ಪ್ರವಾಹ ಪರಿಸ್ಥಿತಿ ಅವಲೋಕಿಸಲು ಬಂದ ಶಾಸಕರು – ಆಕ್ರೋಶಗೊಂಡ ಮಹಿಳೆಯಿಂದ ಶಾಸಕರಿಗೆ ಕಪಾಳಮೋಕ್ಷ..!
ಹರಿಯಾಣದಲ್ಲಿ ನಿರಂತರ ಮಳೆಯಿಂದ ಉಂಟಾಗಿರುವ ಪ್ರವಾಹದಿಂದಾಗಿ ಈಗಾಗಲೇ 10 ಜನರು ಸಾವನ್ನಪ್ಪಿದ್ದಾರೆ. ಭಾರಿ ಮಳೆಯಿಂದಾಗಿ ಘಗ್ಗರ್ ನದಿಯು ಉಕ್ಕಿ ಹರಿಯುತ್ತಿದೆ. ಇದರಿಂದಾಗಿ ಭಾಟಿಯಾ ಗ್ರಾಮದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಪರಿಸ್ಥಿತಿ ಅವಲೋಕನ ಮಾಡಲು ಶಾಸಕರೊಬ್ಬರು ಸ್ಥಳಕ್ಕೆ ಹೋದರೆ ಅಲ್ಲಿ ಕಪಾಳಮೋಕ್ಷ ಮಾಡಿಸಿಕೊಂಡಿರುವ ಪ್ರಸಂಗವೂ ನಡೆದಿದೆ.
ಇದನ್ನೂ ಓದಿ:ಮುಂದುವರಿದ ಮಳೆಯ ಅಬ್ಬರ – ದೆಹಲಿಯಲ್ಲಿ ಯಮುನಾ ನದಿ ಮಟ್ಟ ಮತ್ತಷ್ಟು ಏರಿಕೆ
ಜನನಾಯಕ್ ಜನತಾ ಪಕ್ಷದ ಶಾಸಕ ಈಶ್ವರ್ ಸಿಂಗ್ ಅವರಿಗೆ ಮಹಿಳೆಯೊಬ್ಬಳು ಕಪಾಳಮೋಕ್ಷ ಮಾಡಿರುವ ಘಟನೆ ಹರಿಯಾಣದಲ್ಲಿ ನಡೆದಿದೆ. ಮಳೆಯಿಂದ ಪ್ರವಾಹ ಉಂಟಾಗಿದ್ದ ಭಾಟಿಯಾ ಗ್ರಾಮಕ್ಕೆ ಶಾಸಕರು ತೆರಳಿದ್ದರು. ಕಳಪೆ ಒಳಚರಂಡಿ ವ್ಯವಸ್ಥೆಯಿಂದಾಗಿಯೇ ಈ ಪ್ರವಾಹ ಸೃಷ್ಟಿಯಾಗಿದೆ. ಅಲ್ಲದೇ ಶಾಸಕರ ಭೇಟಿ ತಡವಾಗಿದೆ ಎಂದು ಜನ ಆಕ್ರೋಶಗೊಂಡಿದ್ದಾರೆ. ಇದೇ ವೇಳೆ ಮಹಿಳೆಯೊಬ್ಬಳು ಶಾಸಕರು ಎಂದು ನೋಡದೇ ಸಿಟ್ಟಿನಲ್ಲಿ ಕಪಾಳ ಮೋಕ್ಷ ಮಾಡಿದ್ದಾಳೆ. ಇದಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ, ಮಹಿಳೆಯನ್ನು ಕ್ಷಮಿಸಿದ್ದೇನೆ. ಮಹಿಳೆಯ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
#WATCH | Haryana: In a viral video, a flood victim can be seen slapping JJP (Jannayak Janta Party) MLA Ishwar Singh in Guhla as he visited the flood affected areas
“Why have you come now?”, asks the flood victim pic.twitter.com/NVQmdjYFb0
— ANI (@ANI) July 12, 2023
ಹರಿಯಾಣದಲ್ಲಿ ನಿರಂತರ ಮಳೆಯಿಂದ ಉಂಟಾಗಿರುವ ಪ್ರವಾಹದಿಂದಾಗಿ 10 ಜನರು ಸಾವನ್ನಪ್ಪಿದ್ದಾರೆ. ಪ್ರವಾಹದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಪರಿಹಾರವನ್ನು ಘೋಷಿಸಲಾಗಿದೆ. ಆದರೆ ಸಾವು ನೋವುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಮಳೆ ಪೀಡಿತ ಪ್ರದೇಶಗಳಲ್ಲಿ ಖಟ್ಟರ್ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಕಳೆದ ನಾಲ್ಕು ದಿನಗಳಿಂದ ಹರಿಯಾಣ, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಪಂಜಾಬ್ನಲ್ಲಿ ನಿರಂತರ ಮಳೆಯ ಪರಿಣಾಮ ಹರಿಯಾಣದಲ್ಲಿನ ಪ್ರವಾಹಕ್ಕೆ ಕಾರಣವಾಗಿದೆ ಎಂದಿದ್ದಾರೆ.