ಕರ್ನಾಟಕದ ಮೇಲೆ ಕಣ್ಣಿಟ್ಟ ಮೋದಿ – ಬಿಎಸ್​ವೈ ಜೊತೆ ಗುಟ್ಟಾಗಿ ಮಾತನಾಡಿದ್ದೇನು..?

ಕರ್ನಾಟಕದ ಮೇಲೆ ಕಣ್ಣಿಟ್ಟ ಮೋದಿ – ಬಿಎಸ್​ವೈ ಜೊತೆ ಗುಟ್ಟಾಗಿ ಮಾತನಾಡಿದ್ದೇನು..?

ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಈ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ನಡುವೆ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯುತ್ತಿದ್ದು, ಪ್ರಧಾನಿ ಮೋದಿ ಕರ್ನಾಟಕದ ಮೇಲೆ ಹೆಚ್ಚು ಒಲವು ಹೊಂದಿರುವುದು ಕುತೂಹಲ ಮೂಡಿಸಿದೆ.

ಇದನ್ನೂ ಓದಿ:ತೊಗರಿ ಬೆಳೆಗಾರರ ಕಿಚ್ಚಿಗೆ ಕಲಬುರಗಿ ಬಂದ್ – ಮೋದಿಗೂ ತಟ್ಟುತ್ತಾ ಎಫೆಕ್ಟ್..?

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ದೇಶದ ಹಲವು ಬಿಜೆಪಿ ಹಿರಿಯ ನಾಯಕರು ಭಾಗಿಯಾಗಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದ ಬಿಜೆಪಿ ಹಿರಿಯ ನಾಯಕ ಬಿ.ಎಸ್ ಯಡಿಯೂರಪ್ಪ ಜೊತೆ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ. 15 ನಿಮಿಷಗಳ ಕಾಲ ಪ್ರತ್ಯೇಕವಾಗಿ ಚರ್ಚೆ ನಡೆಸಿರೋದು ಹಲವು ಚರ್ಚೆಗಳಿಗೆ ಕಾರಣವಾಗಿದೆ. ಸಭೆಯಲ್ಲಿ ಇತರೆ ರಾಜ್ಯಗಳ ನಾಯಕರು ಭಾಗಿಯಾಗಿದ್ದರೂ ಕೂಡ ಹೈಕಮಾಂಡ್ ಕರ್ನಾಟಕದ ಬಗ್ಗೆ ಹೆಚ್ಚು ಆಸಕ್ತಿ ವಹಿಸಿದ್ದು ವಿಶೇಷ ಎನಿಸಿದೆ.

ಮತ್ತೊಂದು ಗಮನಿಸಬೇಕಾದ ವಿಚಾರ ಅಂದ್ರೆ ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿದಿರೋ ಏಕೈಕ ರಾಜ್ಯ ಅಂದ್ರೆ ಅದು ಕರ್ನಾಟಕ. ಆದ್ರೆ ಮುಖ್ಯಮಂತ್ರಿ ಸ್ಥಾನದಲ್ಲಿದ್ದ ಬಿ.ಎಸ್ ಯಡಿಯೂರಪ್ಪರನ್ನ ಬಿಜೆಪಿ ಹೈಕಮಾಂಡ್ ಏಕಾಏಕಿ ಕೆಳಗಿಳಿಸಿತ್ತು. ಬಳಿಕ ಬಸವರಾಜ ಬೊಮ್ಮಾಯಿಯವರಿಗೆ ಅಧಿಕಾರ ನೀಡಲಾಗಿತ್ತು. ಕರ್ನಾಟಕ ರಾಜಕಾರಣದಲ್ಲಿ ಲಿಂಗಾಯತ ಸಮುದಾಯ ಬಹುಮುಖ್ಯ ಪಾತ್ರ ವಹಿಸುತ್ತೆ. ಲಿಂಗಾಯತ ಸಮುದಾಯಕ್ಕೆ ಸೇರಿರುವ ಬಿ.ಎಸ್ ಯಡಿಯೂರಪ್ಪರಿಗೆ ರಾಜ್ಯದಲ್ಲಿ ಅಪಾರ ಬೆಂಬಲ ಇದೆ. ಕಾಂಗ್ರೆಸ್ ಪಕ್ಷ ಕೂಡ ಕರ್ನಾಟಕದಲ್ಲಿ ಪ್ರಬಲವಾಗಿದೆ. ಈ ಎಲ್ಲಾ ಕಾರಣಗಳಿಂದ ಬಿಜೆಪಿ ಹೈಕಮಾಂಡ್ ಬಿಎಸ್​ವೈಗೆ ಹೆಚ್ಚು ಮಣೆ ಹಾಕುತ್ತಿದೆ. ಕರ್ನಾಟಕ ವಿಧಾನಸಭಾ ಚುನಾವಣೆ ಗೆಲುವು ಬಿಜೆಪಿ ಪಾಲಿಗೆ ಪ್ರತಿಷ್ಠೆಯಾಗಿದ್ದು, ಪ್ರಧಾನಿ ಕೂಡ ಬಿಎಸ್​ವೈ ಜೊತೆ ಇದನ್ನೇ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

suddiyaana