ಬಿಬಿಎಂಪಿ ಗುತ್ತಿಗೆದಾರರ ಜೊತೆ ಆರ್‌. ಅಶೋಕ್‌ ಚರ್ಚೆ – ರಾಜ್ಯ ಸರ್ಕಾರಕ್ಕೆ ಹನ್ನೊಂದು ಪ್ರಶ್ನೆಗಳನ್ನು ಮುಂದಿಟ್ಟ ಶಾಸಕ!

ಬಿಬಿಎಂಪಿ ಗುತ್ತಿಗೆದಾರರ ಜೊತೆ ಆರ್‌. ಅಶೋಕ್‌ ಚರ್ಚೆ – ರಾಜ್ಯ ಸರ್ಕಾರಕ್ಕೆ ಹನ್ನೊಂದು ಪ್ರಶ್ನೆಗಳನ್ನು ಮುಂದಿಟ್ಟ ಶಾಸಕ!

ಬೆಂಗಳೂರು: ಕಳೆದ ಬಾರಿ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ 40 % ಕಮಿಷನ್ ಆರೋಪ ರಾಜ್ಯ ರಾಜಕೀಯದಲ್ಲಿ ದೊಡ್ಡ ಕೋಲಾಹಲ ಎಬ್ಬಿಸಿತ್ತು.. ಇದೀಗ ಡಿಸಿಎಂ ಡಿಕೆಶಿ ವಿರುದ್ಧ ಗುತ್ತಿಗೆದಾರರು ಕಮಿಷನ್ ಬಾಂಬ್ ಸಿಡಿಸಿದ್ದು ಮತ್ತೊಂದು ಸಮರ ಶುರುವಾಗಿದೆ. ಪೂರ್ಣಗೊಂಡಿರುವ ಕಾಮಗಾರಿಗಳ ಬಾಕಿ ಬಿಲ್ ಬಿಡುಗಡೆ ಮಾಡಲು ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಪರವಾಗಿ ಬಿಬಿಎಂಪಿ ಅಧಿಕಾರಿಗಳು ಮತ್ತು ಮಧ್ಯವರ್ತಿಗಳು ಶೇಕಡಾ 15 ಪರ್ಸೆಂಟ್ ಕಮಿಷನ್ ಕೇಳುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದೀಗ ಶಾಸಕ ಆರ್‌. ಆಶೋಕ್‌ ಅವರು ರಾಜ್ಯ ಸರ್ಕಾರದ ಮುಂದೆ 11 ಪ್ರಶ್ನೆಗಳನ್ನು ಇಟ್ಟಿದ್ದಾರೆ.

ಇದನ್ನೂ ಓದಿ: ದೆಹಲಿಯ ರಾಜ್ಘಾಟ್, ಕೆಂಪು ಕೋಟೆಯಲ್ಲಿ ಸೆಕ್ಷನ್ 144 ಜಾರಿ!

ಸುದ್ದಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಮೇಲೆ 40% ಅಂತ ಸುಳ್ಳು, ನಿರಾಧಾರ ಆರೋಪ ಮಾಡಿ ಅಧಿಕಾರಕ್ಕೆ ಬಂದ್ದರಲ್ಲಾ, ಈಗ ನಿಮ್ಮ ಮೇಲೆ 15% ಕಮಿಷನ್ ಆರೋಪ ಮಾಡಿದ್ದಾರೆ. ಇದಕ್ಕೆ ನಿಮ್ಮ ಉತ್ತರ ಏನು ಎಂದು ಕಾಂಗ್ರೆಸ್ ಪಕ್ಷಕ್ಕೆ ಶಾಸಕ ಆರ್​​. ಅಶೋಕ್ ಪ್ರಶ್ನೆ ಮಾಡಿದ್ದಾರೆ. ಬಿಬಿಎಂಪಿ ಗುತ್ತಿಗೆದಾರ ಹಣ ಬಿಡುಗಡೆ ವಿಳಂಬ ಹಿನ್ನೆಲೆ ಇಂದು ಶಾಸಕ ಆರ್ ಅಶೋಕ್ ಕಛೇರಿಗೆ ಬಿಬಿಎಂಪಿ ಗುತ್ತಿಗೆದಾರರು ಭೇಟಿ ನೀಡಿ ಚರ್ಚಿಸಿದ್ದಾರೆ. ಇದೆ ವೇಳೆ ಶಾಸಕ ಆರ್​​. ಅಶೋಕ್  ಅವರು ರಾಜ್ಯ ಸರ್ಕಾರದ ಮುಂದೆ ಸುಮಾರು 11 ಪ್ರಶ್ನೆಗಳನ್ನು ಇಟ್ಟಿದ್ದಾರೆ.

ರಾಜ್ಯ ಸರ್ಕಾರಕ್ಕೆ ಶಾಸಕ ಆರ್​​. ಅಶೋಕ್ ಪ್ರಶ್ನೆಗಳು ಹೀಗಿವೆ..

  • ನಮ್ಮ ಮೇಲೆ 40% ಅಂತ ಸುಳ್ಳು ಆರೋಪ ಮಾಡಿ ಅಧಿಕಾರಕ್ಕೆ ಬಂದಿದ್ದೀರಿ, ಈಗ ನಿಮ್ಮ ಮೇಲೆ 15% ಕಮಿಷನ್ ಆರೋಪ ಮಾಡಿದ್ದಾರೆ. ಇದಕ್ಕೆ ನಿಮ್ಮ ಉತ್ತರವೇನು?
  • ನೀವು ಕಮಿಷನ್ ಕೇಳಿಲ್ಲ ಎಂದು ಹೇಳುತ್ತೀರಿ. ಗುತ್ತಿಗೆದಾರರು ಅಜ್ಜಯ್ಯನ ದೇವಸ್ಥಾನಕ್ಕೆ ಹೋಗಿ ಆಣೆ ಮಾಡಿ ಹೇಳಿ ಎಂದು ಹೇಳುತ್ತಾರೆ. ಈ ಸವಾಲನ್ನು ಯಾಕೆ ಒಪ್ಪಿಕೊಂಡಿಲ್ಲ?
  • ಕಮಿಷನ್ ದಂಧೆ ಶುರು ಮಾಡಿರೋದು ಲೋಕಸಭೆ ಚುನಾವಣೆಗೆ ಫಂಡ್‌ ಸಂಗ್ರಹಕ್ಕಾಗಿಯೇ?
  • ಗುತ್ತಿಗೆದಾರರ ಹಿತಾಸಕ್ತಿ ಕಾಪಾಡುವುದಾಗಿ ವಾಗ್ದಾನ ಮಾಡಿ ಅಧಿಕಾರ ಹಿಡಿದ ನೀವು, ಈಗ ಅವರನ್ನು ಕಡೆಗಣಿಸುತ್ತಿರುವುದು ಎಷ್ಟು ಸರಿ?
  • ಬಿಬಿಎಂಪಿಯಲ್ಲಿ 2019-2023 ರವರೆಗೆ ನಡೆದಿರುವ ಕಾಮಗಾರಿಗಳನ್ನು ಮಾತ್ರ ತನಿಖೆ ಮಾಡ್ತಿದ್ದೀರಿ, ನೀವು ಪ್ರಾಮಾಣಿಕರಾಗಿದ್ದರೆ 2013 ರಿಂದಲೂ ತನಿಖೆ ಮಾಡಬಹುದಲ್ಲಾ?
  • ಗುತ್ತಿಗೆದಾರರೆಲ್ಲರೂ ಕಳ್ಳರಾದರೆ, 50 ವರ್ಷ ರಾಜ್ಯವಾಳಿದ ಕಾಂಗ್ರೆಸ್ ಬಳುವಳಿಗರ ಇವರು?
  • ಗುತ್ತಿಗೆದಾರರು ಕಾಮಗಾರಿ ಸ್ಥಗಿತಗೊಳಿಸಿದರೆ ನಿಮ್ಮ ಬ್ರಾಂಡ್ ಬೆಂಗಳೂರಿನ ಕಥೆ ಏನು?
  • 300 ಜನ ಗುತ್ತಿಗೆದಾರರು ದಯಾ ಮರಣಕ್ಕೆ ಬೇಡಿಕೆ ಇಟ್ಟಿದ್ದಾರೆ, ಇದಕ್ಕೆ ಕಾಂಗ್ರೆಸ್‌ ಉತ್ತರವೇನು?
  • ದೆಹಲಿಯಲ್ಲಿ ಮಂತ್ರಿಗಳ ಕರೆಸಿ ಸಭೆ ಮಾಡಿದ್ದು ಲೋಕಸಭಾ ಸೀಟ್ ಗೆಲ್ಲಿಸುವುದಕ್ಕೋ ಅಥವಾ ಸೂಟ್‌ಕೇಸ್ ತುಂಬಿಸುವುದಕ್ಕೋ?
  • ಮಾನ್ಯ ಡಿ.ಕೆ. ಶಿವಕುಮಾರ್ ಅವರೇ ನಿಮ್ಮದು ಬ್ರಾಂಡ್ ಬೆಂಗಳೂರೋ ಅಥವಾ ಬ್ಲಾಕ್ ಬೆಂಗಳೂರೋ?
  • ಸಿಎಂ ಹಣ ಬಿಡುಗಡೆ ಮಾಡಿದ್ರೆ, ಡಿಸಿಎಂ ತಡೆ ಹಿಡಿದಿದ್ದಾರೆ. ಹಾಗಾದ್ರೆ ಹಣ ಬಿಡುಗಡೆ ಮಾಡಲು ಮುಖ್ಯಮಂತ್ರಿಗೆ ವೇಣುಗೋಪಾಲ್ ಸೂಚನೆ ನೀಡಿದರೆ, ಸುರ್ಜೆವಾಲ ತಡೆ ನೀಡಲು ಸೂಚನೆ ನೀಡಿದ್ರಾ? ಎಂದು ಸರಣಿ ಪ್ರಶ್ನೆಗಳನ್ನು ಆರ್​. ಅಶೋಕ್​ ರಾಜ್ಯ ಸರ್ಕಾರದ ಮುಂದಿಟ್ಟಿದ್ದಾರೆ.

ಕರ್ನಾಟಕವನ್ನು ಎಟಿಎಂ ರೀತಿ ಬಳಸಿಕೊಳ್ಳುತ್ತಿದ್ದಾರೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮಾಡಿದ ಶಾಸಕ ಆರ್​.ಅಶೋಕ್​ ಕಾಂಗ್ರೆಸ್​ನವರು ನಾವು ಒಂದು ರೂಪಾಯಿನೂ ತಿಂದಿಲ್ಲ ಎನ್ನುತ್ತಾರೆ. 2 ತಿಂಗಳಿಂದ ಯಾವುದೇ ಯೋಜನೆಗೆ ಅನುಮೋದನೆ ನೀಡಿಲ್ಲ. ಬೆಂಗಳೂರು ಉಸ್ತುವಾರಿ ಸಚಿವರು 26 ಕಂಡಿಷನ್ ಹಾಕಿದ್ದಾರೆ. ಗಮನಕ್ಕೆ ತರದೆ ವರ್ಗಾವಣೆ ಮಾಡುವಂತಿಲ್ಲ ಎಂದು ಡಿಕೆ ಶಿವಕುಮಾರ್​ ಹೇಳಿದ್ದಾರೆ ಎಂದು ಹೇಳಿದ್ದಾರೆ.

suddiyaana