‘ಲೋಕಸಭೆ ಚುನಾವಣೆಗೆ ತಮಿಳುನಾಡಿನಿಂದ ಮೋದಿ ಸ್ಪರ್ಧಿಸಬೇಕು’- ಅಣ್ಣಾಮಲೈ ಆಗ್ರಹ

‘ಲೋಕಸಭೆ ಚುನಾವಣೆಗೆ ತಮಿಳುನಾಡಿನಿಂದ ಮೋದಿ ಸ್ಪರ್ಧಿಸಬೇಕು’- ಅಣ್ಣಾಮಲೈ ಆಗ್ರಹ

2024ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡಿನಿಂದ ಸ್ಪರ್ಧಿಸುತ್ತಾರೆ ಅನ್ನೋ ಚರ್ಚೆ ಜೋರಾಗಿಯೇ ಸಾಗುತ್ತಿದೆ. ಹೀಗಿರುವಾಗಲೇ ತಮಿಳುನಾಡಿನ ರಾಜ್ಯ ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ, ಮುಂದಿನ ಚುನಾವಣೆಯಲ್ಲಿ ಮೋದಿ ತಮಿಳುನಾಡಿನಿಂದ ಸ್ಪರ್ಧೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಈ ವಿಚಾರದ ಬಗ್ಗೆ ಮಾತನಾಡಿದ ಅಣ್ಣಾಮಲೈ, ಪ್ರಧಾನಿ ಮೋದಿ ಬಗ್ಗೆ ತಮಿಳುನಾಡಿನಲ್ಲಿ ಅಲೆ ಎದ್ದಿದೆ. ಮೋದಿ ಈಗ  ಪ್ರಾದೇಶಿಕ ತಡೆಗೋಡೆಗಳನ್ನು ಮೀರಿದ್ದಾರೆ. ದಕ್ಷಿಣದ ರಾಜ್ಯದಲ್ಲಿ ಒಳಗಿನವರು ಮತ್ತು ಹೊರಗಿನವರು ಎಂದು ಪರಿಗಣಿಸಲ್ಪಡುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ:  ವಿದ್ಯಾರ್ಥಿಗಳ ಜೊತೆ ಪರೀಕ್ಷಾ ಪೆ ಚರ್ಚಾ – ವಿದ್ಯಾರ್ಥಿಗಳಿಗೆ ಪ್ರಧಾನಿ ಮೋದಿ ಸಲಹೆಗಳೇನು..?

2014ರ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ವಾರಣಾಸಿ ಮತ್ತು ಗುಜರಾತ್‌ನ ವಡೋದರ ಕ್ಷೇತ್ರಗಳಿಂದ ಸ್ಪರ್ಧಿಸಿದ್ದರು. ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರು. ಕೊನೆಗೆ ವಡೋದರಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿ ವಾರಣಾಸಿಯನ್ನು ಪ್ರತಿನಿಧಿಸಿದರು. 2019 ರಲ್ಲಿ ವಾರಣಾಸಿಯಿಂದ ಮರು ಆಯ್ಕೆಯಾಗಿದ್ದರು. ಹೀಗಾಗಿ ಈ ಬಾರಿ ತಮಿಳುನಾಡಿನಿಂದ ಮೋದಿ ಸ್ಪರ್ಧೆ ಮಾಡುತ್ತಾರೆ ಎಂಬ ವಿಚಾರ ಚರ್ಚೆಯಾಗುತ್ತಿದೆ.

suddiyaana