ಭಾನುವಾರ ಬೆಳಿಗ್ಗೆ 6 ರಿಂದಲೇ ಮೆಟ್ರೋ ರೈಲುಗಳ ಸಂಚಾರ – ಯಾಕೆ ಗೊತ್ತಾ?
ಬೆಂಗಳೂರು: ಮೇ 28 ರಂದು ಯುಪಿಎಸ್‌ಸಿ ಪೂರ್ವಭಾವಿ ಪರೀಕ್ಷೆ ನಡೆಯುತ್ತಿದೆ. ಈ ಹಿನ್ನೆಲೆ ಬಿಎಂಆರ್ ಸಿಎಲ್ ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದೆ. ಪರೀಕ್ಷಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಭಾನುವಾರ ಮೆಟ್ರೋ ರೈಲುಗಳ ಸಂಚಾರ ಬೆಳಿಗೆ 6 ಗಂಟೆಯಿಂದಲೇ ಪ್ರಾರಂಭವಾಗಲಿವೆ ಎಂದು ಬಿಎಂಆರ್ ಸಿಎಲ್ ಹೇಳಿದೆ.
ಇದನ್ನೂ ಓದಿ: ಸಚಿವ ಸ್ಥಾನ ಕೈತಪ್ಪಿದ ಶಾಸಕರ ಆಕ್ರೋಶ – ಸಿದ್ದರಾಮಯ್ಯ ವಿರುದ್ಧ ಸಿಟ್ಟಾಗಿದ್ದೇಕೆ?
ನಮ್ಮ ಮೆಟ್ರೋ ಸಂಚಾರ ಪ್ರತಿ ಭಾನುವಾರ ಬೆಳಗ್ಗೆ 7 ಗಂಟೆಗೆ ಪ್ರಾರಂಭವಾಗುತ್ತದೆ. ಆದರೆ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆ ಒಂದು ಗಂಟೆ ಮುಂಚಿತವಾಗಿ ರೈಲುಗಳನ್ನು ಆರಂಭಿಸಲು ಬಿಎಂಆರ್ ಸಿಎಲ್ ನಿರ್ಧರಿಸಿದೆ.
ಈ ಬಗ್ಗೆ ಬಿಎಂಆರ್ ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಮಾಹಿತಿ ನೀಡಿದ್ದು, ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಒಂದು ಗಂಟೆ ಮುಂಚಿತವಾಗಿ ರೈಲುಗಳ ಸಂಚಾರವನ್ನು ಆರಂಭಿಸಲಾಗುತ್ತಿದೆ. ಬೈಯಪ್ಪನಹಳ್ಳಿ, ನಾಗಸಂದ್ರ, ರೇಷ್ಮೆ ಸಂಸ್ಥೆ, ಕೆಂಗೇರಿ, ಬೈಯಪ್ಪನಹಳ್ಳಿ, ಕೆ.ಆರ್. ಪುರ ಮತ್ತು ವೈಟ್ ಫೀಲ್ಡ್ ನಿಲ್ದಾಣಗಳಿಂದ ಮೊದಲ ರೈಲುಗಳು ಬೆಳಿಗ್ಗೆ 6 ಗಂಟೆಗೆ ಹೊರಡಲಿವೆ ಎಂದು ತಿಳಿಸಿದ್ದಾರೆ.