ಗೃಹಲಕ್ಷ್ಮೀ ಯೋಜನೆಯ 59 ತಿಂಗಳ ಹಣವನ್ನು ನಾಡದೇವತೆ ಚಾಮುಂಡೇಶ್ವರಿಗೆ ಅರ್ಪಿಸಿದ ಲಕ್ಷ್ಮೀ ಹೆಬ್ಬಾಳ್ಕರ್‌

ಗೃಹಲಕ್ಷ್ಮೀ ಯೋಜನೆಯ 59 ತಿಂಗಳ ಹಣವನ್ನು ನಾಡದೇವತೆ ಚಾಮುಂಡೇಶ್ವರಿಗೆ ಅರ್ಪಿಸಿದ ಲಕ್ಷ್ಮೀ ಹೆಬ್ಬಾಳ್ಕರ್‌

ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆ ಯಶಸ್ಸಿನ ಹಾದಿಯಲ್ಲಿ ಸಾಗುತ್ತಿದೆ. ಇದೀಗ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿವಕುಮಾರ್‌ ಸೂಚನೆಯಂತೆ ಮಹಿಳಾ ಮತ್ತು ಮಕ್ಕಳ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಂಗಳಿಗೆ ಎರಡು ಸಾವಿರ ರೂಪಾಯಿಯಂತೆ 59 ತಿಂಗಳ ಹಣವನ್ನು ತಾಯಿ ಚಾಮುಂಡೇಶ್ವರಿ ದೇಗುಲಕ್ಕೆ ಅರ್ಪಣೆ ಮಾಡಿದ್ದಾರೆ.

ಇದನ್ನೂ ಓದಿ: ಅಯ್ಯಪ್ಪ ಭಕ್ತರಿಗೆ ಕೆಎಸ್ಆರ್‌ಟಿಸಿಯಿಂದ ಗುಡ್‌ನ್ಯೂಸ್ – ಶಬರಿಮಲೆಗೆ ವೋಲ್ವೋ ಬಸ್ ಸೇವೆ ಆರಂಭ

ಕೆಲವು ದಿನಗಳ ಹಿಂದೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಪತ್ರ ಬರೆದಿದ್ದರು. ಈ ಬಗ್ಗೆ ಕ್ರಮ ವಹಿಸುವಂತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಡಿ.ಕೆ.ಶಿವಕುಮಾರ್ ಸೂಚಿಸಿದ್ದರು. ಇದೀಗ ಪ್ರತಿ ತಿಂಗಳು ಯೋಜನೆಯ ಹಣ ನಾಡದೇವತೆಗೆ ತಲುಪಿಸಲು ವ್ಯವಸ್ಥೆ ಆಗಿದೆ. 59 ತಿಂಗಳ ಹಣವನ್ನು ತಾಯಿ ಚಾಮುಂಡೇಶ್ವರಿ ದೇಗುಲಕ್ಕೆ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಸಂದಾಯ ಮಾಡಿದ್ದಾರೆ.

ಗೃಹಲಕ್ಷ್ಮಿ ಯೋಜನೆ ಹಿನ್ನೆಲೆಯಲ್ಲಿ ನಾಡದೇವತೆ ತಾಯಿ ಚಾಮುಂಡೇಶ್ವರಿಗೆ ಪ್ರತಿ ತಿಂಗಳ 2 ಸಾವಿರ ರೂ.ನಂತೆ ಒಟ್ಟು 59 ತಿಂಗಳಿಗೆ 1,18,000 ರೂ. ಹಣವನ್ನು ಅರ್ಪಣೆ ಮಾಡಲಾಗಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೆಸರಿನಲ್ಲಿ ಹಣ ಸಂದಾಯ ಮಾಡಲಾಗಿದೆ. ತಮ್ಮ ವೈಯಕ್ತಿಕ ಹಣವನ್ನು ತಾಯಿ ಚಾಮುಂಡೇಶ್ವರಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಅರ್ಪಿಸಿದ್ದಾರೆ.

Shwetha M