ಮೋದಿಯಿಂದ ಪಂಚ ರಾಷ್ಟ್ರಗಳ ಪ್ರವಾಸ – ಬ್ರೆಜಿಲ್‌ನಲ್ಲಿ ನಡೆಯೋ 17ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗಿ

ಮೋದಿಯಿಂದ ಪಂಚ ರಾಷ್ಟ್ರಗಳ ಪ್ರವಾಸ – ಬ್ರೆಜಿಲ್‌ನಲ್ಲಿ ನಡೆಯೋ 17ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗಿ

ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಘಾನಾ ಸೇರಿ ಐದು ರಾಷ್ಟ್ರಗಳಿಗೆ ಪ್ರವಾಸ ಕೈಗೊಂಡಿದ್ದು, ಮೊದಲು ಘಾನಾ ದೇಶಕ್ಕೆ ಭೇಟಿ ನೀಡಿದ್ದಾರೆ. ಇಂದು ಮತ್ತು ನಾಳೆ  ಘಾನಾದ ರಾಷ್ಟ್ರಪತಿ ಜಾನ್ ಡ್ರಮಾನಿ ಮಹಾಮಾರೊಡನೆ ಮಾತುಕತೆ ನಡೆಸಲಿದ್ದಾರೆ. ಲಸಿಕೆ ಉತ್ಪಾದನಾ ಕೇಂದ್ರ ಸ್ಥಾಪನೆ, ಆರ್ಥಿಕ ಸಹಕಾರ,  ಡಿಜಿಟಲ್ ತಂತ್ರಜ್ಞಾನ ಮತ್ತು ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ವೃದ್ಧಿಗೊಳಿಸುವುದು ಈ ಭೇಟಿಯ ಮುಖ್ಯ ಗುರಿಯಾಗಿದೆ. ಘನಾಕ್ಕೆ ಕಳೆದ 30 ವರ್ಷಗಳಲ್ಲಿ ಭಾರತದ ಪ್ರಧಾನಿಯ ಮೊದಲ ಭೇಟಿ ಇದಾಗಿದೆ.

ಮೋದಿ ಘಾನಾ ಜೊತೆಗೆ ಟ್ರಿನಿಡಾಡ್ ಮತ್ತು ಟೊಬಾಗೊ,ಅರ್ಜೆಂಟೀನಾ, ಬ್ರೆಜಿಲ್, ನಮೀಬಿಯಾಗೂ ಭೇಟಿ ನೀಡಲಿದ್ದಾರೆ.  ಘಾನಾಗೆ ಹೊರಡುವ ಮುನ್ನ ಮೋದಿ ಹೇಳಿಕೆ ಬಿಡುಗಡೆ ಮಾಡಿದ್ದು, ಘಾನಾ, ಟ್ರಿನಿಡಾಡ್ ಮತ್ತು ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾಗೆ ಭೇಟಿ ನೀಡಲಿದ್ದು, ಇದು ಜುಲೈ 6 ಮತ್ತು 7 ರಂದು ರಿಯೊ ಡಿ ಜನೈರೊದಲ್ಲಿ ನಡೆಯುವ ಬ್ರಿಕ್ಸ್ ಶೃಂಗಸಭೆಯಲ್ಲಿ ಮುಕ್ತಾಯಗೊಳ್ಳಲಿದೆ. ಜುಲೈ 3-4ರಂದು ಮೋದಿ ಟ್ರಿನಿಡಾಡ್ ಮತ್ತು ಟೊಬಾಗೊ ದೇಶಕ್ಕೆ ಭೇಟಿ ನೀಡಲಿದ್ದೇನೆ ಎಂದು ಮೋದಿ ಹೇಳಿದ್ದಾರೆ. 1999ರ ನಂತರ ಭಾರತದ ಪ್ರಧಾನಿಯ ಮೊದಲ ಭೇಟಿ ಇದಾಗಿದೆ. ಜುಲೈ 4-5ರಂದು, ಅರ್ಜೆಂಟೀನಾಕ್ಕೆ ಭೇಟಿ ನೀಡಿ ರಾಷ್ಟ್ರಪತಿ ಜೇವಿಯರ್ ಮಿಲೇ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದೇನೆ ಎಂದಿದ್ದಾರೆ.

ಜುಲೈ 5-8 ರಂದು  ಬ್ರೆಜಿಲ್‌ಗೆ ಭೇಟಿ ನೀಡಿ 17ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದೇನೆ. ನಮೀಬಿಯಾಕ್ಕೆ ಜುಲೈ 9 ರಂದು  ಭೇಟಿ ನೀಡಲಿದ್ದೇನೆ ಎಂದು ತಿಳಿಸಿದ್ದಾರೆ. ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಶೃಂಗಸಭೆಯಲ್ಲಿ ಭಾಗವಹಿಸದಿದ್ದರೂ, ಮೋದಿಯ ಉಪಸ್ಥಿತಿಯು ಬ್ರಿಕ್ಸ್ ವೇದಿಕೆಗೆ ಭಾರತದ ನಿರಂತರ ಬದ್ಧತೆಯನ್ನು ಸೂಚಿಸುತ್ತದೆ.

 

Kishor KV