ಸಚಿವ ಡಿ.ಸುಧಾಕರ್ ಆರೋಗ್ಯ ಸ್ಥಿತಿ ಗಂಭೀರ! – ಕಿಮ್ಸ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ರಾಜ್ಯದ ಯೋಜನೆ ಮತ್ತು ಸಾಂಖಿಕ ಇಲಾಖೆ ಸಚಿವ ಡಿ.ಸುಧಾಕರ್ ಅವರ ಶ್ವಾಸಕೋಶದ ಸೋಂಕು ಉಲ್ಬಣವಾಗಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಅವರಿಗೆ ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಇದೀಗ ಕೀಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಬಳಿಕ ಅವರ ಕುಟುಂಬದ ಸದಸ್ಯರ ಜೊತೆ ಮಾತನಾಡಿದರು.
ಇದನ್ನೂ ಓದಿ: ಪವರ್‌ಗಾಗಿ ಡಿಕೆ ಬ್ರದರ್ಸ್ ಬಿಗಿಪಟ್ಟು! – ಹೈಕಮಾಂಡ್ ಅಂಗಳಲ್ಲಿ 2 ಷರತ್ತು.. ಮೇ ತಿಂಗಳಲ್ಲಿ ಕ್ಲೈಮ್ಯಾಕ್ಸ್?
ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿ, ಸಚಿವರಿಗೆ ಇನ್ನೂ ಪ್ರಜ್ಞೆ ಬಂದಿಲ್ಲ. ಶ್ವಾಸಕೋಶ ಟ್ರಾನ್ಸ್ ಪ್ಲಾಂಟ್ ಮಾಡಬೇಕಾದ್ರೆ ಮೆದಳು ಪ್ರಜ್ಞೆಯಲ್ಲಿರಬೇಕು. ಈ ಬಗ್ಗೆ ವೈದ್ಯರು ನಾಳೆ ತೀರ್ಮಾನ ಮಾಡಲಿದ್ದಾರೆ ಎಂದು ಮಾಹಿತಿ ನೀಡಿದರು.
ಸುಧಾಕರ್ ಅವರ ಕುಟುಂಬದವರ ಜೊತೆ ಮಾತನಾಡಿದ್ದೇನೆ. ಸಚಿವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ. ವೆಂಟಲೇಷನಲ್ಲಿ ಬೇರೆ ಎಲ್ಲಾ ಆರ್ಗನ್ಸ್ ಸ್ಟೇಬಲ್ಲಾಗಿವೆ. ಮೆದಳು ಮಾತ್ರ ಪ್ರಜ್ಞೆ ಇಲ್ಲ. ನಾಳೆ ವೈದ್ಯರು ಸಿಟಿ ಸ್ಕ್ಯಾನ್ ಮಾಡಲಿದ್ದಾರೆ. ಅದಾದ ನಂತರ ಕಂಡಿಷನ್ ಎನು ಎಂದು ಗೊತ್ತಾಗಲಿದೆ ಎಂದರು. ಮಾಧ್ಯಮಗಳ ಹೆಚ್ಚಿನ ಪ್ರಶ್ನೆಗೆ ʻಐ ಎಮ್ ನಾಟ್ ಎ ಡಾಕ್ಟರ್ʼ ಎಂದು ಹೇಳಿ ಅಲ್ಲಿಂದ ತೆರಳಿದ್ದಾರೆ.
ಕೆಲ ದಿನಗಳ ಹಿಂದೆ ಸಚಿವ ಸುಧಾಕರ್ ಅವರು ಸಾಮಾನ್ಯ ಮೊಣಕಾಲು ಶಸ್ತ್ರಚಿಕಿತ್ಸೆಗಾಗಿ ಯಶವಂತಪುರದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆಪರೇಷನ್ ಯಶಸ್ವಿಯಾದ ನಂತರದ ದಿನಗಳಲ್ಲಿ ಅವರಿಗೆ ಹಠಾತ್ತನೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿತು. ಮಣಿಪಾಲ್ ಆಸ್ಪತ್ರೆಯಲ್ಲಿ ಸೋಂಕಿಗೆ ಚಿಕಿತ್ಸೆ ನೀಡಲಾಯಿತಾದರೂ, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿರಲಿಲ್ಲ.
ಶ್ವಾಸಕೋಶದ ಸೋಂಕು ಗಂಭೀರ ಸ್ವರೂಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಎರಡು ದಿನಗಳ ಹಿಂದೆ ಅವರನ್ನು ಮಣಿಪಾಲ್ ಆಸ್ಪತ್ರೆಯಿಂದ ಎಲೆಕ್ಟ್ರಾನಿಕ್ ಸಿಟಿಯ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ನೋಡಿರಿ

