ಟಿಪ್ಪು ಸುಲ್ತಾನ್‌ ನಾಮಫಲಕಕ್ಕೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು – ರಸ್ತೆ ಸಂಚಾರ ಬಂದ್.. ಉದ್ವಿಗ್ನ ಸ್ಥಿತಿ!

ಟಿಪ್ಪು ಸುಲ್ತಾನ್‌ ನಾಮಫಲಕಕ್ಕೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು – ರಸ್ತೆ ಸಂಚಾರ ಬಂದ್.. ಉದ್ವಿಗ್ನ ಸ್ಥಿತಿ!

ಟಿಪ್ಪು ಸುಲ್ತಾನ್ ನಾಮಫಲಕಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ ಘಟನೆ ರಾಯಚೂರಿನ ಸಿರವಾರದಲ್ಲಿ ನಡೆದಿದೆ. ಇದರಿಂದಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಇದನ್ನೂ ಓದಿ:  ಡಬಲ್ ಡೆಕ್ಕರ್ ಬಸ್​, ಟ್ರಕ್​ ಮುಖಾಮುಖಿ ಡಿಕ್ಕಿ – 20 ಮಂದಿ ಸಜೀವ ದಹನ

ರಾಯಚೂರಿನ ಸಿರವಾರ ಪಟ್ಟಣದ ಮಟನ್ ಮಾರ್ಕೆಟ್ ಬಳಿ ಇರುವ ಟಿಪ್ಪು ಸರ್ಕಲ್​ನಲ್ಲಿನ ಭಾವಚಿತ್ರಕ್ಕೆ ಮಂಗಳವಾರ ರಾತ್ರಿ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ಪರಾರಿಯಾಗಿದ್ದಾರೆ. ಕಿಡಿಗೇಡಿಗಳು ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ರಾತ್ರಿ ವೇಳೆ ಚಪ್ಪಲಿ ಹಾರ ಹಾಕಿ ಸ್ಥಳದಿಂದ ಪರಾರಿಯಾಗಿದ್ದಾರೆ. ಇದನ್ನು ಬೆಳಗ್ಗೆ ನೋಡಿದ ಸಮುದಾಯದ ಮುಖಂಡರು ಆಕ್ರೋಶಗೊಂಡಿದ್ದರು. ಇದರಿಂದ ದೊಡ್ಡ ಪ್ರಮಾಣದಲ್ಲಿ ಸೇರಿರುವ ಸಮಾಜದವರು ಪ್ರತಿಭಟನೆ ಮಾಡುತ್ತಿದ್ದಾರೆ.

ಇದೀಗ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ಏರ್ಪಟ್ಟಿದೆ. ರಸ್ತೆ ಸಂಚಾರ ಬಂದ್ ಮಾಡಿ, ಟೈಯರ್​ಗೆ ಬೆಂಕಿ ಹಚ್ಚಿ ಮುಸ್ಲಿಂ ಸಮುದಾಯದವರು ಪ್ರತಿಭಟನೆ ನಡೆಸುತ್ತಿದ್ದಾರೆ. ಫೋಟೋಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಪ್ರತಿಭಟನಾಕಾರರು ಆಗ್ರಹಿಸುತ್ತಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮುಖಂಡರ ಜೊತೆ ಚರ್ಚೆ ಮಾಡಿ ಮನವೋಲಿಸಿದ್ದು ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವುದಾಗಿ ಹೇಳಿದ್ದಾರೆ. ಹೀಗಾಗಿ ಪ್ರತಿಭಟನೆ ಕೊಂಚ ಕಡಿಮೆಯಾಗಿದೆ.

Shwetha M