ಸಚಿವರ ವಿರುದ್ಧ ಸಿದ್ದರಾಮಯ್ಯಗೆ ಶಾಸಕರ ದೂರು – ಕಾಂಗ್ರೆಸ್ ನಾಯಕರಲ್ಲೇ ಭುಗಿಲೆದ್ದ ಅಸಮಾಧಾನ

ಸಚಿವರ ವಿರುದ್ಧ ಸಿದ್ದರಾಮಯ್ಯಗೆ ಶಾಸಕರ ದೂರು – ಕಾಂಗ್ರೆಸ್ ನಾಯಕರಲ್ಲೇ ಭುಗಿಲೆದ್ದ ಅಸಮಾಧಾನ

ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಜಯ ಸಾಧಿಸಿ ಕರ್ನಾಟಕದಲ್ಲಿ ಸರ್ಕಾರ ರಚನೆ ಮಾಡಿದ್ರೂ ಕೂಡ ಕಾಂಗ್ರೆಸ್ ಗೆ ತಾಪತ್ರಯ ತಪ್ಪಿಲ್ಲ. ಸರ್ಕಾರ ರಚನೆಯಾಗಿ 2 ತಿಂಗಳಲ್ಲೇ ಒಂದಿಲ್ಲೊಂದು ಸವಾಲುಗಳು ಎದುರಾಗುತ್ತಲೇ ಇವೆ. ಸಿಎಂ ಮಾಡೋದು ಗೊತ್ತು, ಇಳಿಸೋದು ಗೊತ್ತು ಎಂದು ಎಂಎಲ್ ಸಿ ಬಿ.ಕೆ ಹರಿಪ್ರಸಾದ್ ಹೇಳಿಕೆ ಬೆನ್ನಲ್ಲೇ ಇದೀಗ ಪಕ್ಷದೊಳಗೆ ಅಸಮಾಧಾನ ಸ್ಫೋಟಗೊಂಡಿದೆ.

ಇದನ್ನೂ ಓದಿ : ಬಂಡಾಯ ನಾಯಕರಿಗೆ ಬಿಜೆಪಿ ರೆಡ್ ಕಾರ್ಪೆಟ್ – ಮಹಾರಾಷ್ಟ್ರದ ಸಿಎಂ ಪಟ್ಟಕ್ಕೇರುತ್ತಾರಾ ಅಜಿತ್ ಪವಾರ್?!

ಕಾಂಗ್ರೆಸ್ ಶಾಸಕರು ಹಾಗೂ ಸಚಿವರ ನಡುವಿನ ಮುಸುಕಿನ ಗುದ್ದಾಟ ಬಹಿರಂಗವಾಗಿದೆ. ಈಗಾಗಲೇ ಸಚಿವರ ವಿರುದ್ಧ 30ಕ್ಕೂ ಹೆಚ್ಚು ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ದೂರು ನೀಡಿದ್ದಾರೆ. ಕಳೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಸಮಾಧಾನ ಸ್ಫೋಟಗೊಂಡಿತ್ತು. ಆದರೆ ಬಂಡಾಯವೆದ್ದ ಶಾಸಕರನ್ನು ಸಮಾಧಾನ ಮಾಡಲಾಗಿತ್ತು. ಮತ್ತೆ ಇದೀಗ ಅಸಮಾಧಾನ ಸ್ಫೋಟಗೊಂಡಿದೆ. ಒಂದೆಡೆ ಸಿದ್ದರಾಮಯ್ಯ ಸರ್ಕಾರವನ್ನು ಪತನಗೊಳಿಸಲು ಹುನ್ನಾರ ನಡೆಯುತ್ತಿದೆ ಅನ್ನೋ ಆರೋಪಗಳು ಕೇಳಿಬರುತ್ತಿರುವ ಬೆನ್ನಲ್ಲೇ ಈ ಅಸಮಧಾನ ಸರ್ಕಾರದ ಬುಡವನ್ನೇ ಅಲುಗಾಡಿಸುತ್ತಿದೆ.

ಈಗಾಗಲೇ ಅಸಮಾಧಾಗೊಂಡಿರುವ ಶಾಸಕರು ಬಸವರಾಜ ರಾಯರೆಡ್ಡಿ ನೇತೃತ್ವದಲ್ಲಿ ಸಿದ್ದರಾಮಯ್ಯಗೆ ದೂರು ನೀಡಲಾಗಿದೆ. ಕೆಲ ಸಚಿವರ ದುರಂಹಕಾರ ಮೀತಿ ಮೀರಿದೆ. ತಮ್ಮ ಕೆಲಸಗಳನ್ನು ಮಾಡಿಕೊಡುತ್ತಿಲ್ಲ. ಕ್ಷೇತ್ರದ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಮನವಿಗಳನ್ನು ಆಲಿಸುತ್ತಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ದೂರಿನ ಬೆನ್ನಲ್ಲೇ ಸಿದ್ದರಾಮಯ್ಯ ಅಲರ್ಟ್ ಆಗಿದ್ದು ತುರ್ತು ಶಾಸಕಾಂಗ ಸಭೆ ಕರೆದಿದ್ದಾರೆ. ಸಚಿವರು ಹಿರಿಯ ಶಾಸಕರಿಗೆ ಸ್ಪಂದಿಸುತ್ತಿಲ್ಲ. ಶಾಸಕರ ವರ್ಗಾವಣೆ ಪತ್ರಗಳಿಗೆ ಸಚಿವರು ಮನ್ನಣೆ ನೀಡುತ್ತಿಲ್ಲ. ಕೆಲ ಅಧಿಕಾರಿ ಬಳಿಯೇ ಹಣ ಕೇಳುತ್ತಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದಾರೆ. ಸರ್ಕಾರವನ್ನು ಕೆಡವುವ ಪ್ರಯತ್ನಗಳು ನಡೆಯುತ್ತಿವೆ ಎಂಬ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ ಬೆನ್ನಲ್ಲೇ ಇದೀಗ ಸರ್ಕಾರದ ವಿರುದ್ಧ ಶಾಸಕರು ತಿರುಗಿ ಬಿದ್ದಿರುವುದು ಸಿಎಂ ಸಿದ್ದರಾಮಯ್ಯಗೆ ತಲೆನೋವು ಹೆಚ್ಚಿಸಿದೆ. ದೂರಿನಲ್ಲಿ 30ಕ್ಕೂ ಹೆಚ್ಚು ಶಾಸಕರು ಸಹಿ ಹಾಕಿದ್ದಾರೆ.

ಶಾಸಕರ ವರ್ಗಾವಣೆ ಶಿಫಾರಸ್ಸು ಪತ್ರಗಳಿಗೆ ಮಾನ್ಯತೆ ನೀಡುತ್ತಿಲ್ಲ. ಕೆಲ ಕೆಲ ಸಚಿವರು ವರ್ಗಾವಣೆಗೆ ಹಣ ಕೇಳಿದ್ದಾರೆ ಎಂದು ದೂರಿನಲ್ಲಿ ಆರೋಪ ಮಾಡಿದ್ದಾರೆ. ಸಂಬಂಧಿಯೊಬ್ಬರ ವರ್ಗಾವಣೆಗೆ ಶಿಫಾರಸ್ಸು ಪತ್ರವನ್ನು ಹಿರಿಯ ಶಾಸಕರು ಸಚಿವರಿಗೆ ನೀಡಿದ್ದರು. ಶಿಫಾರಸು ಪತ್ರ ಹಿಡಿದು ವರ್ಗಾವಣೆಗೆಂದು ಸಚಿವರನ್ನು ಭೇಟಿ ಮಾಡಿದ್ದ ಅಧಿಕಾರಿ ಬಳಿಯೇ ಸಚಿವರ ಸಹೋದರ ಹಣ ಕೇಳಿದ್ದಾರೆ ಎಂದು ದೂರಿನಲ್ಲಿ ಆರೋಪ ಮಾಡಿದ್ದಾರೆ.  ಕೂಡಲೆ ಸಚಿವರಿಗೆ ಸೂಚನೆ ನೀಡಬೇಕು ಎಂದು ಆಗ್ರಹಿಸಿ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದಾರೆ.

suddiyaana