್ಳುವುದು ಹಾಗೂ ಮುಂದಿನ ತಿಂಗಳಿಗೆ ವಿಸ್ತರಿಸಲು (carry over) ಅವಕಾಶವಿರುವುದಿಲ್ಲ.
ಈ ಸಂಬಂಧಪಟ್ಟವರೆಲ್ಲರೂ ಮೇಲಿನ ಆದೇಶವನ್ನು ಮನದಟ್ಟು ಮಾಡಿಕೊಂಡು ಅದರಂತೆ ಕ್ರಮ ಕೈಗೊಳ್ಳುವಂತೆ ಸಾರಿಗೆ ನಿಗಮಗಳಿಗೆ ಆದೇಶದಲ್ಲಿ ಸೂಚಿಸಿದ್ದಾರೆ.

ನೋಡಿರಿ

