ಜೂನ್ 27ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ – ಫಲಾನುಭವಿಗಳ ಆಯ್ಕೆ ಬಗ್ಗೆ ಮಹತ್ವದ ಮಾಹಿತಿ
ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ನೀಡಿದ್ದ 5 ಗ್ಯಾರಂಟಿಗಳಲ್ಲಿ ಈಗಾಗಲೇ ಶಕ್ತಿ ಯೋಜನೆ ಸಂಪೂರ್ಣವಾಗಿ ಜಾರಿಯಾಗಿದೆ. ಹಾಗೇ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲಾಗುತ್ತಿದೆ. ಆದರೆ ಸರ್ವರ್ ಡೌನ್ ನಿಂದ ಸೇವಾಸಿಂಧು ಪೋರ್ಟಲ್ ನಲ್ಲಿ ಸಮಸ್ಯೆಯಾಗುತ್ತಿದ್ದು ಜನ ಹೈರಾಣಾಗಿದ್ದಾರೆ. ಇದರ ನಡುವೆ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಯಾವಾಗಿನಿಂದ ಸಲ್ಲಿಕೆ ಮಾಡಬೇಕು ಎಂಬ ಗೊಂದಲ ಮೂಡಿದ್ದು, ಇದಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತೆರೆ ಎಳೆದಿದ್ದಾರೆ.
ಇದನ್ನೂ ಓದಿ : ಹಗಲು ಕಡಿಮೆ ದರ.. ರಾತ್ರಿ ಹೆಚ್ಚು ಬೆಲೆ – ಅವಧಿ ಆಧರಿಸಿ ಕರೆಂಟ್ ಬಿಲ್ ನೀಡಲು ಕೇಂದ್ರದ ಹೊಸ ನೀತಿಯಲ್ಲಿ ಪ್ರಸ್ತಾವ
ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಹಣ ಪಾವತಿಸಬಾರದು. ಆಗಸ್ಟ್ 16 ಅಥವಾ 17ರಂದು ಮನೆ ಯಜಮಾನಿ ಖಾತೆಗೆ ಹಣ ಬರುತ್ತದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇರುವುದಿಲ್ಲ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡಿತಾಯಿಯ ದರ್ಶನ ಪಡೆದ ಲಕ್ಷ್ಮೀ ಹೆಬ್ಬಾಳ್ಕರ್, ಗೃಹಲಕ್ಷ್ಮೀ ಯೋಜನೆ ಜಾರಿ ತಡವಾಗುತ್ತಿಲ್ಲ. ಅರ್ಜಿ ಸಲ್ಲಿಸಲು ಪ್ರತ್ಯೇಕ ಆ್ಯಪ್ ತಯಾರಾಗಿದೆ. ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಆ್ಯಪ್ ರಚಿಸಿದ್ದೇವೆ. ಗೃಹಲಕ್ಷ್ಮೀ ಯೋಜನೆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸುತ್ತೇವೆ. ಜೂನ್ 27ರಿಂದ ‘ಗೃಹಲಕ್ಷ್ಮೀ’ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುತ್ತದೆ ಎಂದು ತಿಳಿಸಿದ್ದಾರೆ.
ಹಾಗೇ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಹಣ ಪಾವತಿಸಬಾರದು. ಆಗಸ್ಟ್ 16 ಅಥವಾ 17ರಂದು ಮನೆ ಯಜಮಾನಿ ಖಾತೆಗೆ ಹಣ ಬರುತ್ತದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಇರುವುದಿಲ್ಲ. ಒಂದು ರೂಪಾಯಿ ಹಣವನ್ನು ಅರ್ಜಿ ಸಲ್ಲಿಕೆಗೆ ಕೊಡಬೇಡಿ. ಅರ್ಜಿ ಸಲ್ಲಿಸಿ ಸ್ವೀಕೃತಿ ಪತ್ರ ಸಿಕ್ಕರೆ ಅಲ್ಲಿಗೆ ನೀವು ಫಲಾನುಭವಿ ಪಟ್ಟಿಗೆ ಸೇರುತ್ತೀರ. ಇದರಲ್ಲಿ ಯಾವುದೇ ಗೊಂದಲಗಳು ಬೇಡ. ಗೃಹ ಲಕ್ಷ್ಮೀ ಯೋಜನೆ ಜಾರಿಗೆ ಹಣಕಾಸಿನ ತೊಂದರೆ ಇದೆ ಎಂಬುದರಲ್ಲಿ ಅರ್ಥವಿಲ್ಲ. ಎಲ್ಲಾ ರೀತಿಯ ಸಂಪನ್ಮೂಲ ನಮ್ಮ ಬಳಿ ಇದೆ ಎಂದು ಮೈಸೂರಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದರು.