ಕಾಂಗ್ರೆಸ್ ಬಜರಂಗಬಲಿಯನ್ನು ಬಂಧಿಸಿಡಲು ಮುಂದಾಗಿದೆ – ‘ಕೈ’ ಪ್ರಣಾಳಿಕೆ ವಿರುದ್ಧ ಮೋದಿ ವಾಗ್ದಾಳಿ

ಕಾಂಗ್ರೆಸ್ ಬಜರಂಗಬಲಿಯನ್ನು ಬಂಧಿಸಿಡಲು ಮುಂದಾಗಿದೆ – ‘ಕೈ’ ಪ್ರಣಾಳಿಕೆ ವಿರುದ್ಧ ಮೋದಿ ವಾಗ್ದಾಳಿ

ಕಾಂಗ್ರೆಸ್ ಈ ಹಿಂದೆ ಶ್ರೀರಾಮಚಂದ್ರನನ್ನು ಬಂಧಿಸಿಟ್ಟಿತು. ಇದೀಗ ಹನುಮಾನ್ ಜನ್ಮಸ್ಥಳದಲ್ಲೇ ಬಜರಂಗಬಲಿಯನ್ನು ಬಂಧಿಸಿಡಲು ಮುಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಪ್ರಣಾಳಿಕೆ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ರಾಜ್ಯದಲ್ಲಿ ಬಜರಂಗದಳ ನಿಷೇಧಿಸುವುದಾಗಿ ಘೋಷಿಸಿದೆ. ಇದರ ವಿರುದ್ಧ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ:  ಶಿವಣ್ಣನನ್ನು ಪ್ರೀತಿಯಿಂದ ತಬ್ಬಿಕೊಂಡ ರಾಹುಲ್ ಗಾಂಧಿ – ನಾನು ಅಭಿಮಾನಿಯಾಗಿ ಬಂದಿದ್ದೇನೆ ಎಂದ ಶಿವರಾಜ್ ಕುಮಾರ್

ವಿಜಯನಗರದಲ್ಲಿ ಆಯೋಜಿಸಿದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಮೋದಿ, ಹನುಮಾನ್ ಜನ್ಮಸ್ಥಾನಕ್ಕೆ ಬಂದಿದ್ದೇನೆ. ನಾನು ಹನುಮಂತನಿಗೆ ಶತ ಪ್ರಣಾಮ ಮಾಡುತ್ತಿದ್ದೇನೆ. ಆದರೆ ಇದೇ ಸಮಯದಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗಬಲಿ ಅಂದರೆ ಹನುಮಂತನನ್ನ ಬೀಗ ಹಾಕಿ ಬಂಧಿಸಲು ಹೊರಟಿದ್ದಾರೆ. ಈ ಹಿಂದೆ ಕಾಂಗ್ರೆಸ್ ಶ್ರೀರಾಮಚಂದ್ರನನ್ನು ಬಂಧಿಸಿಟ್ಟಿದ್ದರು. ಅವರಿಗೆ ಈ ಹಿಂದೆ ಶ್ರೀರಾಮನನ್ನು ಕಂಡರೆ ಆಗುತ್ತಿಲ್ಲ. ಇದೀಗ ಹನುಮಂತನನ್ನು ಕಂಡರೂ ಆಗುತ್ತಿಲ್ಲ. ನಮಗೆ ಶ್ರೀರಾಮ ಚಂದ್ರ ಹಾಗೂ ಹನುಮಂತ ಪೂಜ್ಯ. ಇಡೀ ದೇಶದಲ್ಲಿ ಕರ್ನಾಟಕವನ್ನು ನಂಬರ್ 1 ರಾಜ್ಯವನ್ನಾಗಿ ಮಾಡಲು ನಾವು ಸಂಕಲ್ಪ ಬದ್ಧರಾಗಿದ್ದೇವೆ. ನಮ್ಮ ಈ ಸಂಕಲ್ಪಕ್ಕೆ ಹನುಮಂತನ ಆಶೀರ್ವಾದ ಕೇಳಲು ನಾನು ಇಲ್ಲಿಗೆ ಬಂದಿದ್ದೇನೆ ಎಂದು ಮೋದಿ ಹೇಳಿದ್ದಾರೆ.

suddiyaana