ಫೆ 28ರಿಂದ ಮಾ.17ರ ವರೆಗೆ ದ್ವಿತೀಯ ಪಿಯುಸಿ – ಮಾ. 18 ರಿಂದ ಏ.2ಕ್ಕೆSSLC ಎಕ್ಸಾಂ

ಫೆ 28ರಿಂದ ಮಾ.17ರ ವರೆಗೆ ದ್ವಿತೀಯ ಪಿಯುಸಿ – ಮಾ. 18 ರಿಂದ ಏ.2ಕ್ಕೆSSLC ಎಕ್ಸಾಂ

ಇದೇ ಫೆಬ್ರವರಿ 28ರಿಂದ ಮಾರ್ಚ್‌ 17ರ ವರೆಗೆ ದ್ವಿತೀಯ ಪಿಯುಸಿ  ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು  ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಫೆ.28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಮಾ. 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1:15 ಗಂಟೆ ವರೆಗೆ ನಡೆಯಲಿದೆ ಎಂದು ತಿಳಿಸಿದರು.

ಮಾರ್ಚ್​ 18ರಿಂದ ಆರಂಭವಾಗಲಿರುವ ಎಸ್​​ಎಸ್​​ಎಲ್​ಸಿ ಪರೀಕ್ಷೆ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.15ರವರೆಗೆ ನಡೆಯಲಿವೆ. ಪರೀಕ್ಷೆಗೆ ನೋಂದಾಯಿಸಿಕೊಂಡ ವಿದ್ಯಾರ್ಥಿಗಳ ಸಂಖ್ಯೆ 9,02,889. ಹೊಸಬರು 8,12,855, ಪುನರಾವರ್ತಿತ 62,845 ವಿದ್ಯಾರ್ಥಿಗಳು. 27,189 ಖಾಸಗಿ ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು, ರಾಜ್ಯದಲ್ಲಿ ಎಸ್​ಎಸ್​ಎಲ್​ಸಿ ಒಟ್ಟು ಪರೀಕ್ಷಾ ಕೇಂದ್ರಗಳ ಸಂಖ್ಯೆ 2871.

ಇದನ್ನೂಓದಿ:  ರಣಜಿ ಟೂರ್ನಿಯಲ್ಲಿ ಕರ್ನಾಟಕ ತಂಡ ಹೊಸ ಇತಿಹಾಸ – ಒಂದೇ ಇನಿಂಗ್ಸ್‌ನಲ್ಲಿ 736 ರನ್ ಚಚ್ಚಿದ ಪಡಿಕ್ಕಲ್ ಪಡೆ

ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಪೈಕಿ 6,46,801 ಹೊಸಬರು, 50,540 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 13,022 ಖಾಸಗಿ ಅಭ್ಯರ್ಥಿಗಳು ಪಿಯು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಇನ್ನು ರಾಜ್ಯಾದ್ಯಂತ ಒಟ್ಟು 1217 ದ್ವಿತೀಯ ಪಿಯು ಪರೀಕ್ಷೆ ಕೇಂದ್ರಗಳನ್ನು ತೆರೆಯಲಾಗಿದ್ದು, ಏಪ್ರಿಲ್ 7ರಂದು ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದರು.

ಎಸ್​​ಎಸ್​​ಎಲ್​ಸಿ ಪರೀಕ್ಷಾ ವೇಳಾಪಟ್ಟಿ:

ಮೇ 18ರಿಂದ ಆರಂಭವಾಗಲಿರುವ ಎಸ್​ಎಲ್​ಎಲ್​ಸಿ ಪರೀಕ್ಷೆ-2; ಮೇ 18ರಂದು ಪ್ರಥಮ ಭಾಷೆ, ಮೇ 19ರಂದು ವಿಜ್ಞಾನ, ಮೇ 20ರಂದು ದ್ವೀತಿಯ ಭಾಷೆ, ಮೇ 21ರಂದು ಗಣಿತ, ಮೇ 22ರಂದು ತೃತೀಯ ಭಾಷೆ, ಮೇ 23ರಂದು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿದೆ.

Kishor KV

Leave a Reply

Your email address will not be published. Required fields are marked *