ಕೈ ತಪ್ಪಿದ ಸಚಿವ ಸ್ಥಾನ: ‘ಮುಂದಿನ ದಿನದಲ್ಲಿ ಕಾದು ನೋಡಿ’ – ಕಾಂಗ್ರೆಸ್‌ಗೆ ಸಲೀಂ ಅಹಮ್ಮದ್ ವಾರ್ನಿಂಗ್!
ಬೆಂಗಳೂರು: ಸಿದ್ದರಾಮಯ್ಯ ಅವರ ಕ್ಯಾಬಿನೆಟ್ ಗೆ 24 ಮಂದಿ ಮಂತ್ರಿಯಾಗಿ ಆಯ್ಕೆಯಾಗಿದ್ದು, ಶನಿವಾರ ಪ್ರತಿಜ್ಞಾವಿಧಿ ಸ್ವೀಕರಿಸಿದ್ದಾರೆ. ಸಚಿವ ಸ್ಥಾನ ಸಿಗದ ಶಾಸಕರು ಈಗ ಒಬ್ಬೊಬ್ಬರಾಗಿ ಅಸಮಧಾನ ಹೊರಹಾಕುತ್ತಿದ್ದಾರೆ. ಇತ್ತ ಕೆಪಿಸಿಸಿ ಕಾರ್ಯಧ್ಯಕ್ಷ ಸಲೀಂ ಅಹಮ್ಮದ್ ಅವರು ಸಚಿವ ಸ್ಥಾನ ಸಿಗದೆ ಇರೋದಿಕ್ಕೆ ಬೇಸರಗೊಂಡಿದ್ದು, ಮುಂದಿನ ದಿನಗಳಲ್ಲಿ ಏನಾಗುತ್ತದೆ ಎಂಬುವುದನ್ನು ಕಾದು ನೋಡಿ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಲೀಂ, ನನಗೂ ಸಚಿವ ಸ್ಥಾನ ಸಿಗಬಹುದು ಅನ್ನೋ ನಿರೀಕ್ಷೆಯಲ್ಲಿದ್ದೆ. ಪರಿಷತ್‌ನ ಮೂವರು ಸದಸ್ಯರಿಗೆ ಸಚಿವ ಸ್ಥಾನ ನೀಡುವ ಕುರಿತು ಚರ್ಚೆ ನಡೆದಿತ್ತು. ಆದರೆ ಯಾರನ್ನೂ ಸಚಿವಸ್ಥಾನಕ್ಕೆ ಪರಿಗಣಿಸಿಲ್ಲ. ಇದು ಬೇಸರ ತಂದಿದೆ. ಮುಂದಿನ ದಿನಗಳಲ್ಲಿ ಏನಾಗುತ್ತದೆ ಎಂದು ಕಾದು ನೋಡಿ ಎಂದು ಹೇಳಿದ್ದಾರೆ.
ಇದೇ ವೇಳೆ ಸಲೀಂ ಅವರು ಬಿಕೆ ಹರಿಪ್ರಸಾದ್ ರಾಜೀನಾಮೆ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಸಚಿವ ಸ್ಥಾನ ಸಿಗದ ಬಿಕೆ ಹರಿಪ್ರಸಾದ್ ಬೇಸರಗೊಂಡು ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ವಿಚಾರ ಮಾಧ್ಯಮಗಳಿಂದ ತಿಳಿಯಿತು. ಬಿಕೆ ಹರಿಪ್ರಸಾದ್ ನನಗೆ ಸಿಕ್ಕಿಲ್ಲ.ಅವರನ್ನು ಭೇಟಿಯಾಗಿ ಮಾತನಾಡುತ್ತೇನೆ ಎಂದು ಸಲೀಂ ಹೇಳಿದ್ದಾರೆ.