ರಮೇಶ್ ಜಾರಕಿಹೊಳಿ ತಂಗಿದ್ದ ಸರ್ಕಾರಿ ನಿವಾಸವನ್ನೇ ಆಯ್ಕೆ ಮಾಡಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್..!

ರಮೇಶ್ ಜಾರಕಿಹೊಳಿ ತಂಗಿದ್ದ ಸರ್ಕಾರಿ ನಿವಾಸವನ್ನೇ ಆಯ್ಕೆ ಮಾಡಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್..!

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನನಗೆ ಸರ್ಕಾರಿ ನಿವಾಸ ಕೊಡುವುದಾದರೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಉಳಿದುಕೊಂಡಿದ್ದ ಸರ್ಕಾರಿ ನಿವಾಸವೇ ಕೊಡಿ ಅಂತಾ ಕೇಳುತ್ತಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಉಳಿದುಕೊಂಡಿದ್ದ ಸರ್ಕಾರಿ ನಿವಾಸವೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತುಂಬಾ ಇಷ್ಟವಾಗಿದೆಯಂತೆ. ಸ್ಯಾಂಕಿ ರಸ್ತೆಯಲ್ಲಿ ಇರುವ ಸೆವೆನ್ ಮಿನಿಸ್ಟರ್ಸ್ ಕ್ವಾಟರ್ಸ್ ನಲ್ಲಿ ಇರುವ ಬಲಭಾಗದ ನಾಲ್ಕನೇ ನಿವಾಸದಲ್ಲಿ ಈ ಹಿಂದೆ ರಮೇಶ್ ಜಾರಕಿಹೊಳಿ ಉಳಿದುಕೊಂಡಿದ್ದರು. ಸಮ್ಮಿಶ್ರ ಸರ್ಕಾರ ಪತನವಾಗುವ ಸಂದರ್ಭದಲ್ಲಿ ಇದೇ ಸರ್ಕಾರಿ ನಿವಾಸದಲ್ಲಿ ರಮೇಶ್ ಜಾರಕಿಹೊಳಿ ವಾಸ್ತವ್ಯ ಹೂಡಿದ್ದರು. ಆದರೆ ಇದೀಗ ನೂತನವಾಗಿ ಸಚಿವೆಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇದೇ ಸರ್ಕಾರಿ ನಿವಾಸವನ್ನೇ ಆಯ್ಕೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ:  ಬಿಜೆಪಿ ಸರ್ಕಾರದಿಂದ ಕಾನೂನು ಉಲ್ಲಂಘಿಸಿ RSSಗೆ ಭೂಮಿ ಪರಭಾರೆ? -ಭೂಮಿ ವಾಪಸ್ ಪಡೆಯುತ್ತೇವೆಂದ ದಿನೇಶ್ ಗುಂಡೂರಾವ್!

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶುಕ್ರವಾರ ಬೆಳಗ್ಗೆ ಸೆವೆನ್ ಮಿನಿಸ್ಟರ್ ಕ್ವಾರ್ಟರ್ಸ್ ಗೆ ಆಗಮಿಸಿ ಸರ್ಕಾರಿ ಬಂಗಲೆ ಪರಿಶೀಲನೆ ಮಾಡಿದರು. ಈ ವೇಳೆ ನಿವಾಸದ ಕೀ ಇಲ್ಲದ ಕಾರಣದಿಂದ ಹೊರಗಡೆ ಮಾತ್ರ ಪರಿಶೀಲನೆ ನಡೆಸಿ ತೆರಳಿದ್ದಾರೆ. ಖಾತೆ, ಕೊಠಡಿ ಹಾಗೂ ಬಂಗಲೆ ಪಡೆದುಕೊಳ್ಳುವ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಡುವೆ ಪೈಪೋಟಿ ಸಾಕಷ್ಟು ಸುದ್ದಿಯಾಗಿತ್ತು. ಅಷ್ಟೇ ಅಲ್ಲದೆ ಡಿಕೆಶಿ ನಿವಾಸ ಇರುವ ಸದಾಶಿವ ನಗರದಲ್ಲಿ ರಮೇಶ್ ಜಾರಕಿಹೊಳಿ ಮನೆಯನ್ನು ನಿರ್ಮಾಣ ಮಾಡಿದ್ದು ಕೂಡಾ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಸಿ.ಡಿ ವಿಚಾರವಾಗಿಯೂ ರಮೇಶ್ ಜಾರಕಿಹೊಳಿ ಅವರು ಡಿಕೆ ಶಿವಕುಮಾರ್ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದರು.

suddiyaana